ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಪಾಲಾಗಿರುವ ನಟ ದರ್ಶನ್ ತೂಗುದೀಪ, ಇದೀಗ ಮತ್ತೊಮ್ಮೆ ಜಾಮೀನು ಕೋರಿ ಸುಪ್ರೀಂಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ.  ಈ ಪ್ರಕರಣದಲ್ಲಿ ಇದುವರೆಗೆ ದರ್ಶನ್ ಎಷ್ಟನೇ ಬಾರಿ ಜಾಮೀನಿಗೆ ಅರ್ಜಿ ಸಲ್ಲಿಸಿದ್ದಾರೆ ಎಂಬ ಡಿಟೇಲ್ ಇಲ್ಲಿದೆ.

ಮತ್ತೆ ಸುಪ್ರೀಂ ಮೊರೆ ಹೋದ ನಟ ದರ್ಶನ್:

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಪಾಲಾಗಿರುವ ನಟ ಆರೋಪಿ ದರ್ಶನ್ ತೂಗುದೀಪ ಅವರು ಇಂದು ಜಾಮೀನು ಕೋರಿ ಸುಪ್ರೀಂಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ ಎಂಬ ಮಾಹಿತಿ ಬಂದಿದೆ. ವಕೀಲ ರಂಜಿತ್ ರೋಹ್ಟಗಿ ಅವರ ಮೂಲಕ ದರ್ಶನ್ ಅವರು ಇಂದು ಸುಪ್ರೀಂಕೋರ್ಟ್‌ಗೆ ಜಾಮೀನಿಗಾಗಿ ಅರ್ಜಿ ಸಲ್ಲಿಸಿದ್ದಾರೆ ಎಂಬ ಮಾಹಿತಿ ಇದೆ. ಹಾಗಿದ್ದರೆ ಈ ಪ್ರಕರಣದಲ್ಲಿ ದರ್ಶನ್ ಎಷ್ಟು ಬಾರಿ ಜಾಮೀನಿಗೆ ಅರ್ಜಿ ಸಲ್ಲಿಸಿದ್ದಾರೆ ಎಂಬ ಮಾಹಿತಿ ಇಲ್ಲಿದೆ.

ಮತ್ತೆ ಸುಪ್ರೀಂ ಕದ ತಟ್ಟಿದ ದರ್ಶನ್; ಮೇ 4ಕ್ಕೆ ಭವಿಷ್ಯ ನಿರ್ಧಾರ!

ರೇಣುಕಾಸ್ವಾಮಿ ಕೊಲೆ ಪ್ರಕರಣ ಸಂಬಂಧ ಜೈಲಿನಲ್ಲಿರುವ ನಟ ದರ್ಶನ್ ತೂಗುದೀಪ ಅವರು ಹಲವು ಬಾರಿ ಜಾಮೀನು ಕೋರಿ ಅರ್ಜಿಗಳನ್ನು ಸಲ್ಲಿಸಿದ್ದಾರೆ. ದರ್ಶನ್ ಅವರನ್ನು 2024 ಜೂನ್‌ 11ರಂದು ಮೊದಲ ಬಾರಿಗೆ ಮೈಸೂರಿನಲ್ಲಿ ಬಂಧಿಸಲಾಗಿತ್ತು. ಮೈಸೂರಿನ ಜಿಮ್‌ನಲ್ಲಿ ಬಂಧಿಸಿ ವಿಚಾರಣೆಗಾಗಿ ಬೆಂಗಳೂರಿಗೆ ಕರೆತರಲಾಗಿತ್ತು. 2024ರ ಆಕ್ಟೋಬರ್ ತಿಂಗಳಲ್ಲಿ ಅವರು ವೈದ್ಯಕೀಯ ಕಾರಣ ನೀಡಿ ಮಧ್ಯಂತರ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು. ನಂತರ ಅವರಿಗೆ ಡಿಸೆಂಬರ್‌ 2024ರಲ್ಲಿ ಜಾಮೀನು ಸಿಕ್ಕಿತ್ತು. 

