MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಗ್ಯಾಲರಿ
  • ಮನರಂಜನೆ
  • ಜ್ಯೋತಿಷ್ಯ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ಕ್ರೀಡೆ
  • ಜೀವನಶೈಲಿ
  • ವಾಣಿಜ್ಯ
  • Home
  • News
  • India News
  • ಸುಪ್ರಿಯಾ ಸುಳೆ ಪುತ್ರಿಗೆ ವರ ಹುಡುಕಿಕೊಟ್ಟ ಗಡ್ಕರಿ ಮತ್ತು ಫಡ್ನವಿಸ್? ಸಂಭ್ರಮದ ಬೆನ್ನಲ್ಲೇ ಆಸ್ಪತ್ರೆ ಸೇರಿದ ತಂದೆ ಶರದ್‌ ಪವಾರ್‌!

ಸುಪ್ರಿಯಾ ಸುಳೆ ಪುತ್ರಿಗೆ ವರ ಹುಡುಕಿಕೊಟ್ಟ ಗಡ್ಕರಿ ಮತ್ತು ಫಡ್ನವಿಸ್? ಸಂಭ್ರಮದ ಬೆನ್ನಲ್ಲೇ ಆಸ್ಪತ್ರೆ ಸೇರಿದ ತಂದೆ ಶರದ್‌ ಪವಾರ್‌!

Supriya Sule Daughter Revati Sule Marriage Fixed ಎನ್‌ಸಿಪಿ (ಎಸ್‌ಪಿ) ಕಾರ್ಯಾಧ್ಯಕ್ಷೆ ಸುಪ್ರಿಯಾ ಸುಳೆ ಅವರ ಪುತ್ರಿ ರೇವತಿ ಸುಳೆ, ನಾಗ್ಪುರ ಮೂಲದ ಉದ್ಯಮಿ ಸಾರಂಗ್ ಲಖಾನಿ ಅವರನ್ನು ವಿವಾಹವಾಗಲಿದ್ದಾರೆ. 

2 Min read
Author : Santosh Naik
Published : Feb 10 2026, 06:32 PM IST
Share this Photo Gallery
  • FB
  • TW
  • Linkdin
  • Whatsapp
110
Image Credit : X

ಎನ್‌ಸಿಪಿ (ಎಸ್‌ಪಿ) ಕಾರ್ಯಾಧ್ಯಕ್ಷೆ ಸುಪ್ರಿಯಾ ಸುಳೆ ಅವರ ಪುತ್ರಿ ರೇವತಿ ಸುಳೆ, ನಾಗ್ಪುರ ಮೂಲದ ಉದ್ಯಮಿಯ ಪುತ್ರ ಸಾರಂಗ್ ಲಖಾನಿ ಅವರನ್ನು ವಿವಾಹವಾಗಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

210
Image Credit : X

ಹಿರಿಯ ಕಾಂಗ್ರೆಸ್ ನಾಯಕ ಸುಶೀಲ್ ಕುಮಾರ್ ಶಿಂಧೆ ಅವರ ಪುತ್ರಿ ಸ್ಮೃತಿ ಶಿಂಧೆ ಅವರು ಸೋಶಿಯಲ್‌ ಮೀಡಿಯಾದಲ್ಲಿ ಫೋಟೋ ಹಂಚಿಕೊಳ್ಳುವ ಮೂಲಕ ಈ ಸಂತೋಷದ ಸುದ್ದಿಯನ್ನು ಹಂಚಿಕೊಂಡಿದ್ದಾರೆ.

Related Articles

Related image1
ಅಜಿತ್ ಪವಾರ್ ನಿಧನ: ಸುಪ್ರಿಯಾ ಸುಳೆ ಹಾಗೂ ಸುನೇತ್ರಾ ಅವರನ್ನು ಸಮಾಧಾನಿಸುತ್ತಿರುವ ವೃದ್ಧ ಯಾರು?
Related image2
ಶರದ್‌ ಪವಾರ್‌ ಹೆಸರು, ಚಿತ್ರ ಬಳಸಿಕೊಳ್ಳಬೇಡಿ, ಅಜಿತ್‌ ಪವಾರ್‌ಗೆ ಸೂಚಿಸಿದ ಸುಪ್ರೀಂ ಕೋರ್ಟ್‌!
310
Image Credit : X

ಲೋಕಸಭಾ ಸಂಸದೆ ಸುಪ್ರಿಯಾ ಸುಳೆ ಪುತ್ರ ವಿಜಯ್ ಸುಳೆ ಮಂಗಳವಾರ ಸೋಶಿಯಲ್‌ ಮೀಡಿಯಾದಲ್ಲಿ ಪೋಸ್ಟ್ ಮಾಡಿದ್ದು, ರೇವತಿ ಮತ್ತು ಸಾರಂಗ್ ಫೋಟೋ ಜೊತೆ "ಅಕ್ಕ ಮತ್ತು ಭಾವನಿಗೆ ಅಭಿನಂದನೆಗಳು" ಎಂಬ ಶೀರ್ಷಿಕೆಯೊಂದಿಗೆ ಹೃದಯ ಮತ್ತು ಉಂಗುರದ ಎಮೋಜಿ ಹಂಚಿಕೊಂಡಿದ್ದಾರೆ.

