ಸಬ್ ಇನ್ಸ್‌ಪೆಕ್ಟರ್ ತಿಪ್ಪೇಶ್ ಪತ್ನಿ ನೇಣಿಗೆ ಶರಣು; ಪ್ರೀತಿಸಿ ಮದುವೆಯಾಗಿದ್ದ ಜೋಡಿ
ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ಬೀರೂರು ಪೊಲೀಸ್ ಠಾಣೆಯ ಸಬ್‌ಇನ್‌ಸ್ಪೆಕ್ಟರ್ ತಿಪ್ಪೇಶ್ ಅವರ 35 ವರ್ಷದ ಪತ್ನಿ ಪದ್ಮಾ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕೌಟುಂಬಿಕ ಕಲಹದಿಂದ ಈ ಘಟನೆ ನಡೆದಿದೆ ಎಂದು ಶಂಕಿಸಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಬೀರೂರು ಪೊಲೀಸ್ ಠಾಣೆಯ ಸಬ್‌ಇನ್‌ಸ್ಪೆಕ್ಟರ್ ತಿಪ್ಪೇಶ್
ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ಬೀರೂರು ಪೊಲೀಸ್ ಠಾಣೆಯ ಸಬ್‌ಇನ್‌ಸ್ಪೆಕ್ಟರ್ ತಿಪ್ಪೇಶ್ ಎಂಬವರ ಪತ್ನಿ ನೇಣು ಬಿಗಿದುಕೊಂಡು ಆತ್ಮ*ಹತ್ಯೆ ಮಾಡಿಕೊಂಡಿದ್ದಾರೆ. 35 ವರ್ಷದ ಪದ್ಮಾ ಮೃತ ಮಹಿಳೆ.
ಕೌಟುಂಬಿಕ ಕಲಹ?
ಕೌಟುಂಬಿಕ ಕಲಹದಿಂದ ನೊಂದು ಪದ್ಮಾ ಆತ್ಮ*ಹತ್ಯೆ ಮಾಡಿಕೊಂಡಿದ್ದಾರೆ ಎಂದು ಹೇಳಲಾಗುತ್ತಿದೆ. ಈ ಬಗ್ಗೆ ಪೊಲೀಸರು ಯಾವುದೇ ಮಾಹಿತಿಯನ್ನು ಖಚಿತಪಡಿಸಿಕೊಂಡಿಲ್ಲ. ರಾತ್ರಿ ಮನೆಯಲ್ಲಿ ಪದ್ಮಾ ನೇಣು ಬಿಗಿದುಕೊಂಡು ಪ್ರಾಣ ಕಳೆದುಕೊಂಡಿದ್ದಾರೆ.
ಬಾಡಿಗೆ ಮನೆಯಲ್ಲಿ ಘಟನೆ
ಪದ್ಮಾ ಮತ್ತು ತಿಪ್ಪೇಶ್ ಪ್ರೀತಿಸಿ ಅಂತರ್ಜಾತಿ ಮದುವೆಯಾಗಿದ್ದು, ದಂಪತಿಗೆ ಇಬ್ಬರು ಮಕ್ಕಳಿದ್ದಾರೆ. ಸಬ್ ಇನ್ಸ್‌ಪೆಕ್ಟರ್ ತಿಪ್ಪೇಶ್ ಬೀರೂರಿನ ಬಾಡಿಗೆ ಮನೆಯಲ್ಲಿ ಕುಟುಂಬ ಸಮೇತರಾಗಿ ವಾಸವಾಗಿದ್ದರು.ಇನ್ನು ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕಾಗಮಿಸಿರುವ ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ.
ಬೀರೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ
ಘಟನಾ ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡುವ ಸಾಧ್ಯತೆಗಳಿವೆ. ಸದ್ಯ ಪೊಲೀಸರು ಪದ್ಮಾ ಕುಟುಂಬಸ್ಥರಿಗಾಗಿ ಕಾಯುತ್ತಿದ್ದಾರೆ. ಬೀರೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಪ್ರಕರಣ ಸಂಬಂಧ ಹೆಚ್ಚಿನ ಮಾಹಿತಿ ಲಭ್ಯವಾಗಬೇಕಿದೆ.

