ದಿತ್ವಾ ಚಂಡಮಾರುತ; ಮೂರು ಜಿಲ್ಲೆಗಳಿಗೆ ರೆಡ್ ಅಲರ್ಟ್, ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ
ದಿತ್ವಾ ಚಂಡಮಾರುತದಿಂದಾಗಿ ತಮಿಳುನಾಡಿನಲ್ಲಿ ಭಾರೀ ಮಳೆಯಾಗುತ್ತಿದ್ದು, ರೆಡ್ ಅಲರ್ಟ್ ಘೋಷಿಸಲಾಗಿದೆ ಮತ್ತು ಶಾಲಾ-ಕಾಲೇಜುಗಳಿಗೆ ರಜೆ ನೀಡಲಾಗಿದೆ. ಚಂಡಮಾರುತದಿಂದ ತತ್ತರಿಸಿರುವ ಶ್ರೀಲಂಕಾಕ್ಕೆ ಭಾರತ 'ಆಪರೇಷನ್ ಸಾಗರ್ ಬಂಧು' ಮೂಲಕ ನೆರವು ನೀಡುತ್ತಿದೆ.

ದಿತ್ವಾ ಚಂಡಮಾರುತ
ದಿತ್ವಾ ಚಂಡಮಾರುತದಿಂದಾಗಿ ತಮಿಳುನಾಡಿನಲ್ಲಿ ವೇಗದ ಗಾಳಿ ಜೊತೆ ನಿರಂತರವಾಗಿ ಮಳೆಯಾಗುತ್ತಿದ್ದು, ಹಲವೆಡೆ ಪ್ರವಾಹ ಪರಿಸ್ಥಿತಿ ಉಂಟಾಗಿದೆ. ಹವಾಮಾನ ಇಲಾಖೆ ಮುಂದಿನ 24 ಗಂಟೆಗಳ ಕಾಲ ರೆಡ್ ಅಲರ್ಟ್ ಘೋಷಿಸಿದೆ. ಮುಂಜಾಗ್ರತ ಕ್ರಮವಾಗಿ ಚೆನ್ನೈ, ತಿರುವಲ್ಲೂರು ಮತ್ತು ಕಾಂಚೀಪುರಂ ಜಿಲ್ಲೆಗಳಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.
ಹವಾಮಾನ ಇಲಾಖೆ ಸೂಚನೆ
ಅನಾವಶ್ಯಕವಾಗಿ ಜನರು ಮನೆಯಿಂದ ಹೊರಗೆ ಬರಬಾರದು. ನದಿ ಮತ್ತು ಕಡಲತೀರಕ್ಕೆ ತೆರಳದಂತೆ ಸಾರ್ವಜನಿಕರಿಗೆ ಹವಾಮಾನ ಇಲಾಖೆ ಸೂಚನೆ ನೀಡಿದೆ. ರೆಡ್ ಅಲರ್ಟ್ ಘೋಷಿಸಿರುವ ಸ್ಥಳಗಳಿಗೆ ತೆರಳುತ್ತಿದ್ರೆ ಪ್ರವಾಸವನ್ನು ಮೊಟಕುಗೊಳಿಸುವಂತೆ ಸಲಹೆಯನ್ನು ನೀಡಲಾಗಿದೆ. ರಾಜ್ಯ ಸರ್ಕಾರ ಮತ್ತು ವಿಪತ್ತು ನಿರ್ವಹಣಾ ತಂಡಗಳು ಸನ್ನದ್ದವಾಗಿದೆ ಎಂದು ವರದಿಯಾಗಿದೆ.
ಶಾಲಾ-ಕಾಲೇಜುಗಳಿಗೆ ರಜೆ
ದಿತ್ವಾ ಚಂಡಮಾರುತ ನಿರಂತರವಾಗಿ ತನ್ನ ದಿಕ್ಕನ್ನು ಬದಲಾಯಿಸುತ್ತಾ ತನ್ನ ಶಕ್ತಿಯನ್ನು ಹೆಚ್ಚಿಸಿಕೊಳ್ಳುತ್ತಿದೆ. ಸದ್ಯ ದಿತ್ವಾ ಚಂಡಮಾರುತಗಳು ತಮಿಳುನಾಡಿನ ಕರಾವಳಿ ಪ್ರದೇಶಗಳ ಕಡೆಗೆ ಚಲಿಸುತ್ತಿದೆ. ಹವಾಮಾನ ಇಲಾಖೆಯ ಪ್ರಕಾರ ಮುಂದಿನ ಕೆಲವು ಗಂಟೆಗಳಲ್ಲಿ ಹಲವು ಭಾಗಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಗಳಿರುವ ಕಾರಣ ಚೆನ್ನೈ ಜಿಲ್ಲಾಧಿಕಾರಿ ರೋಶ್ನಿ ಸಿದ್ಧಾರ್ಥ ಜಗಡೆ ಅವರು ಶಾಲಾ-ಕಾಲೇಜುಗಳಿಗೆ ರಜೆ ನೀಡಿದ್ದಾರೆ. ತಿರುವಲ್ಲೂರು ಮತ್ತು ಕಾಂಚಿಪುರಂ ಜಿಲ್ಲಾಧಿಕಾರಿಗಳು ರಜೆ ನೀಡಿ ಆದೇಶಿಸಿದ್ದಾರೆ.
ನೈಸರ್ಗಿಕ ವಿಕೋಪ
ಅಧಿಕಾರಿಗಳ ಪ್ರಕಾರ, ಭಾರೀ ಮಳೆಯಿಂದಾಗಿ ಅನೇಕ ಪ್ರದೇಶಗಳಲ್ಲಿ ನೀರು ನಿಲ್ಲುವ ಸಾಧ್ಯತೆಯಿದೆ. ಭೂಕುಸಿತದಂತಕ ನೈಸರ್ಗಿಕ ವಿಕೋಪಗಳು ಸಂಭವಿಸುವ ಸಾಧ್ಯತೆಗಳಿವೆ. ನದಿಗಳು ತುಂಬಿ ಹರಿಯಲಿವೆ. ಯಾವುದೇ ವಿಪತ್ತು ಸಂಭವಿಸಿದಾಗ ತಕ್ಷಣದ ಸಹಾಯ ಒದಗಿಸಲು ವಿಪತ್ತು ನಿರ್ವಹಣಾ ತಂಡಗಳು NDRF ನೊಂದಿಗೆ ನಿರಂತರವಾಗಿ ಮೇಲ್ವಿಚಾರಣೆ ನಡೆಸಲಾಗುತ್ತಿದೆ ಎಂದು ಹೇಳಿದ್ದಾರೆ.
ಇದನ್ನೂ ಓದಿ: ತಮಿಳುನಾಡು: ದಿತ್ವಾಆರ್ಭಟಕ್ಕೆ 3 ಬಲಿ: 149 ಪ್ರಾಣಿಗಳು ಸಾವು 234 ಮನೆ ನಾಶ, 57000 ಹೆಕ್ಟೇರ್ ಕೃಷಿಭೂಮಿ ಜಲಾವೃತ
ಆಪರೇಷನ್ ಸಾಗರ್ ಬಂಧು
ದಿತ್ವಾ ಚಂಡಮಾರುತ ಶ್ರೀಲಂಕಾದಲ್ಲಿ ವ್ಯಾಪಕ ಹಾನಿಯನ್ನುಂಟು ಮಾಡಿದ್ದು, ಇಲ್ಲಿಯವರೆಗೆ 334 ಜನರು ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ. ರಾಜಧಾನಿ ಕೊಲಂಬೊದ ಹಲವು ಭಾಗಗಳಲ್ಲಿ ಪ್ರವಾಹವು ಪರಿಸ್ಥಿತಿ ಉಂಟಾಗಿದ್ದು, ಜನಜೀವನ ಸಂಪೂರ್ಣ ಅಸ್ತವ್ಯಸ್ಥವಾಗಿದೆ. ಶ್ರೀಲಂಕಾದ ನೆರವಿಗೆ ಧಾವಿಸಿರುವ ಭಾರತ 'ಆಪರೇಷನ್ ಸಾಗರ್ ಬಂಧು' ಅನ್ನು ಪ್ರಾರಂಭಿಸಿದೆ. ಐಎನ್ಎಸ್ ವಿಕ್ರಾಂತ್‌ನ ಚೇತಕ್ ಹೆಲಿಕಾಪ್ಟರ್‌ಗಳು ಮತ್ತು ಭಾರತೀಯ ವಾಯುಪಡೆಯ ಎಂಐ-17 ಹೆಲಿಕಾಪ್ಟರ್‌ಗಳು ನಿರಂತರವಾಗಿ ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿಸಿಕೊಂಡಿವೆ.
ಇದನ್ನೂ ಓದಿ: ಶ್ರೀಲಂಕಾ ನಲುಗಿಸಿದ ದಿತ್ವಾ, 56 ಮಂದಿ ಬಲಿ! ಭಾರತದ 2 ರಾಜ್ಯಗಳಿಗೆ ಚಂಡಮಾರುತ ಅಪ್ಪಳಿಸೋ ಸೂಚನೆ!
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