410
Image Credit : X

ರೇವತಿ ಸುಳೆ ಮುಂಬೈನ ಸೇಂಟ್ ಕ್ಸೇವಿಯರ್ಸ್ ಕಾಲೇಜಿನಿಂದ ಅರ್ಥಶಾಸ್ತ್ರದಲ್ಲಿ ಪದವಿ ಪಡೆದಿದ್ದು, ನಂತರ ಲಂಡನ್ ಸ್ಕೂಲ್ ಆಫ್ ಎಕನಾಮಿಕ್ಸ್‌ನಿಂದ ಸಾರ್ವಜನಿಕ ಆಡಳಿತದಲ್ಲಿ ಸ್ನಾತಕೋತ್ತರ ಪದವಿ ಪಡೆದುಕೊಂಡಿದ್ದಾರೆ.

510
Image Credit : X

ರೇವತಿ ಸುಳೆ ಅವರು ನಾಗಪುರದ ಪ್ರಸಿದ್ಧ ಕೈಗಾರಿಕೋದ್ಯಮಿ ಅರುಣ್ ಲಖಾನಿ ಅವರ ಪುತ್ರ ಸಾರಂಗ್ ಲಖಾನಿ ಅವರನ್ನು ವಿವಾಹವಾಗುತ್ತಿದ್ದಾರೆ. ಸಾರಂಗ್ ಅವರು ನಾಗಪುರದ ಪ್ರತಿಷ್ಠಿತ 'ವಿಶ್ವರಾಜ್ ಗ್ರೂಪ್' ನ ಅಧ್ಯಕ್ಷರು ಮತ್ತು ವ್ಯವಸ್ಥಾಪಕ ನಿರ್ದೇಶಕರಾಗಿದ್ದಾರೆ.

610
Image Credit : X

ಸಾರಂಗ್ ಲಖಾನಿ ಪ್ರಸ್ತುತ ತಮ್ಮ ತಂದೆಯ ನಿಯಂತ್ರಣದಲ್ಲಿರುವ ವಿಶ್ವರಾಜ್ ಗ್ರೂಪ್‌ನಲ್ಲಿ ಪ್ರಮುಖ ವ್ಯವಹಾರ ನೋಡಿಕೊಳ್ಳುತ್ತಿದ್ದು, ಬ್ಯಾಡ್ಮಿಂಟನ್ ಆಟಗಾರರಾಗಿರುವ ಅವರು ಯುನೈಟೆಡ್ ಸ್ಟೇಟ್ಸ್‌ನ ಕೊಲಂಬಿಯಾ ಬಿಸಿನೆಸ್ ಸ್ಕೂಲ್‌ನಲ್ಲಿ ಮ್ಯಾನೇಜ್‌ಮೆಂಟ್ ಅಧ್ಯಯನ ಮಾಡಿದ್ದಾರೆ.

710
Image Credit : X

ರೇವತಿ ಸುಳೆ, ಸುಪ್ರಿಯಾ ಸುಳೆ ಹಾಗೂ ಸದಾನಂದ್‌ ಸುಳೆ ದಂಪತಿಗಳ ಪುತ್ರಿ. ಇವರಿಗೆ ಮಗ ಕೂಡ ಇದ್ದು, ಆತನ ಹೆಸರು ವಿಜಯ್‌ ಸುಳೆ.

810
Image Credit : X

ಎದೆ ಸೋಂಕಿನಿಂದಾಗಿ ಸುಪ್ರಿಯಾ ಸುಳೆ ಅವರ ತಂದೆ ಮತ್ತು ಎನ್‌ಸಿಪಿ (ಎಸ್‌ಪಿ) ಅಧ್ಯಕ್ಷ ಶರದ್ ಪವಾರ್ ಅವರನ್ನು ಸೋಮವಾರ ಪುಣೆ ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.

910
Image Credit : X

ಕುಟುಂಬಗಳು ಇನ್ನೂ ಮದುವೆ ದಿನಾಂಕಗಳನ್ನು ಹಂಚಿಕೊಂಡಿಲ್ಲವಾದರೂ, ಸಿದ್ಧತೆಗಳು ನಡೆಯುತ್ತಿವೆ ಎಂದು ಮೂಲಗಳು ತಿಳಿಸಿವೆ. ಕೇಂದ್ರ ಸಚಿವ ನಿತಿನ್ ಗಡ್ಕರಿ ಮತ್ತು ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಸೇರಿದಂತೆ ಹಿರಿಯ ನಾಯಕರು ಮದುವೆಯನ್ನು ಫಿಕ್ಸ್‌ ಮಾಡುವಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ ಎನ್ನುವ ವರದಿಗಳಿವೆ.

1010
Image Credit : X

ಇನ್ನು ಸಾರಂಗ್‌ ಲಖಾನಿ 2014 ರಲ್ಲಿ ನಾಗ್ಪುರ ವಿಶ್ವವಿದ್ಯಾಲಯದಿಂದ ಬಿ.ಕಾಂ ಪದವಿಯನ್ನು ಪೂರ್ಣಗೊಳಿಸಿದ ಬಳಿಕ, ಸಾರ್ವಜನಿಕ-ಖಾಸಗಿ ಸಹಭಾಗಿತ್ವ (ಪಿಪಿಪಿಗಳು), ಮೂಲಸೌಕರ್ಯ ಮತ್ತು ನಿಯಂತ್ರಣದಲ್ಲಿ ಕಾರ್ಯನಿರ್ವಾಹಕ ಶಿಕ್ಷಣ ಕಾರ್ಯಕ್ರಮಕ್ಕಾಗಿ ಬೆಂಗಳೂರಿನ ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಮ್ಯಾನೇಜ್‌ಮೆಂಟ್‌ನಲ್ಲಿ ವ್ಯಾಸಂಗ ಮಾಡಿದ್ದರು.

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

About the Author

SN
Santosh Naik
ನಾನು ಏಷ್ಯಾನೆಟ್ ಸುವರ್ಣ ನ್ಯೂಸ್.ಕಾಂನಲ್ಲಿ ಮುಖ್ಯ ಉಪಸಂಪಾದಕ. ಉತ್ತರ ಕನ್ನಡ ಜಿಲ್ಲೆಯ ಭಟ್ಕಳದವನು. 13 ವರ್ಷಗಳಿಂದಲೂ ಮಾಧ್ಯಮದಲ್ಲಿದ್ದೇನೆ. ಉಜಿರೆಯ ಎಸ್‌ಡಿಎಂ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ. ಹೊಸದಿಗಂತದ ಮೂಲಕ ಮಾಧ್ಯಮ ಜಗತ್ತಿಗೆ ಕಾಲಿಟ್ಟವನು. ಕ್ರೀಡಾ ವರದಿಯಲ್ಲಿ ಹೆಚ್ಚು ಆಸಕ್ತಿ. ಆದರೆ, ಡಿಜಿಟಲ್ ಮಾಧ್ಯಮ ಎಲ್ಲ ವಿಷಯದಲ್ಲೂ ಪಳಗಿಸಿದೆ. ವಿಜಯವಾಣಿ, ಸ್ಟಾರ್‌ ಸ್ಪೋರ್ಟ್ಸ್‌ನಲ್ಲಿ ಕೆಲಸ ಮಾಡಿದ್ದೇನೆ. ಓದು, ಪ್ರವಾಸ ನೆಚ್ಚಿನ ಹವ್ಯಾಸ
ಶರದ್ ಪವಾರ್
ಸುಪ್ರಿಯಾ ಸುಳೆ
ಮಹಾರಾಷ್ಟ್ರ
ಮಹಾರಾಷ್ಟ್ರ ರಾಜಕಾರಣ
ಸಂಬಂಧಗಳು
ಮದುವೆ
ಮದುವೆ
ನಿತಿನ್ ಗಡ್ಕರಿ
ಮುಂಬೈ

Latest Videos
Recommended Stories
Recommended image1
ದಿ ಹಾಲಿವುಡ್​ ರಿಪೋರ್ಟರ್​ನಲ್ಲಿ Lakshmi Nivasa ಭಾವನಾ: ನಟಿ ದಿಶಾ ಮದನ್​ ಬಾಲ್ಯದ ಕನಸು ನನಸಾಯ್ತು
Recommended image2
ರಹಸ್ಯವಾಗಿ ಯುವತಿ ಫೋಟೋ ಕ್ಲಿಕ್ಕಿಸುತ್ತಿದ್ದ ತಂದೆ ವಯಸ್ಸಿನ ವ್ಯಕ್ತಿ: ವೀಡಿಯೋ ವೈರಲ್ ಆಗ್ತಿದ್ದಂತೆ ಆಕ್ರೋಶ
Recommended image3
ಐಟಿ ಕೆಲಸ ಬಿಟ್ಟು ರಾಜಕೀಯಕ್ಕೆ ಬಂದಿದ್ದ ಸುಂದರಿ.. ಪಂಚಾಯತ್ ಪಾಲಿಟಿಕ್ಸ್‌ನಲ್ಲಿ ಸೋತ ಬ್ಯೂಟಿ ಕ್ವೀನ್ ನಿರ್ಮಲಾ!
Related Stories
Recommended image1
ಅಜಿತ್ ಪವಾರ್ ನಿಧನ: ಸುಪ್ರಿಯಾ ಸುಳೆ ಹಾಗೂ ಸುನೇತ್ರಾ ಅವರನ್ನು ಸಮಾಧಾನಿಸುತ್ತಿರುವ ವೃದ್ಧ ಯಾರು?
Recommended image2
ಶರದ್‌ ಪವಾರ್‌ ಹೆಸರು, ಚಿತ್ರ ಬಳಸಿಕೊಳ್ಳಬೇಡಿ, ಅಜಿತ್‌ ಪವಾರ್‌ಗೆ ಸೂಚಿಸಿದ ಸುಪ್ರೀಂ ಕೋರ್ಟ್‌!
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2026 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved