ಕಾಂತಾರ ಹೀರೋ ರಿಷಬ್ ಶೆಟ್ಟಿ ಫೇವರೇಟ್ ಕ್ರಿಕೆಟಿಗ ಯಾರು? ಗೆಸ್ ಮಾಡಿ
ಬೆಂಗಳೂರು: ದೇಶಾದಾದ್ಯಂತ ಕನ್ನಡದ ಸಿನಿಮಾ ಕಾಂತಾರ ಚಾಪ್ಟರ್-1 ಚಿತ್ರಮಂದಿರಗಳಲ್ಲಿ ತುಂಬಿದ ಪ್ರದರ್ಶನದ ಮೂಲಕ ಗಮನ ಸೆಳೆಯುತ್ತಿದೆ. ಇದೀಗ ಸಂದರ್ಶನವೊಂದರಲ್ಲಿ ಕಾಂತಾರ ಸಿನಿಮಾ ನಟ ರಿಷಬ್ ಶೆಟ್ಟಿ, ತಮ್ಮ ನೆಚ್ಚಿನ ಕ್ರಿಕೆಟಿಗ ಯಾರು ಎನ್ನುವ ಪ್ರಶ್ನೆಗೆ ಉತ್ತರಿಸಿದ್ದಾರೆ.

ಜಾಗತಿಕ ಮಟ್ಟದಲ್ಲಿ ಸದ್ದು ಮಾಡುತ್ತಿರುವ ಕಾಂತಾರ
ರಿಷಬ್ ಶೆಟ್ಟಿ ಕಾಂತಾರ ಚಾಪ್ಟರ್-1 ಸಿನಿಮಾದಲ್ಲೂ ತಮ್ಮ ಅದ್ಭುತ ನಟನೆಯ ಮೂಲಕ ಅಭಿಮಾನಿಗಳ ಮನಗೆಲ್ಲುವಲ್ಲಿ ಯಶಸ್ವಿಯಾಗಿದ್ದಾರೆ. ಇದೀಗ ಕನ್ನಡದ ಸಿನಿಮಾವೊಂದು ಜಾಗತಿಕ ಮಟ್ಟದಲ್ಲಿ ಸದ್ದು ಮಾಡುತ್ತಿರುವುದು ನಿಜಕ್ಕೂ ಹೆಮ್ಮೆಯ ವಿಷಯವಾಗಿದೆ.
ಕಾಂತಾರ ನಟನಿಗೆ ಕ್ರಿಕೆಟ್ ಮೇಲೆ ಒಲವು
ಇನ್ನು ಕಾಂತಾರ ಸಿನಿಮಾ ನಟ ರಿಷಬ್ ಶೆಟ್ಟಿಗೆ ಬಾಲ್ಯದಿಂದಲೂ ಕ್ರಿಕೆಟ್ ಮೇಲೆ ಸಾಕಷ್ಟು ಒಲವಿದೆ ಎಂದು ಈ ಹಿಂದೆ ಸಂದರ್ಶನವೊಂದರಲ್ಲಿ ಹೇಳಿಕೊಂಡಿದ್ದರು.
ಸ್ಟೇಡಿಯಂನಲ್ಲಿ ಆರ್‌ಸಿಬಿ ಮ್ಯಾಚ್ ವೀಕ್ಷಿಸಿದ್ದ ರಿಷಬ್ ಶೆಟ್ಟಿ
ಇನ್ನು ಕಳೆದ ಬಾರಿ ರಿಷಬ್ ಶೆಟ್ಟಿ ಚಿನ್ನಸ್ವಾಮಿ ಸ್ಟೇಡಿಯಂಗೆ ಹೋಗಿ ಆರ್‌ಸಿಬಿ ಮ್ಯಾಚ್ ಕಣ್ತುಂಬಿಕೊಂಡಿದ್ದರು. ಕ್ರಿಸ್ ಗೇಲ್ ಜತೆ ಫೋಟೋ ಕ್ಲಿಕ್ಕಿಸಿಕೊಂಡಿದ್ದರು.
ಕ್ರಿಕೆಟ್ ಅಂದ್ರೆ ಎಲ್ಲಿಲ್ಲದ ಪ್ರೀತಿ
ತುಂಬಾ ಇಂಟ್ರೆಸ್ಟಿಂಗ್ ಸಂಗತಿಯೆಂದರೆ, ರಿಷಬ್ ಶೆಟ್ಟಿ ಅವರ ಕಾರ್‌ನಲ್ಲಿ ಕ್ರಿಕೆಟ್ ಕಿಟ್ ಇರುತ್ತದೆ. ಸಿನಿಮಾ ಶೂಟಿಂಗ್‌ನಲ್ಲಿ ಬಿಡುವು ಸಿಕ್ಕಾಗಲೆಲ್ಲಾ ಕ್ರಿಕೆಟ್ ಆಡುತ್ತಾರಂತೆ.
ಫೇವರೇಟ್ ಕ್ರಿಕೆಟಿಗ ಸೌರವ್ ಗಂಗೂಲಿ
ಇನ್ನು ಸಂದರ್ಶನವೊಂದರಲ್ಲಿ ನಿಮ್ಮ ನೆಚ್ಚಿನ ಕ್ರಿಕೆಟಿಗ ಯಾರು ಎನ್ನುವ ಪ್ರಶ್ನೆಗೆ ರಿಷಬ್ ಶೆಟ್ಟಿ, ಕ್ರಿಕೆಟ್ ದಿಗ್ಗಜ ಸೌರವ್ ಗಂಗೂಲಿ ಹೆಸರು ಹೇಳಿದ್ದಾರೆ. ಗಂಗೂಲಿ ಕೇವಲ ಆಟಗಾರನಾಗಿ ಮಾತ್ರವಲ್ಲ, ವೈಯುಕ್ತಿಕ ಹೀರೋ ಆಗಿಯೂ ತಮಗಿಷ್ಟ ಎಂದು ರಿಷಭ್ ಶೆಟ್ಟಿ ಹೇಳಿದ್ದಾರೆ.
ಗಂಗೂಲಿ ನಾಯಕತ್ವ ಗುಣ ಶೆಟ್ರಿಗೆ ಇಷ್ಟವಂತೆ
ಸೌರವ್ ಗಂಗೂಲಿಯವರ ನಾಯಕತ್ವ ಹಾಗೂ ಆಕ್ರಮಣಕಾರಿ ಮನೋಭಾವ ನನಗೆ ತುಂಬಾ ಇಷ್ಟ. ಇದರಿಂದಲೇ ಭಾರತ ಕ್ರಿಕೆಟ್ ತಂಡದ ದಿಕ್ಕು ಬದಲಾಯಿತು ಎಂದು ರಿಷಬ್ ಶೆಟ್ಟಿ ಅಭಿಪ್ರಾಯಪಟ್ಟಿದ್ದಾರೆ.
ಗಂಗೂಲಿ ಸ್ಪೂರ್ತಿ
ಸೌರವ್ ಗಂಗೂಲಿ ಅವರ ವೃತ್ತಿಬದುಕು ಹಾಗೂ ನೋಡಿಯೇ ತಾವು ಶಿಸ್ತು, ಕೆಲಸದ ಮೇಲಿನ ಬದ್ದತೆ, ಕಠಿಣ ಪರಿಶ್ರಮ ಪಡಲು ಸ್ಪೂರ್ತಿಯಾಯಿತು ಎಂದು ಹೇಳಿದ್ದಾರೆ.
ಗಂಗೂಲಿ ಅಭಿಮಾನಿ ರಿಷಬ್ ಶೆಟ್ಟಿ
ಸೌರವ್ ಗಂಗೂಲಿ ಭಾರತ ಕ್ರಿಕೆಟ್ ತಂಡದ ದಿಗ್ಗಜ ನಾಯಕರಲ್ಲಿ ಒಬ್ಬರೆನಿಸಿಕೊಂಡಿದ್ದಾರೆ. ರಿಷಬ್ ಪಂತ್, ಸೌರವ್ ಗಂಗೂಲಿ ಅಭಿಮಾನಿ ಎನ್ನುವುದು ಬಹುತೇಕ ಮಂದಿಗೆ ಗೊತ್ತಿರಲಿಲ್ಲ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

