- Home
- News
- Crime
- ಶಿವಮೊಗ್ಗ: ನೀರು ಕೇಳಿ ಬಂದ ಅಪರಿಚಿತರಿಂದ ವೃದ್ಧೆಯ ಮನೆ ದರೋಡೆ: 18 ಲಕ್ಷ ಮೌಲ್ಯದ ಚಿನ್ನಾಭರಣ ಕದ್ದು ಪರಾರಿ
ಶಿವಮೊಗ್ಗ: ನೀರು ಕೇಳಿ ಬಂದ ಅಪರಿಚಿತರಿಂದ ವೃದ್ಧೆಯ ಮನೆ ದರೋಡೆ: 18 ಲಕ್ಷ ಮೌಲ್ಯದ ಚಿನ್ನಾಭರಣ ಕದ್ದು ಪರಾರಿ
ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನಲ್ಲಿ, ಮನೆಯಲ್ಲಿ ಒಂಟಿಯಾಗಿದ್ದ 74 ವರ್ಷದ ವೃದ್ಧೆಯ ಕೈಕಾಲು ಕಟ್ಟಿ, ಬಾಯಿಗೆ ಬಟ್ಟೆ ತುರುಕಿ ಸುಮಾರು 18 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಮತ್ತು ನಗದನ್ನು ದರೋಡೆ ಮಾಡಲಾಗಿದೆ. ಕುಡಿಯಲು ನೀರು ಕೇಳುವ ನೆಪದಲ್ಲಿ ಬಂದ ಮೂವರು ಅಪರಿಚಿತರು ಈ ಕೃತ್ಯ ಎಸಗಿದ್ದಾರೆ.

ಕೈ ಕಟ್ಟಿ ಬಾಯಿಗೆ ಬಟ್ಟೆ ತುರುಕಿ ವೃದ್ಧೆಯ ಮನೆ ದರೋಡೆ
ಶಿವಮೊಗ್ಗ: ಒಂಟಿ ಮಹಿಳೆಯ ಮನೆಗೆ ನುಗ್ಗಿದ ದರೋಡೆಕೋರರು ಮಹಿಳೆಯ ಕೈಗಳನ್ನು ಕಟ್ಟಿ, ಬಾಯಿಗೆ ಬಟ್ಟೆ ತುರುಕಿ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣವನ್ನು ದೋಚಿದ ಘಟನೆ ಶಿವಮೊಗ್ಗ ಜಿಲ್ಲೆಯಲ್ಲಿ ನಡೆದಿದೆ.
18 ಲಕ್ಷದ ಚಿನ್ನಾಭರಣದೊಂದಿಗೆ ಪರಾರಿ
ತೀರ್ಥಹಳ್ಳಿ ತಾಲೂಕಿನ ಆಗುಂಬೆ ಸಮೀಪದ ಲಕ್ಕುಂದ ಗ್ರಾಮದಲ್ಲಿ ಮನೆಯಲ್ಲಿ ಒಬ್ಬರೇ ಇದ್ದ 74 ವರ್ಷದ ವಿಶಾಲಾಕ್ಷಮ್ಮ ಎಂಬ ವೃದ್ಧೆಯನ್ನು ಕಟ್ಟಿಹಾಕಿ, ಅವರ ಮೈಮೇಲಿದ್ದ ಹಾಗೂ ಬೀರುವಿನಲ್ಲಿದ್ದ ಸುಮಾರು ರೂ. 18 ಲಕ್ಷ ಮೌಲ್ಯದ ಚಿನ್ನಾಭರಣ ಹಾಗೂ ನಗದನ್ನು ದರೋಡೆಕೋರರು ದೋಚಿದ್ದಾರೆ.ವಿಶಾಲಾಕ್ಷಿ ಅವರ ಪತಿ 15 ವರ್ಷಗಳ ಹಿಂದೆ ನಿಧನರಾಗಿದ್ದಾರೆ. ಹಾಗಾಗಿ ಅವರು ಮನೆಯಲ್ಲಿ ಒಬ್ಬರೇ ವಾಸವಿದ್ದರು.
ತೀರ್ಥಹಳ್ಳಿ ತಾಲೂಕಿನ ಆಗುಂಬೆ ಸಮೀಪದ ಲಕ್ಕುಂದ ಗ್ರಾಮದಲ್ಲಿ ಘಟನೆ
ಏಪ್ರಿಲ್ 21 ರಂದು ಮಧ್ಯಾಹ್ನ ಸುಮಾರು 3 ಗಂಟೆಯ ಹೊತ್ತಿಗೆ ವಿಶಾಲಾಕ್ಷಿ ಅವರು ಮನೆಯಲ್ಲಿ ಮಲಗಿದ್ದಾಗ ಯಾರೋ ಬಾಗಿಲು ತಟ್ಟಿದ ಶಬ್ದ ಕೇಳಿಸಿದೆ.. ಕಿಟಕಿಯ ಮೂಲಕ ನೋಡಿದಾಗ ಮೂವರು ಅಪರಿಚಿತರು ನಿಂತಿದ್ದರು. ಮೂವರು ಅಪರಿಚಿತರು ಕುಡಿಯಲು ನೀರು ಕೊಡಿ ಎಂದು ವಿಶಾಲಾಕ್ಷಿ ಅವರನ್ನು ಕೇಳಿದ್ದರು. ಬಾಗಿಲು ತೆರೆಯದ ಅವರು, ಕಿಟಕಿಯ ಮೂಲಕವೇ ನಲ್ಲಿಯಲ್ಲಿ ಇರುವ ನೀರು ಕುಡಿಯಿರಿ ಎಂದು ತಿಳಿಸಿದ್ದಾರೆ.
ಇದನ್ನೂ ಓದಿ: ಚಿಕ್ಕಮಗಳೂರು: ಜಾತಿ ಸಂಕೋಲೆ ಮೀರಿ ದಲಿತ ಹುಡುಗಿ ಕೈ ಹಿಡಿದ ಬ್ರಾಹ್ಮಣ ಸಮುದಾಯದ ಯುವಕ
ಹಿತ್ತಲ ಬಾಗಿಲು ತೆರೆದಾಗ ಒಳ ನುಗ್ಗದ್ದ ಖದೀಮರು
ಈ ವೇಳೆ ಮೂವರು ಅಪರಿಚಿತರು ಅಲ್ಲೇ ಮರೆಯಾಗಿ ನಿಂತಿದ್ದರು. ಕೆಲವು ನಿಮಿಷಗಳ ಬಳಿಕ ಅನುಮಾನಗೊಂಡ ವೃದ್ಧೆ ಹಿತ್ತಲ ಬಾಗಿಲು ತೆರೆದು ಪರಿಶೀಲಿಸಿದಾಗ. ಮೂವರು ಒಮ್ಮೆಲೆ ಮನೆಯೊಳಗೆ ನುಗ್ಗಿ ದರೋಡೆ ಮಾಡಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಆಗುಂಬೆ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.
ಇದನ್ನೂ ಓದಿ: ವಿಜಯಪುರ: ಸಂಬಂಧಿಕರಿಂದಲೇ ಗ್ರಾ.ಪಂ ಮಾಜಿ ಸದಸ್ಯನ ಭೀಕರ ಹತ್ಯೆ: ಆರು ಹಂತಕರ ಬಂಧನ
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ

