ರಾಯಚೂರು ಜಿಲ್ಲೆಯ ಸಿಂಧನೂರು ಬಳಿ ನಡೆದ ರಸ್ತೆ ಅಪಘಾತದಲ್ಲಿ ಉಪನ್ಯಾಸಕಿಯೊಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮದುವೆ ಮುಗಿಸಿ ವಾಪಸಾಗುತ್ತಿದ್ದಾಗ ಹುಲ್ಲು ತುಂಬಿದ ಟ್ರ್ಯಾಕ್ಟರ್‌ಗೆ ಅವರ ಕಾರು ಡಿಕ್ಕಿ ಹೊಡೆದಿದ್ದು, ಪತಿ ಮತ್ತು ಮಕ್ಕಳು ಗಾಯಗೊಂಡಿದ್ದಾರೆ.
ರಾಯಚೂರು (ನ.30): ರಾಯಚೂರು ಜಿಲ್ಲೆಯ ಸಿಂಧನೂರು ತಾಲ್ಲೂಕಿನ ಕಲಮಂಗಿ ಬಳಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಉಪನ್ಯಾಸಕಿಯೊಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು, ಅವರ ಪತಿ ಮತ್ತು ಇಬ್ಬರು ಮಕ್ಕಳು ಗಾಯಗೊಂಡಿದ್ದಾರೆ.
ಹುಲ್ಲು ತುಂಬಿದ ಟ್ರ್ಯಾಕ್ಟರ್‌ಗೆ ಕಾರು ಡಿಕ್ಕಿ:
ಸಿಂಧನೂರು ತಾಲ್ಲೂಕಿನ ಕಲಮಂಗಿ ಬಳಿ ಭಾನುವಾರ ಈ ದುರ್ಘಟನೆ ಸಂಭವಿಸಿದೆ. ಮೃತರನ್ನು ತಾವರಗೇರಾ ಶಶಿಧರ್ ಪದವಿಪೂರ್ವ ಕಾಲೇಜಿನ ಉಪನ್ಯಾಸಕಿ ಅಕ್ಕಮಹಾದೇವಿ (36) ಎಂದು ಗುರುತಿಸಲಾಗಿದೆ.
ಹುಲ್ಲು ತುಂಬಿದ್ದ ಟ್ರಾಕ್ಟರ್‌ಗೆ ಕಾರು ನೇರವಾಗಿ ಡಿಕ್ಕಿ ಹೊಡೆದ ಪರಿಣಾಮ ಈ ಅಪಘಾತ ಸಂಭವಿಸಿದೆ. ಉಪನ್ಯಾಸಕಿ ಅಕ್ಕಮಹಾದೇವಿಯವರು ತಮ್ಮ ಸಂಬಂಧಿಕರ ವಿವಾಹ ಸಮಾರಂಭವೊಂದಕ್ಕೆ ಹಾಜರಾಗಿ, ವಾಪಸ್ ಮನೆಗೆ ತೆರಳುತ್ತಿದ್ದಾಗ ಈ ದುರಂತ ಸಂಭವಿಸಿದೆ ಎನ್ನಲಾಗಿದೆ.
ಪತಿ, ಮಕ್ಕಳಿಗೆ ಗಾಯ
ಅಪಘಾತದಲ್ಲಿ ಉಪನ್ಯಾಸಕಿ ಅಕ್ಕಮಹಾದೇವಿಯವರು ಸ್ಥಳದಲ್ಲೇ ಮೃತಪಟ್ಟರೆ, ಕಾರಿನಲ್ಲಿದ್ದ ಅವರ ಪತಿ ಮತ್ತು ಇಬ್ಬರು ಮಕ್ಕಳು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ತಕ್ಷಣವೇ ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಈ ಸಂಬಂಧ ತುರ್ವಿಹಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಅಪಘಾತದ ಬಗ್ಗೆ ತನಿಖೆ ತನಿಖೆ ನಡೆಸುತ್ತಿದ್ದಾರೆ.


