ಗ್ಯಾಂಗ್ಟಾಕ್ ಮೈದಾನದಲ್ಲಿ ಯುವ ಆಟಗಾರರೊಂದಿಗೆ ಫುಟ್ಬಾಲ್ ಆಡಿದ ಪ್ರಧಾನಿ ನರೇಂದ್ರ ಮೋದಿ
ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಎರಡು ದಿನಗಳ ಸಿಕ್ಕಿಂ ಪ್ರವಾಸದ ವೇಳೆ ಗ್ಯಾಂಗ್ಟಾಕ್ನಲ್ಲಿ ಯುವ ಆಟಗಾರರೊಂದಿಗೆ ಫುಟ್ಬಾಲ್ ಆಡಿದರು. ಈ ಫೋಟೋಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡ ಅವರು, ಸಿಕ್ಕಿಂನ 50ನೇ ರಾಜ್ಯೋತ್ಸವ ದಿನದ ಸಮಾರೋಪ ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ.

ಫುಟ್ಬಾಲ್ ಆಡಿದ ಪ್ರಧಾನಿ ಮೋದಿ
ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಎರಡು ದಿನಗಳ ಸಿಕ್ಕಿಂ ಪ್ರವಾಸದಲ್ಲಿದ್ದು, ಇಂದು ಬೆಳಗ್ಗೆ ಯುವಕರೊಂದಿಗೆ ಫುಟ್ಬಾಲ್ ಆಡಿದ್ದಾರೆ. ಇಂದು ಸಿಕ್ಕಿಂನ 50 ನೇ ರಾಜ್ಯೋತ್ಸವ ದಿನದ ಸಮಾರೋಪ ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ
ಸಿಕ್ಕಿಂ ಪ್ರವಾಸ
ಪ್ರಧಾನಿ ಮೋದಿ ಸಿಕ್ಕಿಂ ರಾಜಧಾನಿ ಗ್ಯಾಂಗ್ಟಾಕ್ನಲ್ಲಿ ಯುವ ಆಟಗಾರರೊಂದಿಗೆ ಫುಟ್ಬಾಲ್ ಆಡಿದ್ದಾರೆ. ಈ ಫೋಟೋಗಳನ್ನು ನರೇಂದ್ರ ಮೋದಿ ಅವರು ಸೋಶಿಯಲ್ ಮೀಡಿಯಾದಲ್ಲಿ ಶೇರ್ ಮಾಡಿಕೊಂಡಿದ್ದಾರೆ.
ಫೋಟೋ ಶೇರ್ ಮಾಡಿಕೊಂಡ ಪ್ರಧಾನಿ ಮೋದಿ
ಇಂದು ಗ್ಯಾಂಗ್ಟಾಕ್ನಲ್ಲಿ ಒಂದು ಸುಂದರ ಬೆಳಗ್ಗೆ, ಸಿಕ್ಕಿಂನಲ್ಲಿ ನನ್ನ ಪುಟ್ಟ ಸ್ನೇಹಿತರೊಂದಿಗೆ ಫುಟ್ಬಾಲ್ ಆಡುವುದು ವಿಭಿನ್ನ ರೀತಿಯ ಸಂತೋಷವನ್ನು ನೀಡಿದೆ. ಯುವಕರೊಂದಿಗಿನ ಆಟ ತುಂಬಾ ಎನರ್ಜಿ ತಂದುಕೊಡ್ತು ಎಂದು ಪ್ರಧಾನಿ ನರೇಂದ್ರ ಮೋದಿ ಸೋಶಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ.
ರೋಡ್ ಶೋ
ಪ್ರಧಾನಿ ನರೇಂದ್ರ ಮೋದಿ ಸೋಮವಾರ ಸಂಜೆಯೇ ಸಿಕ್ಕಿಂ ರಾಜಧಾನಿ ಗ್ಯಾಂಗ್ಟಾಕ್ಗೆ ಆಗಮಿಸಿದ್ದಾರೆ. ಹೆಲಿಪ್ಯಾಡ್ನಿಂದ ಲೋಕ ಭವನದವರೆಗೆ ಪ್ರಧಾನಿಗಳು ರೋಡ್ ಶೋ ನಡೆಸಿದರು. ಪ್ರಧಾನಿ ಮೋದಿಯವರನ್ನು ನೋಡಲು ಬೃಹತ್ ಜನಸಮೂಹ ಬೀದಿಗಳಲ್ಲಿ ಸಾಲುಗಟ್ಟಿ ನಿಂತಿತ್ತು.
ಪಶ್ಚಿಮ ಬಂಗಾಳ ಚುನಾವಣೆ ಪ್ರಚಾರ
ಎರಡು ದಿನ ನಿರಂತರವಾಗಿ ಪಶ್ಚಿಮ ಬಂಗಾಳ ಚುನಾವಣೆ ಪ್ರಚಾರದಲ್ಲಿ ಪ್ರಧಾನಿಗಳು ಭಾಗಿಯಾಗಿ ಮತಯಾಚನೆ ಮಾಡಿದ್ದರು. ಇದೀಗ ಸಿಕ್ಕಿಂ ಪ್ರವಾಸದಲ್ಲಿದ್ದಾರೆ. ಪಶ್ವಿಮ ಬಂಗಾಳದಲ್ಲಿ ಮೊದಲ ಹಂತದ ಚುನಾವಣೆ ಮುಕ್ತಾಯವಾಗಿದ್ದು, ಏಪ್ರಿಲ್ 29ರಂದು ಎರಡನೇ ಹಂತದ ಮತದಾನ ನಡೆಯಲಿದೆ. ಮೇ 4ರಂದು ಪಶ್ವಿಮ ಬಂಗಾಳ ಸೇರಿದಂತೆ ಪಂಚ ರಾಜ್ಯಗಳ ಚುನಾವಣೆ ಫಲಿತಾಂಶ ಪ್ರಕಟವಾಹಲಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ

