- Home
- Sports
- Cricket
- ಮಾರಣಾಂತಿಕವಾಗಿ ಗಾಯಗೊಂಡಿದ್ದ ಶ್ರೇಯಸ್ ಅಯ್ಯರ್ ಆಸ್ಪತ್ರೆಯಿಂದಲೇ ಮೊದಲ ಮೆಸೇಜ್! ಆರೋಗ್ಯದ ಅಪ್‌ಡೇಟ್ ಔಟ್
ಮಾರಣಾಂತಿಕವಾಗಿ ಗಾಯಗೊಂಡಿದ್ದ ಶ್ರೇಯಸ್ ಅಯ್ಯರ್ ಆಸ್ಪತ್ರೆಯಿಂದಲೇ ಮೊದಲ ಮೆಸೇಜ್! ಆರೋಗ್ಯದ ಅಪ್‌ಡೇಟ್ ಔಟ್
ಸಿಡ್ನಿ: ಭಾರತ ಹಾಗೂ ಆಸ್ಟ್ರೇಲಿಯಾ ನಡುವಿನ ಮೂರನೇ ಹಾಗೂ ಕೊನೆಯ ಏಕದಿನ ಪಂದ್ಯದಲ್ಲಿ ಕ್ಯಾಚ್ ಹಿಡಿಯುವ ಯತ್ನದಲ್ಲಿ ಗಾಯಗೊಂಡಿದ್ದ ಶ್ರೇಯಸ್ ಅಯ್ಯರ್, ಇದೀಗ ಆಸ್ಪತ್ರೆಯಿಂದಲೇ ತಮ್ಮ ಆರೋಗ್ಯದ ಅಪ್‌ಡೇಟ್ ನೀಡಿದ್ದಾರೆ. ಈ ಕುರಿತಾದ ರಿಪೋರ್ಟ್ ಇಲ್ಲಿದೆ ನೋಡಿ.

ಆಸೀಸ್ ಎದುರಿನ ಪಂದ್ಯದಲ್ಲಿ ಅಯ್ಯರ್‌ಗೆ ಗಾಯ
ಸಿಡ್ನಿ ಕ್ರಿಕೆಟ್ ಮೈದಾನದಲ್ಲಿ ನಡೆದ ಭಾರತ ಹಾಗೂ ಆಸ್ಟ್ರೇಲಿಯಾ ನಡುವಿನ ಮೂರನೇ ಹಾಗೂ ಕೊನೆಯ ಏಕದಿನ ಪಂದ್ಯದ ವೇಳೆ ಅಲೆಕ್ಸ್ ಕ್ಯಾರಿ ಬಾರಿಸಿದ ಕ್ಯಾಚ್ ಹಿಡಿಯುವ ಯತ್ನದಲ್ಲಿ ಶ್ರೇಯಸ್ ಅಯ್ಯರ್ ಗಂಭೀರವಾಗಿ ಗಾಯಗೊಂಡಿದ್ದರು.
ಸಿಡ್ನಿ ಆಸ್ಪತ್ರೆಯಲ್ಲಿ ಅಯ್ಯರ್‌ಗೆ ಚಿಕಿತ್ಸೆ
ತಕ್ಷಣವೇ ಶ್ರೇಯಸ್ ಅಯ್ಯರ್ ಮೈದಾನ ತೊರೆದಿದ್ದರು. ಆಂತರಿಕ ರಕ್ತಸ್ರಾವವಾಗಿದೆ ಎಂದು ಪರೀಕ್ಷೆಯಲ್ಲಿ ಎಂದು ಆಸ್ಪತ್ರೆಯ ಪರೀಕ್ಷೆಯ ವೇಳೆಯಲ್ಲಿ ತಿಳಿದು ಬಂದಿತ್ತು. ಅವರು ಸಿಡ್ನಿಯ ಖಾಸಗಿ ಆಸ್ಪತ್ರೆಯ ಐಸಿಯುನಲ್ಲಿ ಮೊದಲೆರಡು ದಿನ ಚಿಕಿತ್ಸೆ ಪಡೆದುಕೊಂಡಿದ್ದರು.
