ತಲೆಮರೆಸಿಕೊಂಡಿದ್ದ ಮಹೇಶ್ ಶೆಟ್ಟಿ ತಿಮರೋಡಿ ಬೆಳ್ತಂಗಡಿ ಕೋರ್ಟ್ ಮುಂದೆ ಹಾಜರು
ಮಹೇಶ್ ಶೆಟ್ಟಿ ತಿಮರೋಡಿ, ಕೆಲವು ದಿನಗಳಿಂದ ನಾಪತ್ತೆಯಾದ ನಂತರ ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರಾಗಿದ್ದಾರೆ. ಧರ್ಮಸ್ಥಳದ ಬುರುಡೆ ಷಡ್ಯಂತ್ರ ಪ್ರಕರಣದಲ್ಲಿ ಎಸ್‌ಐಟಿ ನೋಟಿಸ್ ಎದುರಿಸುತ್ತಿರುವ ಅವರ ನಿರೀಕ್ಷಣಾ ಜಾಮೀನು ಅರ್ಜಿ ವಜಾಗೊಂಡಿದ್ದು, ಅವರ ಮೇಲೆ ಒಟ್ಟು ಐದು ಪ್ರಕರಣಗಳು ದಾಖಲಾಗಿವೆ.

ಮಹೇಶ್ ಶೆಟ್ಟಿ ತಿಮರೋಡಿ
ಕಳೆದ ಕೆಲವು ದಿನಗಳಿಂದ ನಾಪತ್ತೆಯಾಗಿದ್ದ ಸೌಜನ್ಯ ಪರ ಹೋರಾಟದಲ್ಲಿ ಗುರುತಿಸಿಕೊಂಡಿದ್ದ ಮಹೇಶ್ ಶೆಟ್ಟಿ ತಿಮರೋಡಿ ಇಂದು ಬೆಳ್ತಂಗಡಿ ನ್ಯಾಯಾಲಯದ ಮುಂದೆ ಹಾಜರಾಗಿದ್ದಾರೆ. ಧರ್ಮಸ್ಥಳದ ಬುರುಡೆ ಷಡ್ಯಂತ್ರ ಪ್ರಕರಣದಲ್ಲಿಯೂ ಮಹೇಶ್ ಶೆಟ್ಟಿ ತಿಮರೋಡಿ ಹೆಸರು ಕೇಳಿ ಬಂದಿದೆ
ಧರ್ಮಸ್ಥಳದ ಬುರುಡೆ ಷಡ್ಯಂತ್ರ
ಧರ್ಮಸ್ಥಳದ ಬುರುಡೆ ಷಡ್ಯಂತ್ರ ಪ್ರಕರಣಕ್ಕೆ ಸಂಬಂಧ ಮಹೇಶ್ ಶೆಟ್ಟಿ ತಿಮರೋಡಿ ಸೇರಿ ನಾಲ್ವರಿಗೆ ವಿಶೇಷ ತನಿಖಾ ತಂಡ (ಎಸ್‌ಐಟಿ) ನೋಟಿಸ್ ಜಾರಿ ಮಾಡಿತ್ತು. ವಿಚಾರಣೆಗೆ ಹಾಜರಾಗದಿದ್ರೆ ಬಂಧನದ ಎಚ್ಚರಿಕೆ ನೀಡಿತ್ತು. ಬಿಎನ್‌ಎಸ್ಎಸ್ 35(3) ಅಡಿಯಲ್ಲಿ ನೋಟಿಸ್ ನೀಡಲಾಗಿತ್ತು.
