BBM Student Devi Shree Murdered: ಬೆಂಗಳೂರಿನ ತಮ್ಮೇನಹಳ್ಳಿಯಲ್ಲಿ ಆಂಧ್ರ ಮೂಲದ ಬಿಬಿಎಂ ವಿದ್ಯಾರ್ಥಿನಿ ದೇವಿಶ್ರೀಯನ್ನು ಆಕೆಯ ಸ್ನೇಹಿತ ಪ್ರೇಮ್ ವರ್ಧನ್ ಕೊಲೆ ಮಾಡಿದ್ದಾನೆ. ಕೊಲೆ ಬಳಿಕ ಆರೋಪಿ ತಲೆಮರೆಸಿಕೊಂಡಿದ್ದು, ಮಾದನಾಯಕನಹಳ್ಳಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

ಬೆಂಗಳೂರು (ನ.24): ಬೆಂಗಳೂರು ಉತ್ತರ ವಲಯದ ಮಾದನಾಯಕನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ತಮ್ಮೇನಹಳ್ಳಿ ಎಂಬಲ್ಲಿ ಆಂಧ್ರ ಮೂಲದ ಬಿಬಿಎಂ ವಿದ್ಯಾರ್ಥಿನಿಯೊಬ್ಬಳನ್ನು ಆಕೆಯ ಸ್ನೇಹಿತನೇ ಭೀಕರವಾಗಿ ಕೊಲೆ ಮಾಡಿರುವ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ.

ಕೊಲೆಯಾದ ಯುವತಿಯನ್ನು ಆಂಧ್ರ ಮೂಲದ, ದೇವಿಶ್ರೀ(21) ಎಂದು ಗುರುತಿಸಲಾಗಿದೆ. ಈಕೆ ಬೆಂಗಳೂರಿನ ಪ್ರತಿಷ್ಠಿತ ಕಾಲೇಜಿನಲ್ಲಿ ಬಿಬಿಎಂ ವ್ಯಾಸಾಂಗ ಮಾಡುತ್ತಿದ್ದಳು.

ನಿನ್ನೆ ಸ್ನೇಹಿತನ ಹಿಂದೆ ಹೋಗಿದ್ದ ದೇವಿಶ್ರೀ:

​ನಿನ್ನೆ ಬೆಳಿಗ್ಗೆ, ಯುವತಿ ತನ್ನ ಸ್ನೇಹಿತನೆಂದು ಹೇಳಲಾದ ಪ್ರೇಮ್ ವರ್ಧನ್ ಎಂಬಾತನ ಜೊತೆ ಇನ್ನೊಬ್ಬ ಸ್ನೇಹಿತೆಯ ರೂಮಿಗೆ ತೆರಳಿದ್ದಳು. ಅಲ್ಲಿ ಆಕೆಯ ಸ್ನೇಹಿತ ಪ್ರೇಮ್ ವರ್ಧನ್ ಯುವತಿಯನ್ನು ಕೊಲೆ ಮಾಡಿ, ತಾನೊಬ್ಬನೇ ಸ್ಥಳದಿಂದ ವಾಪಸ್ಸಾಗಿದ್ದಾನೆ. ಇಂದು ಬೆಳಿಗ್ಗೆ ಘಟನೆ ಬೆಳಕಿಗೆ ಬಂದಿದ್ದು, ತಕ್ಷಣವೇ ಪೊಲೀಸರಿಗೆ ಮಾಹಿತಿ ನೀಡಿರುವ ಮನೆಯವರು. ಬಳಿಕ ಸ್ಥಳಕ್ಕೆ ಪೊಲೀಸರು ಪರಿಶೀಲನೆ ನಡೆಸಿದ್ದಾರೆ. ​

ಕೊಲೆ ಬಳಿಕ ತಲೆಮರೆಸಿಕೊಂಡಿರುವ ಆರೋಪಿ

ಈ ಸಂಬಂಧ ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ. ಸದ್ಯ ಕೊಲೆ ಮಾಡಿ ತಲೆಮರೆಸಿಕೊಂಡಿರುವ ಆರೋಪಿ ಪ್ರೇಮ್ ವರ್ಧನ್‌ಗಾಗಿ ಪೊಲೀಸರು ತೀವ್ರ ಶೋಧ ಕಾರ್ಯ ನಡೆಸುತ್ತಿದ್ದಾರೆ. ಯುವತಿಯ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ವಿಕ್ಟೋರಿಯಾ ಆಸ್ಪತ್ರೆಗೆ ರವಾನಿಸಲಾಗಿದ್ದು, ಕೊಲೆಗೆ ನಿಖರ ಕಾರಣ ಏನು ಎಂಬ ಬಗ್ಗೆ ಪೊಲೀಸರು ತನಿಖೆ ಮುಂದುವರೆಸಿದ್ದಾರೆ