- Home
- Sports
- Cricket
- ಕೊನೆಗೂ ಬಯಲಾಯ್ತು ವಿರಾಟ್ ಕೊಹ್ಲಿ ದಿಢೀರ್ ಟೆಸ್ಟ್ ನಿವೃತ್ತಿ ಹಿಂದಿನ ಸತ್ಯ! ಈ ಕಾರಣಕ್ಕೆ ಗುಡ್ ಬೈ ಹೇಳಿದ್ದಂತೆ
ಕೊನೆಗೂ ಬಯಲಾಯ್ತು ವಿರಾಟ್ ಕೊಹ್ಲಿ ದಿಢೀರ್ ಟೆಸ್ಟ್ ನಿವೃತ್ತಿ ಹಿಂದಿನ ಸತ್ಯ! ಈ ಕಾರಣಕ್ಕೆ ಗುಡ್ ಬೈ ಹೇಳಿದ್ದಂತೆ
ಬೆಂಗಳೂರು: ಇಂಗ್ಲೆಂಡ್ ಎದುರಿನ 5 ಪಂದ್ಯಗಳ ಟೆಸ್ಟ್ ಸರಣಿಗೆ ಭಾರತ ತಂಡವನ್ನು ಆಯ್ಕೆ ಮಾಡುವ ಮುನ್ನವೇ ದಿಢೀರ್ ಎನ್ನುವಂತೆ ಟೆಸ್ಟ್ ಕ್ರಿಕೆಟ್ ಮಾದರಿಗೆ ವಿರಾಟ್ ಕೊಹ್ಲಿ ವಿದಾಯ ಘೋಷಿಸಿದ್ರು. ಆದ್ರೆ ಕೊಹ್ಲಿ ಟೆಸ್ಟ್‌ಗೆ ಗುಡ್ ಬೈ ಹೇಳಿದ್ದೇಕೆ ಎನ್ನುವ ಕುತೂಹಲಕ್ಕೆ ತೆರೆ ಬಿದ್ದಿದೆ.

ಟೀಂ ಇಂಡಿಯಾ ರನ್ ಮಷೀನ್ ವಿರಾಟ್ ಕೊಹ್ಲಿ ಪಾಲಿಗೆ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯೇ ಕೊನೆಯ ಟೆಸ್ಟ್ ಎನಿಸಿಕೊಂಡಿತು.
ಇಂಗ್ಲೆಂಡ್ ಎದುರಿನ ಸರಣಿಗೆ ಭಾರತ ತಂಡ ಆಯ್ಕೆ ಮಾಡುವ ಕೆಲವೇ ದಿನಗಳ ಮೊದಲು ವಿರಾಟ್ ಕೊಹ್ಲಿ ಟೆಸ್ಟ್ ಕ್ರಿಕೆಟ್ ಮಾದರಿಗೆ ನಿವೃತ್ತಿ ಘೋಷಿಸಿ ಅಚ್ಚರಿ ಮೂಡಿಸಿದ್ದರು.
ವಿರಾಟ್ ಕೊಹ್ಲಿ ಏನಿಲ್ಲವೆಂದರೂ ಕನಿಷ್ಠ ಮೂರರಿಂದ ನಾಲ್ಕು ವರ್ಷಗಳ ಕಾಲ ಟೆಸ್ಟ್ ಕ್ರಿಕೆಟ್ ಆಡುವಷ್ಟು ಫಿಟ್ನೆಸ್ ಕಾಯ್ದುಕೊಂಡಿದ್ದಾರೆ. ಹೀಗಿದ್ದೂ ಕೊಹ್ಲಿ ಇದುವರೆಗೂ ತಾವು ಟೆಸ್ಟ್‌ಗೆ ದಿಢೀರ್ ಗುಡ್‌ಬೈ ಹೇಳಿದ್ದೇಕೆ ಎನ್ನುವುದರ ಬಗ್ಗೆ ತುಟಿಬಿಚ್ಚಿಲ್ಲ.
ಇದೀಗ ಟೀಂ ಇಂಡಿಯಾ ಮಾಜಿ ಕ್ರಿಕೆಟಿಗ ಮನೋಜ್ ತಿವಾರಿ, ವಿರಾಟ್ ಕೊಹ್ಲಿ ಟೆಸ್ಟ್ ಕ್ರಿಕೆಟ್ ಮಾದರಿಗೆ ದಿಢೀರ್ ವಿದಾಯ ಘೋಷಿಸಿದ್ದೇಕೆ ಎನ್ನುವ ಕುತೂಹಲಕ್ಕೆ ತೆರೆ ಎಳೆದಿದ್ದಾರೆ.
ಅಲ್ಲಿ ಏನಾಗಿದೆ ಎಂದು ನನಗೆ ಗೊತ್ತಿಲ್ಲ. ಪರದೆ ಹಿಂದಿನ ಕಥೆ ಏನು ಅಂತ ಯಾರಿಗೆ ಗೊತ್ತು? ಕೊಹ್ಲಿಗೆ ತಾವು ತಂಡದಲ್ಲಿ ಇರುವುದು ಅಗತ್ಯವಿಲ್ಲ ಎಂದು ಅನಿಸಿರಬೇಕು ಎಂದು ಮನೋಜ್ ತಿವಾರಿ ಹೇಳಿದ್ದಾರೆ.
ಮುಂದುವರೆದು, ವಿರಾಟ್ ಕೊಹ್ಲಿ ಇನ್ನೂ ಮೂರು-ನಾಲ್ಕು ವರ್ಷಗಳ ಕಾಲ ಟೆಸ್ಟ್ ಆಡುವಷ್ಟು ಫಿಟ್ನೆಸ್ ಹೊಂದಿದ್ದಾರೆ. ಸದ್ಯ ಇರುವ ತಂಡದ ವಾತಾವರಣ ಕೊಹ್ಲಿಗೆ ಬಹುಶಃ ಇಷ್ಟವಾಗಿಲ್ಲದಿರಬಹುದು ಎಂದು ಮನೋಜ್ ತಿವಾರಿ ಅಭಿಪ್ರಾಯಪಟ್ಟಿದ್ದಾರೆ.
2011ರಲ್ಲಿ ವೆಸ್ಟ್ ಇಂಡೀಸ್ ವಿರುದ್ದ ಟೆಸ್ಟ್ ಕ್ರಿಕೆಟ್‌ಗೆ ಪಾದಾರ್ಪಣೆ ಮಾಡಿದ ವಿರಾಟ್ ಕೊಹ್ಲಿ, ಭಾರತ ಪರ ಒಟ್ಟು 123 ಟೆಸ್ಟ್ ಪಂದ್ಯಗಳನ್ನಾಡಿದ್ದಾರೆ.
ಒಟ್ಟಾರೆ 210 ಟೆಸ್ಟ್ ಇನ್ನಿಂಗ್ಸ್‌ಗಳನ್ನಾಡಿರುವ ವಿರಾಟ್ ಕೊಹ್ಲಿ, 30 ಶತಕ ಹಾಗೂ 31 ಅರ್ಧಶತಕ ಸಹಿತ ಒಟ್ಟಾರೆ 9230 ರನ್ ಬಾರಿಸಿದ್ದಾರೆ. 254 ರನ್ ಟೆಸ್ಟ್ ಕ್ರಿಕೆಟ್‌ನಲ್ಲಿ ಕೊಹ್ಲಿ ಬಾರಿಸಿದ ಗರಿಷ್ಠ ವೈಯುಕ್ತಿಕ ಸ್ಕೋರ್ ಎನಿಸಿಕೊಂಡಿದೆ.
ಸದ್ಯ ಅಂತಾರಾಷ್ಟ್ರೀಯ ಟಿ20 ಹಾಗೂ ಟೆಸ್ಟ್ ಕ್ರಿಕೆಟ್‌ಗೆ ವಿದಾಯ ಘೋಷಿಸಿರುವ ವಿರಾಟ್ ಕೊಹ್ಲಿ, ಭಾರತ ಪರ ಏಕದಿನ ಕ್ರಿಕೆಟ್ ತಂಡದಲ್ಲಿ ಮುಂದುವರೆಯುತ್ತಿದ್ದಾರೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