ನಿರೀಕ್ಷಣಾ ಜಾಮೀನು ಕೋರಿ ನ್ಯಾಯಾಲಯದ ಮೊರೆ
ಸುಮಾರು ಒಂದು ತಿಂಗಳಿನಿಂದ ತಲೆಮರೆಸಿಕೊಂಡಿದ್ದ ಮಹೇಶ್ ಶೆಟ್ಟಿ ತಿಮರೋಡಿ, ಬಂಧನದಿಂದ ತಪ್ಪಿಸಿಕೊಳ್ಳಲು ನಿರೀಕ್ಷಣಾ ಜಾಮೀನು ಕೋರಿ ನ್ಯಾಯಾಲಯದ ಮೊರೆ ಹೋಗಿದ್ದರು. ಆದ್ರೆ ದಕ್ಷಿಣ ಕನ್ನಡ ಜಿಲ್ಲಾ ಪ್ರಧಾನ ಮತ್ತು ಸೆಷನ್ಸ್ ಕೋರ್ಟ್, ತಿಮರೋಡಿ ಅವರ ನಿರೀಕ್ಷಣಾ ಜಾಮೀನು ಅರ್ಜಿಯನ್ನು ವಜಾಗೊಳಿಸಿತ್ತು.
ಇದನ್ನೂ ಓದಿ: ಕೋರ್ಟ್ ಮೆಟ್ಟಿಲಲ್ಲಿ ಅಣ್ಣಪ್ಪ ತೀರ್ಪು ನೀಡ್ತಾನೆ: ಬುರುಡೆ ಗ್ಯಾಂಗ್ ವಿರುದ್ಧ ಚಕ್ರವರ್ತಿ ಸೂಲಿಬೆಲೆ ಆಕ್ರೋಶ
ಮಹೇಶ್ ಶೆಟ್ಟಿ ತಿಮರೋಡಿ ಮೇಲೆ ದಾಖಲಾದ ಐದು ಪ್ರಕರಣ
1. ಉಜಿರೆಯ ಬೆನಕ ಆಸ್ಪತ್ರೆಯಲ್ಲಿ ಏಷ್ಯಾನೆಟ್ ಸುವರ್ಣ ನ್ಯೂಸ್ ವರದಿಗಾರ, ಕ್ಯಾಮರಾಮೆನ್ ಮೇಲೆ ಹಲ್ಲೆ ಸೇರಿ ಐದು ಕೇಸ್ ಮಹೇಶ್ ಶೆಟ್ಟಿ ತಿಮರೋಡಿ ಮೇಲೆ ದಾಖಲಾಗಿದೆ.
2. 100ಕ್ಕೂ ಅಧಿಕ ಜನರು ಸೇರಿ ಆಸ್ಪತ್ರೆಯಲ್ಲಿ ಗಲಾಟೆ ಮಾಡಿ ದೊಂಬಿ ಪ್ರಕರಣದಲ್ಲಿ ಬೆಳ್ತಂಗಡಿ ಪೊಲೀಸರ ಸ್ವಯಂ ಪ್ರೇರಿತ ಕೇಸು
3. ಯೂ ಟ್ಯೂಬ್ ನಲ್ಲಿ ಪ್ರಚೋದನಕಾರಿ ಹೇಳಿಕೆ ಹಿನ್ನೆಲೆ ಚರಣ್ ಎಂಬವರ ದೂರಿನಡಿ ದಾಖಲಾದ ಎಫ್ಐಆರ್
4. ಮನೆಯಲ್ಲಿ ಅಕ್ರಮ ಶಸ್ತ್ರಾಸ್ತ್ರ ಸಿಕ್ಕಿದ ಹಿನ್ನೆಲೆ ಎಸ್ಐಟಿ ಎಸ್ಪಿ ಸೈಮನ್ ದೂರಿನಡಿ ದಾಖಲಾದ ಎಫ್ಐಆರ್
5. ಬ್ರಹ್ಮಾವರ ಪೊಲೀಸ್ ಠಾಣೆಯ ಪ್ರಕರಣದಲ್ಲಿ ದಸ್ತಗಿರಿ ಮಾಡಲು ಬಂದಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ ಕೇಸು
ಇದನ್ನೂ ಓದಿ: ನ.12ರವರೆಗೂ ಧರ್ಮಸ್ಥಳ ಪ್ರಕರಣದ ವಿಚಾರಣೆಗೆ ಹೈಕೋರ್ಟ್ ತಡೆ

