ನಾಳೆ ಬೆಂಗಳೂರಿನ ಹಲೆವೆಡೆ ಪವರ್ ಕಟ್, ಸಾರ್ವಜನಿಕರಿಗೆ ಮಹತ್ವದ ಸೂಚನೆ ,ತ್ರೈಮಾಸಿಕ ನಿರ್ವಹಣಾ ಕೆಲಸ ಕಾರಣ ವಿದ್ಯುತ್ ಕಡಿತ ಮಾಡಲಾಗುತ್ತಿದೆ. ಎಷ್ಟು ಗಂಟೆ, ಎಲ್ಲಿಲ್ಲಿ ವಿದ್ಯುತ್ ಕಡಿತ?
ಬೆಂಗಳೂರು (ಡಿ.21) ಬೆಂಗಳೂರಿನ ಹಲೆವೆಡೆ ನಾಳೆ ವಿದ್ಯುತ್ ವ್ಯತ್ಯಯವಾಗುತ್ತಿದೆ. ಈ ಕುರಿತು ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ(ಕೆಪಿಟಿಸಿಎಲ್) ಸಾರ್ವಜನಿಕರಿಗೆ ಮಹತ್ವದ ಪ್ರಕಟಣೆ ಹೊರಡಿಸಿದೆ. ನಾಳೆ (ಡಿ.22) ಬೆಳಗ್ಗೆಯಿಂದ ಸಂಜೆ ವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಬೆಸ್ಕಾಂ ಹೇಳಿದೆ. 66/11KV ಕಂಬೀಪುರ” ಸ್ಟೇಷನ್ ನಲ್ಲಿ ತ್ರೈಮಾಸಿಕ ನಿರ್ವಹಣಾ ಕೆಲಸ ಹಿನ್ನೆಲೆಯಲ್ಲಿ ವಿದ್ಯುತ್ ಕಡಿತ ಮಾಡಲಾಗುತ್ತಿದೆ ಎಂದಿದೆ. ನಾಳೆ ಬೆಳಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆ ವರೆಗೆ ವಿದ್ಯುತ್ ಕಡಿತಗೊಳ್ಳಲಿದೆ.
ಎಲ್ಲೆಲ್ಲಿ ವಿದ್ಯತ್ ಕಡಿತ?
ಬೆಂಗಳೂರಿನ ಕೆಲ ಭಾಗದಲ್ಲಿ ವಿದ್ಯುತ್ ಕಡಿತಗೊಳ್ಳುತ್ತಿದೆ. ಈ ಪೈಕಿ ಪ್ರಮುಖವಾಗಿ ಕಂಬೀಪುರ, ಕಾರುಬೆಲೆ,ಎಚ್.ಗೊಲ್ಲಹಳ್ಳಿ, ಕಾಟನಾಯಕನಪುರ, ವರಹಸಂದ್ರ, ಸ್ವಾಮೀಜಿನಗರ, ಅಂಚೆಪಾಳ್ಯ, ಅಪ್ರಮೇಯನಗರ, ಕೃಷ್ಣ ಟೆಂಪಲ್ ಸರ್ಕಾರಿ ಶಾಲೆ, ಪ್ರಾವಿಡೆಂಡ್ ಅಪಾರ್ಟ್ಮೆಂಟ್, ವಿ.ಬಿ.ಹೆಚ್.ಸಿ ಅವಾಟೋಮೆಂಟೋ, ಗುಡ್ಅರ್ಥ್, ಶ್ರೀನಿಧಿ ಗ್ರೀನ್ ಲೇಔಟ್, ದೇವಗೆರೆ,ಆನೆಪಾಳ್ಯ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ಕಡಿತಗೊಳ್ಳಲಿದೆ.
ಸಾರ್ವಜನಿಕರು ಸಹಕರಿಸಬೇಕಾಗಿ ಮನವಿ
ಈ ಭಾಗದ ಜನರು ಪವರ್ ಸಂಬಂಧಿತ ತಮ್ಮ ಕೆಲಸಕಾರ್ಯಗಳನ್ನು ನಿಗಿದಿತ ಸಮಯಲ್ಲಿ ಮುಗಿಸಲುಕೆಪಿಟಿಸಿಎಲ್ ಮನವಿ ಮಾಡಿದೆ. ಕಾಮಗಾರಿ ಹಿನ್ನಲೆಯಲ್ಲಿ ಸಾರ್ವಜನಕರಿಗೆ ಸಮಸ್ಯೆಗಳು ಆಗಲಿವೆ. ಸುರಕ್ಷಿತ ಹಾಗೂ ತಡೆ ರಹಿತ ವಿದ್ಯುತ್ ಸೇವೆಗಾಗಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಮಾಡಲಾಗುತ್ತಿದೆ. ಹೀಗಾಗಿ ಸಾರ್ವಜನಿಕರು ದಯವಿಟ್ಟು ಸಹಕರಿಸಬೇಕಾಗಿ ಬೆಸ್ಕಾಂ ವಿನಂತಿ ಮಾಡಿದೆ.
ಇತ್ತೀಚೆಗೆ 220/66/11 ಕೆವಿ ಸೋಮನಹಳ್ಳಿ ಉಪಕೇಂದ್ರ ವ್ಯಾಪ್ತಿಯಲ್ಲಿ ನಿರ್ವಹಣಾ ಕಾಮಾಗಾರಿ ಮಾಡಲಾಗಿತ್ತು. ಈ ವೇಳೆ ಬೆಳಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆ ವರೆಗೆ ಉಪಕೇಂದ್ರ ವ್ಯಾಪ್ತಿಯಲ್ಲಿ ಬರವು ಬಹುತೇಕ ಕಡೆಗಳಲ್ಲಿ ವಿದ್ಯುತ್ ವ್ಯತ್ಯಯವಾಗಿತ್ತು. ಬೆಂಗಳೂರು ಹಾಗೂ ಬೆಂಗಳೂರಿನ ಹೊರವಲಯದಲ್ಲಿ ಕೆಪಿಟಿಸಿಎಲ್ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಕೈಗೆತ್ತಿಕೊಂಡಿದೆ. ಹೀಗಾಗಿ ಹಂತ ಹಂತವಾಗಿ ಕಾಮಗಾರಿ ಮಾಡಲಾಗುತ್ತಿದೆ. ಇದರಿಂದ ಕಾಮಗಾರಿ ನಡೆಯುವ ಆಯಾ ಭಾಗದಲ್ಲಿ ವಿದ್ಯುತ್ ವ್ಯತ್ಯವಾಗಲಿದೆ.


