ಕೆಆರ್ ಪೇಟೆ ತಾಲೂಕಿನ ದೊಡ್ಡಸೋಮನಹಳ್ಳಿ ಗ್ರಾಮದ ಬಾವಿಯೊಂದರಲ್ಲಿ ಚಿಕ್ಕಮಗಳೂರು ಮೂಲದ 22 ವರ್ಷದ ಇಂಜಿನಿಯರಿಂಗ್ ವಿದ್ಯಾರ್ಥಿ ಕರಣ್ ಅವರ ಮೃತದೇಹ ಪತ್ತೆಯಾಗಿದೆ. ಶವದ ಬಳಿ ಬೈಕ್ ಮತ್ತು ಮೊಬೈಲ್ ಪತ್ತೆಯಾಗಿದ್ದು, ಇದು ಆತ್ಮ೧ಹತ್ಯೆಯೋ ಕೊಲೆಯೋ ಎಂಬ ಸಂಶಯ ಮೂಡಿಸಿದೆ. 

ಮಂಡ್ಯ (ನ.23): ಜಿಲ್ಲೆಯ ಕೆಆರ್ ಪೇಟೆ ತಾಲೂಕಿನ ದೊಡ್ಡಸೋಮನಹಳ್ಳಿ ಗ್ರಾಮದಲ್ಲಿ ಬಾವಿಯೊಂದರಲ್ಲಿ 22 ವರ್ಷದ ಇಂಜಿನಿಯರಿಂಗ್ ವಿದ್ಯಾರ್ಥಿಯ ಮೃತದೇಹ ಪತ್ತೆಯಾಗಿದ್ದು, ಆತಂಕ ಮೂಡಿಸಿದೆ. ಮೃತ ವಿದ್ಯಾರ್ಥಿಯನ್ನು ಚಿಕ್ಕಮಗಳೂರು ಮೂಲದ ಕರಣ್.ಎಸ್ (22) ಎಂದು ಗುರುತಿಸಲಾಗಿದೆ.

ಆತ್ಮಹ೧ಹತ್ಯೆಯೋ, ಕೊಲೆಯೋ?

​ಕರಣ್ ಅವರು ಶ್ರವಣಬೆಳಗೊಳದ ಇಂಜಿನಿಯರಿಂಗ್ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದರು ಎನ್ನಲಾಗಿದೆ. ವಿದ್ಯಾರ್ಥಿಯ ಮೃತದೇಹ ಪತ್ತೆಯಾದ ಬಾವಿಯ ಸಮೀಪದಲ್ಲೇ ಬೈಕ್ ಮತ್ತು ಮೊಬೈಲ್ ಸಹ ಅನುಮಾನಾಸ್ಪದ ಸ್ಥಿತಿಯಲ್ಲಿ ಪತ್ತೆಯಾಗಿವೆ. ಈ ಘಟನೆಯು ಹಲವು ಸಂಶಯಗಳಿಗೆ ಕಾರಣವಾಗಿದೆ.

ಸ್ಥಳಕ್ಕೆ ಪೊಲೀಸರ ಆಗಮನ;

​ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿಗಳು ತಕ್ಷಣ ಕಾರ್ಯಾಚರಣೆ ನಡೆಸಿ ಬಾವಿಯಿಂದ ಮೃತದೇಹವನ್ನು ಮೇಲಕ್ಕೆತ್ತಿದರು. ನಂತರ ಮರಣೋತ್ತರ ಪರೀಕ್ಷೆಗಾಗಿ ಶವವನ್ನು ಆಸ್ಪತ್ರೆಗೆ ರವಾನಿಸಲಾಯಿತು. ಇದು ಆತ್ಮ೧ಹತ್ಯೆಯೇ ಅಥವಾ ಬೇರೆ ಯಾವುದೇ ಕಾರಣವಿದೆಯೇ ಎಂಬ ಬಗ್ಗೆ ಶಂಕೆ ವ್ಯಕ್ತವಾಗಿದೆ. ಈ ಸಂಬಂಧ ಕೆಆರ್ ಪೇಟೆ ಟೌನ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ವಿದ್ಯಾರ್ಥಿಯ ಸಾವಿನ ನಿಖರ ಕಾರಣ ತಿಳಿಯಲು ತನಿಖೆ ಆರಂಭಿಸಿದ್ದಾರೆ.