ಆದರೆ ಇದನ್ನು ರಾಜ್ಯ ಸರ್ಕಾರ ಡಿಸೆಂಬರ್‌ನಲ್ಲೇ ಪ್ರಶ್ನೆ ಮಾಡಿದ್ದರಿಂದ 2025ರಲ್ಲಿ ಸುಪ್ರೀಂ ಕೋರ್ಟ್ ಜಾಮೀನು ರದ್ದುಗೊಳಿಸಿತ್ತು, ಹೀಗಾಗಿ ಅವರು ಮತ್ತೆ ಜೈಲು ಸೇರಿದ್ದರು. ಜಾಮೀನು ಪಡೆದು ಹೊರಗಿದ್ದ ನಟ ದರ್ಶನನ್ನು ಸುಪ್ರೀಂ ಆದೇಶದಂತೆ ಪೊಲೀಸರು 14 ಆಗಸ್ಟ್ 2025ರಂದು ಬಂಧನ ಮಾಡಿ ಪರಪ್ಪನ ಅಗ್ರಹಾರಕ್ಕೆ ಬಿಟ್ಟಿದ್ದರು. ಈ ಸಮಯದಲ್ಲೇ ಅವರು ತಮ್ಮ ಡೆವಿಲ್ ಸಿನಿಮಾ ಶೂಟಿಂಗ್ ಕಂಪ್ಲೀಟ್ ಮಾಡಿದ್ದರು.

ಪರಪ್ಪನ ಅಗ್ರಹಾರದಿಂದ ಹೊರಬರಲು ದರ್ಶನ್ ಕಸರತ್ತು

ಆದರೆ ಈಗ ಮತ್ತೆ ಸುಪ್ರೀಂಕೋರ್ಟ್‌ಗೆ ಜಾಮೀನು ಕೋರಿ ದರ್ಶನ್ ಅರ್ಜಿ ಸಲ್ಲಿಸಿದ್ದಾರೆ. ಬಳ್ಳಾರಿ ಜೈಲಿನಲ್ಲಿದ್ದಾಗ ದರ್ಶನ್‌ಗೆ ಜಾಮೀನು ಸಿಕ್ಕಿತ್ತು. ಇದಾದ ಬಳಿಕ ಜಾಮೀನು ರದ್ದಾದ ಹಿನ್ನೆಲೆ ಮತ್ತೆ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲು ಸೇರುವಂತಾಗಿತ್ತು. ಪರಪ್ಪನ ಅಗ್ರಹಾರ ಸೇರಿ ಸುಮಾರು ಎಂಟೂವರೆ ತಿಂಗಳಾಗಿದ್ದು,ಇದೀಗ ಜಾಮೀನಿಗಾಗಿ ವಕೀಲ ರಂಜಿತ್ ರೋಹಟಗಿ ಮೂಲಕ ಸುಪ್ರೀಂಕೋರ್ಟ್‌ಗೆ ದರ್ಶನ್ ರಿಟ್ ಅರ್ಜಿ ಸಲ್ಲಿಸಿದ್ದಾರೆ. ಮೇ 4ರಂದು ದರ್ಶನ್ ಸಲ್ಲಿಕೆ ಮಾಡಿರುವ ಅರ್ಜಿ ವಿಚಾರಣೆಗೆ ಬರಲಿದೆ. ಅರ್ಜಿಯಲ್ಲಿ ಜಾಮೀನಿಗಾಗಿ ಮಾಡಿರುವ ಮನವಿ ಅಂಶಗಳು ಇನ್ನಷ್ಟೇ ಹೊರ ಬರಬೇಕಿದೆ.

ಇದನ್ನೂ ಓದಿ: ಸೋಶಿಯಲ್ ಮೀಡಿಯಾದಲ್ಲಿ ತನ್ನ ಮೊದಲ ಸ್ಯಾಲರಿ ಸಿಪ್ ತೋರಿಸಿದ ಬ್ಯಾಂಕ್ ಆಫ್ ಬರೋಡಾ ಪ್ರೊಬೇಷನರಿ ಅಧಿಕಾರಿ: ಆಮೇಲೇನಾಯ್ತು?