ಟಾಸ್ ಸೋಲುವುದರಲ್ಲೂ ವಿಶ್ವದಾಖಲೆ ಬರೆದ ಟೀಂ ಇಂಡಿಯಾ! ಇದೆಂಥಾ ಬ್ಯಾಡ್‌ಲಕ್?
ಇಂಗ್ಲೆಂಡ್ ವಿರುದ್ಧದ ನಾಲ್ಕನೇ ಟೆಸ್ಟ್ ಪಂದ್ಯದಲ್ಲಿ ಭಾರತ ಸತತ 14ನೇ ಬಾರಿ ಟಾಸ್ ಸೋತಿದೆ. ಇದರೊಂದಿಗೆ ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಸತತವಾಗಿ ಹೆಚ್ಚು ಬಾರಿ ಟಾಸ್ ಸೋತ ತಂಡ ಎಂಬ ಕೆಟ್ಟ ದಾಖಲೆಗೆ ಭಾರತ ಪಾತ್ರವಾಗಿದೆ.
14

Image Credit : ANI
ಸತತ 14ನೇ ಟಾಸ್ ಸೋಲು
ಇಂಗ್ಲೆಂಡ್ ವಿರುದ್ಧದ ನಾಲ್ಕನೇ ಟೆಸ್ಟ್ ಪಂದ್ಯದ ಮೊದಲ ದಿನ ಭಾರತಕ್ಕೆ ಟಾಸ್ ಒಲಿಯಲಿಲ್ಲ. ಸತತ 14ನೇ ಬಾರಿ ಟಾಸ್ ಸೋತಿದೆ. ಇದರೊಂದಿಗೆ ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಸತತವಾಗಿ ಹೆಚ್ಚು ಬಾರಿ ಟಾಸ್ ಸೋತ ತಂಡ ಎಂಬ ವಿಶ್ವದಾಖಲೆಗೆ ಪಾತ್ರವಾಗಿದೆ.
24
Image Credit : ANI
ಗಿಲ್‌ಗೆ 4ನೇ ಟಾಸ್ ಸೋಲು
ಓಲ್ಡ್ ಟ್ರಾಫರ್ಡ್‌ನಲ್ಲಿ ನಡೆದ ನಾಲ್ಕನೇ ಟೆಸ್ಟ್‌ನಲ್ಲಿ ಗಿಲ್ 4ನೇ ಬಾರಿ ಟಾಸ್ ಸೋತರು. ಇಂಗ್ಲೆಂಡ್ ನಾಯಕ ಸ್ಟೋಕ್ಸ್ ಟಾಸ್ ಗೆದ್ದು ಮೊದಲು ಬೌಲಿಂಗ್ ಆಯ್ಕೆ ಮಾಡಿಕೊಂಡರು.
34
Image Credit : Social Media
0.000061% ಸಾಧ್ಯತೆ
ಜನವರಿ 2025ರ ನಂತರ ಭಾರತ ಟಾಸ್ ಗೆದ್ದಿಲ್ಲ. ಈ ಸೋಲು 16,384 ರಲ್ಲಿ ಒಂದು ಅಥವಾ 0.000061% ಸಾಧ್ಯತೆ ಎಂದು ವಿಸ್ಡನ್ ಹೇಳಿದೆ.
44
Image Credit : Google
14ನೇ ಟಾಸ್ ಸೋಲು
ಭಾರತ ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಸತತ 14 ಪಂದ್ಯಗಳಲ್ಲಿ ಟಾಸ್ ಸೋತಿದೆ. ಇದೊಂದು ವಿಶ್ವ ದಾಖಲೆ. ವಿಂಡೀಸ್ ಸತತ 12 ಟಾಸ್ ಸೋತಿತ್ತು.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.
Latest Videos