ಗಂಭೀರವಾಗಿ ಗಾಯಗೊಂಡಿದ್ದ ಶ್ರೇಯಸ್ ಅಯ್ಯರ್
ಪಕ್ಕೆಲುಬಿನ ಗಾಯದಿಂದಾಗಿ ಶ್ರೇಯಸ್ ಅಯ್ಯರ್ ಆಸ್ಪತ್ರೆಗೆ ದಾಖಲಾಗಿದ್ದರು. ತಂಡದ ವೈದ್ಯರು ಮತ್ತು ಫಿಸಿಯೋ ಶ್ರೇಯಸ್ ಅವರನ್ನು ಆದಷ್ಟು ಬೇಗ ಆಸ್ಪತ್ರೆಗೆ ಸೇರಿಸಿ ಪರಿಸ್ಥಿತಿ ಸುಲಭಗೊಳಿಸಿದರು. ಆದರೆ ಅದು ಮಾರಣಾಂತಿಕವಾಗಬಹುದಿತ್ತು ಎಂದು ವರದಿಯಾಗಿತ್ತು.
ಆರೋಗ್ಯದ ಅಪ್‌ಡೇಟ್ ಕೊಟ್ಟ ಶ್ರೇಯಸ್
ಇದೀಗ 30 ವರ್ಷದ ಶ್ರೇಯಸ್ ಅಯ್ಯರ್ ಸ್ವತಃ ಆಸ್ಪತ್ರೆಯಿಂದ ತಮ್ಮ ಆರೋಗ್ಯದ ಕುರಿತಂತೆ ಮಹತ್ವದ ಅಪ್‌ಡೇಟ್ ನೀಡಿದ್ದು, ಅಭಿಮಾನಿಗಳಿಗೆ ಹಾಗೂ ಬೆಂಬಲಿಗರಿಗೆ, ತಮ್ಮ ಚೇತರಿಕೆಗೆ ಹಾರೈಸಿದ ಆತ್ಮೀಯರಿಗೆ ಧನ್ಯವಾದಗಳನ್ನು ಅರ್ಪಿಸಿದ್ದಾರೆ.
ಧನ್ಯವಾದ ತಿಳಿಸಿದ ಅಯ್ಯರ್
ಈ ಬಗ್ಗೆ ಸೋಷಿಯಲ್ ಮೀಡಿಯಾ ಪೋಸ್ಟ್ ಹಂಚಿಕೊಂಡಿರುವ ಶ್ರೇಯಸ್ ಅಯ್ಯರ್, 'ನಾನು ದಿನದಿಂದ ದಿನಕ್ಕೆ ಚೇತರಿಸಿಕೊಳ್ಳುತ್ತಿದ್ದೇನೆ. ನೀವೆಲ್ಲರೂ ನೀಡಿದ ಪ್ರೀತಿ, ಬೆಂಬಲ ಹಾಗೂ ಹಾರೈಕೆಗಳಿಗೆ ನಾನು ಋಣಿ. ನನಗಾಗಿ ಪ್ರಾರ್ಥಿಸಿದ ಎಲ್ಲರಿಗೂ ಧನ್ಯವಾದಗಳು ಎಂದು ಮುಂಬೈ ಮೂಲದ ಬ್ಯಾಟರ್ ಕೃತಜ್ಞತೆ ಸಲ್ಲಿಸಿದ್ದಾರೆ.
ದಕ್ಷಿಣ ಆಫ್ರಿಕಾ ಎದುರಿನ ಸರಣಿಯಿಂದ ಅಯ್ಯರ್ ಔಟ್
ನವೆಂಬರ್ 30 ರಿಂದ ಆರಂಭವಾಗಲಿರುವ ದಕ್ಷಿಣ ಆಫ್ರಿಕಾ ವಿರುದ್ಧದ ಏಕದಿನ ಸರಣಿಯಲ್ಲಿ ಶ್ರೇಯಸ್ ಅಯ್ಯರ್ ಹೊರಗುಳಿಯುವ ಸಾಧ್ಯತೆ ದಟ್ಟವಾಗಿದೆ. ಶ್ರೇಯಸ್ ಅಯ್ಯರ್ ಆದಷ್ಟು ಬೇಗ ಸಂಪೂರ್ಣವಾಗಿ ಚೇತರಿಸಿಕೊಳ್ಳಲಿ ಎನ್ನುವುದು ಕ್ರಿಕೆಟ್ ಅಭಿಮಾನಿಗಳ ಹಾರೈಕೆಯಾಗಿದೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

