IPL 2026 ಮಿನಿ ಹರಾಜು: 2 ಕೋಟಿ ಮೂಲ ಬೆಲೆ ಹೊಂದಿದ 5 ಸ್ಟಾರ್ ಆಟಗಾರರಿವರು!
ಬೆಂಗಳೂರು: ಬಹುನಿರೀಕ್ಷಿತ 2026ರ ಐಪಿಎಲ್ ಮಿನಿ ಹರಾಜಿಗೆ ದಿನಗಣನೆ ಆರಂಭವಾಗಿದೆ. ಹೀಗಿರುವಾಗಲೇ ಮಿನಿ ಹರಾಜಿನಲ್ಲಿ 2 ಕೋಟಿ ರುಪಾಯಿ ಮೂಲ ಬೆಲೆ ಹೊಂದಿದ ಟಾಪ್ 5 ಆಟಗಾರರು ಯಾರು ಎನ್ನುವುನ್ನು ನೋಡೋಣ ಬನ್ನಿ.

ಐಪಿಎಲ್ ಮಿನಿ ಹರಾಜಿಗೆ ದಿನಗಣನೆ
19ನೇ ಆವೃತ್ತಿಯ ಐಪಿಎಲ್ ಮಿನಿ ಹರಾಜು ಇದೇ ಡಿಸೆಂಬರ್ 16ರಂದು ಅಬುಧಾಬಿಯಲ್ಲಿ ನಡೆಯಲಿದೆ. ಈ ಹರಾಜಿಗೆ ಮೊದಲು ಒಟ್ಟು 1355 ಆಟಗಾರರು ಹೆಸರು ರಿಜಿಸ್ಟರ್ ಮಾಡಿಕೊಂಡಿದ್ದರು.
350 ಆಟಗಾರರು ಶಾರ್ಟ್‌ಲಿಸ್ಟ್
ಈ ಪೈಕಿ ಬಿಸಿಸಿಐ 350 ಅಟಗಾರರ ಹೆಸರನ್ನು ಶಾರ್ಟ್‌ಲಿಸ್ಟ್ ಮಾಡಿದೆ. ಈ ನಡುವೆ 2 ಕೋಟಿ ರುಪಾಯಿ ಮೂಲ ಬೆಲೆ ಹೊಂದಿರುವ ಈ ಐದು ಆಟಗಾರರ ಮೇಲೆ ಎಲ್ಲಾ ಫ್ರಾಂಚೈಸಿಗಳ ಮೇಲೆ ಕಣ್ಣಿದೆ.
1. ಕ್ಯಾಮರೋನ್ ಗ್ರೀನ್
ಆಸ್ಟ್ರೇಲಿಯಾ ಮೂಲದ ಸ್ಟಾರ್ ಆಲ್ರೌಂಡರ್ ಕ್ಯಾಮರೋನ್ ಗ್ರೀನ್ ಅವರ ಮೂಲ ಬೆಲೆ ಎರಡು ಕೋಟಿ ಆಗಿದ್ದು, ಈ ಬಾರಿಯ ಹರಾಜಿನಲ್ಲಿ ದೊಡ್ಡ ಮೊತ್ತಕ್ಕೆ ಬಿಕರಿಯಾಗುವ ನಿರೀಕ್ಷೆಯಿದೆ.
2. ವೆಂಕಟೇಶ್ ಅಯ್ಯರ್
ಕಳೆದ ಐಪಿಎಲ್ ಮೆಗಾ ಹರಾಜಿನಲ್ಲಿ 23.75 ಕೋಟಿ ರುಪಾಯಿಗೆ ಕೋಲ್ಕತಾ ನೈಟ್ ರೈಡರ್ಸ್ ಪಾಲಾಗಿದ್ದ ಭಾರತದ ಆಲ್ರೌಂಡರ್ ವೆಂಕಿಯನ್ನು ಕೆಕೆಆರ್ ಫ್ರಾಂಚೈಸಿ ರಿಲೀಸ್ ಮಾಡಿತ್ತು. ಈಗ ಮತ್ತೆ ವೆಂಕಟೇಶ್ ಅಯ್ಯರ್ ದೊಡ್ಡ ಮೊತ್ತಕ್ಕೆ ಹರಾಜಾಗುವ ನಿರೀಕ್ಷೆಯಿದೆ.
3. ರವಿ ಬಿಷ್ಣೋಯಿ
ಒಂದು ಸಮಯದಲ್ಲಿ ಭಾರತದ ನಂ.1 ಟಿ20 ಶ್ರೇಯಾಂಕಿತ ಬೌಲರ್ ಆಗಿದ್ದ ಬಿಷ್ಣೋಯಿ, ಈ ಬಾರಿಯ ಮೆಗಾ ಹರಾಜಿನಲ್ಲಿ ದೊಡ್ಡ ಮೊತ್ತಕ್ಕೆ ಹರಾಜಾಗುವ ನಿರೀಕ್ಷೆ ಮೂಡಿಸಿದ್ದಾರೆ.
4. ಜೇಮಿ ಸ್ಮಿತ್:
ಇಂಗ್ಲೆಂಡ್ ಮೂಲದ ಪ್ರತಿಭಾನ್ವಿತ ವಿಕೆಟ್ ಕೀಪರ್ ಬ್ಯಾಟರ್ ಜೇಮಿ ಸ್ಮಿತ್ ಮೂಲ ಬೆಲೆ 2 ಕೋಟಿ ರುಪಾಯಿ ಆಗಿದ್ದು, ಈ ಬಾರಿ ಜೇಮಿ ಸ್ಮಿತ್ ಖರೀದಿಸಲು ಫ್ರಾಂಚೈಸಿಗಳ ನಡುವೆ ಪೈಪೋಟಿ ಏರ್ಪಡುವ ನಿರೀಕ್ಷೆಯಿದೆ.
5. ಜೋಶ್ ಇಂಗ್ಲಿಶ್
ಈ ಬಾರಿಯ ಐಪಿಎಲ್ ಬಹುತೇಕ ಪಂದ್ಯಗಳಿಗೆ ಅಲಭ್ಯರಾಗಲಿರುವ ಆಸ್ಟ್ರೇಲಿಯಾ ಮೂಲದ ವಿಕೆಟ್ ಕೀಪರ್ ಬ್ಯಾಟರ್ ಮೇಲೆ ಫ್ರಾಂಚೈಸಿಗಳ ಮೇಲೆ ಕಣ್ಣಿದೆ. ಯಾಕಂದ್ರೆ ಜೋಶ್ ಇಂಗ್ಲಿಶ್ ಏಕಾಂಗಿಯಾಗಿ ಪಂದ್ಯ ಗೆಲ್ಲಿಸುವ ಸಾಮರ್ಥ್ಯ ಹೊಂದಿದ್ದಾರೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

