ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ ನಿರ್ಣಾಯಕ ಮೂರನೇ ಏಕದಿನ ಪಂದ್ಯದಲ್ಲಿ, ಟೀಂ ಇಂಡಿಯಾ ನಾಯಕ ಕೆ ಎಲ್ ರಾಹುಲ್ ಟಾಸ್ ಗೆದ್ದು ಬೌಲಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ. 20 ಪಂದ್ಯಗಳ ನಂತರ ಭಾರತ ಟಾಸ್ ಗೆದ್ದಿದ್ದು, ತಂಡದಲ್ಲಿ ತಿಲಕ್ ವರ್ಮಾಗೆ ಅವಕಾಶ ನೀಡಲಾಗಿದೆ.

ಅಹಮದಾಬಾದ್‌: ಭಾರತ ಹಾಗೂ ದಕ್ಷಿಣ ಆಫ್ರಿಕಾ ನಡುವಿನ ಮೂರನೇ ಹಾಗೂ ನಿರ್ಣಾಯಕ ಏಕದಿನ ಪಂದ್ಯದಲ್ಲಿ ಟಾಸ್ ಗೆದ್ದ ಟೀಂ ಇಂಡಿಯಾ ನಾಯಕ ಕೆ ಎಲ್ ರಾಹುಲ್ ಮೊದಲು ಬೌಲಿಂಗ್ ಮಾಡುವ ತೀರ್ಮಾನ ತೆಗೆದುಕೊಂಡಿದ್ದಾರೆ. ಸದ್ಯ ಮೂರು ಪಂದ್ಯಗಳ ಏಕದಿನ ಸರಣಿಯಲ್ಲಿ ತಲಾ 1-1ರ ಸಮಬಲ ಸಾಧಿಸಿವೆ.

20 ಪಂದ್ಯಗಳ ಬಳಿಕ ಟಾಸ್ ಗೆದ್ದ ಟೀಂ ಇಂಡಿಯಾ!

2023ರ ಐಸಿಸಿ ಏಕದಿನ ವಿಶ್ವಕಪ್ ಫೈನಲ್‌ ಬಳಿಕ ಟೀಂ ಇಂಡಿಯಾ ಆಡಿದ ಕಳೆದ 20 ಏಕದಿನ ಪಂದ್ಯಗಳಲ್ಲಿ ಸತತವಾಗಿ ಟಾಸ್ ಸೋಲುತ್ತಾ ಬಂದಿತ್ತು. ಇದೀಗ ಬರೋಬ್ಬರಿ 20 ಪಂದ್ಯಗಳ ಬಳಿಕ ಏಕದಿನ ಕ್ರಿಕೆಟ್‌ನಲ್ಲಿ ಟೀಂ ಇಂಡಿಯಾ ಟಾಸ್ ಗೆಲ್ಲುವಲ್ಲಿ ಯಶಸ್ವಿಯಾಗಿದೆ.

Scroll to load tweet…

ಭಾರತ ತಂಡದಲ್ಲಿ ಒಂದು ಬದಲಾವಣೆ:

ಇನ್ನು ಭಾರತ ತಂಡವು ನಿರ್ಣಾಯಕ ಪಂದ್ಯಗಳಲ್ಲಿ ಒಂದು ಮಹತ್ವದ ಬದಲಾವಣೆಗಳೊಂದಿಗೆ ಕಣಕ್ಕಿಳಿದಿದೆ. ವಾಷಿಂಗ್ಟನ್ ಸುಂದರ್ ಬದಲಿಗೆ ತಿಲಕ್ ವರ್ಮಾ ಭಾರತ ಆಡುವ ಹನ್ನೊಂದರ ಬಳಗ ಕೂಡಿಕೊಂಡಿದ್ದಾರೆ. ಆಲ್ರೌಂಡರ್ ಸುಂದರ್ ಬದಲಿಗೆ ಬ್ಯಾಟರ್ ತಿಲಕ್ ವರ್ಮಾಗೆ ಮಣೆ ಹಾಕಲಾಗಿದೆ.

ದಕ್ಷಿಣ ಆಫ್ರಿಕಾ ತಂಡದಲ್ಲಿ ಎರಡು ಬದಲಾವಣೆ:

ಗಾಯಗೊಂಡಿರುವ ನಂದ್ರೆ ಬರ್ಗರ್ ಮತ್ತು ಜೋರ್ಜಿಗೆ ಬದಲಾಗಿ ಬಾರ್ಟ್‌ಮನ್ ಮತ್ತು ರಿಯಾನ್ ರಿಕೆಲ್ಟನ್ ಆಡುವ ಬಳಗದಲ್ಲಿ ಸ್ಥಾನ ಪಡೆದಿದ್ದಾರೆ. ಜೋರ್ಜಿ ಹಾಗೂ ನಂದ್ರೆ ಬರ್ಗರ್ ಎರಡನೇ ಏಕದಿನ ಪಂದ್ಯದ ವೇಳೆ ಗಾಯಗೊಂಡಿದ್ದರು.

ಉಭಯ ತಂಡಗಳ ಆಟಗಾರರ ಪಟ್ಟಿ:

ಭಾರತ: ಯಶಸ್ವಿ ಜೈಸ್ವಾಲ್, ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ಋತುರಾಜ್ ಗಾಯಕ್ವಾಡ್, ತಿಲಕ್ ವರ್ಮಾ, ಕೆ ಎಲ್ ರಾಹುಲ್(ನಾಯಕ& ವಿಕೆಟ್ ಕೀಪರ್), ರವೀಂದ್ರ ಜಡೇಜಾ, ಹರ್ಷಿತ್ ರಾಣಾ, ಕುಲ್ದೀಪ್ ಯಾದವ್, ಅರ್ಶದೀಪ್ ಸಿಂಗ್, ಪ್ರಸಿದ್ದ್ ಕೃಷ್ಣ.

ದಕ್ಷಿಣ ಆಫ್ರಿಕಾ: ರಿಯಾನ್ ರಿಕಲ್ಟನ್, ಕ್ವಿಂಟನ್ ಡಿ ಕಾಕ್(ವಿಕೆಟ್ ಕೀಪರ್), ತೆಂಬಾ ಬವುಮಾ(ನಾಯಕ), ಮ್ಯಾಥ್ಯೂ ಬ್ರೆಟ್‌ಕೀ, ಏಯ್ಡನ್ ಮಾರ್ಕ್‌ರಮ್, ಡೆವಾಲ್ಡ್ ಬ್ರೆವೀಸ್, ಮಾರ್ಕೊ ಯಾನ್ಸನ್, ಕಾರ್ಬಿನ್ ಬಾಶ್, ಕೇಶವ್ ಮಹರಾಜ್, ಲುಂಗಿ ಎಂಗಿಡಿ, ಒಟ್ಟೆನೀಲ್ ಬಾರ್ಟ್‌ಮನ್

ಪಂದ್ಯ ಆರಂಭ: ಮಧ್ಯಾಹ್ನ 1.30ಕ್ಕೆ

ನೇರಪ್ರಸಾರ: ಸ್ಟಾರ್‌ಸ್ಪೋರ್ಟ್ಸ್‌, ಜಿಯೋಹಾಟ್‌ಸ್ಟಾರ್‌