ಸಿದ್ದಾಂತ ರಾಜಕಾರಣದ ನಿಖಿಲ್ ಕುಮಾರಸ್ವಾಮಿ ಹೇಳಿಕೆಗೆ ಟಾಂಗ್ ಕೊಟ್ಟ ಬಿಜೆಪಿಯ ಪ್ರೀತಂ ಗೌಡ
ಜೆಡಿಎಸ್ ಸಿದ್ಧಾಂತದಲ್ಲಿ ರಾಜಿಯಿಲ್ಲ ಎಂಬ ನಿಖಿಲ್ ಕುಮಾರಸ್ವಾಮಿ ಹೇಳಿಕೆಗೆ, ಬಿಜೆಪಿ ಮುಖಂಡ ಪ್ರೀತಂ ಗೌಡ ಹಾಸನದಲ್ಲಿ ಪ್ರತಿಕ್ರಿಯಿಸಿ ಟಾಂಗ್ ನೀಡಿದ್ದಾರೆ. ಎನ್‌ಡಿಎ ನೇತೃತ್ವದಲ್ಲಿ ಮುಂದಿನ ಸಿಎಂ ಯಾರು ಮತ್ತು ಹಾಸನದ ಮುಂದಿನ ಅಭ್ಯರ್ಥಿ ತಾವೇ ಎಂಬ ವಿಶ್ವಾಸವನ್ನು ಅವರು ವ್ಯಕ್ತಪಡಿಸಿದ್ದಾರೆ.

ಸಿದ್ದಾಂತದಲ್ಲಿ ರಾಜೀ ಇಲ್ಲ
ಬಿಜೆಪಿ ಜೊತೆ ಮೈತ್ರಿ ಅಷ್ಟೇ, ಸಿದ್ದಾಂತದಲ್ಲಿ ರಾಜೀ ಇಲ್ಲ ಎಂಬ ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಹೇಳಿಕೆಗೆ ಹಾಸನದಲ್ಲಿ ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಪ್ರೀತಂ ಗೌಡ ಪ್ರತಿಕ್ರಿಯಿಸಿದ್ದಾರೆ. ನಿಖಿಲ್ ಕುಮಾರಸ್ವಾಮಿ ಹೇಳಿರೋದು ಸರಿ ಇದೆ, ಅವರಿಗೆ ಆಲ್ ದಿ ಬೆಸ್ಟ್ ಹೇಳುತ್ತೇನೆ ಎಂದು ಟಾಂಗ್ ನೀಡಿದರು.
ನನಗೆ ಗೊತ್ತಿಲ್ಲ
ನಮ್ಮ ಸಿದ್ಧಾಂತದ ಪ್ರಕಾರ ನಾವು ಕೆಲಸ ಮಾಡುತ್ತೇವೆ. ನಮ್ಮ ಪಕ್ಷದ ಸಿದ್ಧಾಂತ ಒಪ್ಪಿರುವ ಮತದಾರರು ನಮ್ಮೊಂದಿಗಿರುತ್ತಾರೆ. ಅವರಿಗೆ ಒಳ್ಳೆಯದಾಗಲಿ, ಇನ್ನೇನು ಹೇಳಬಹುದು.ಪ್ರಶ್ನೆ ಸರಿ ಇದೆ, ವ್ಯಕ್ತಿ ತಪ್ಪಿದೆ, ಜೆಡಿಎಸ್ ನಾಯಕರುಗಳಿಗೆ ಕೇಳಿ ಎಂದು ಪ್ರಶ್ನೆ ಮಾಡಿದರು. ಕೇಂದ್ರ ಸರ್ಕಾರದಲ್ಲಿ ಮಂತ್ರಿಯಾಗಿರುವ ಕುಮಾರಣ್ಣನವರು, ನಮ್ಮ ಎನ್‌ಡಿಎ ನಾಯಕರು, ಅವರು ಅದಕ್ಕೆ ಒಪ್ಪುತ್ತಾರೋ ಇಲ್ವೋ ನನಗೆ ಗೊತ್ತಿಲ್ಲ ಎಂದರು.
ಕಾದು ನೋಡೋಣ
ಹೆಚ್ ಡಿ ಕುಮಾರಸ್ವಾಮಿ ಮುಂದಿನ ಸಿಎಂ ಎಂಬ ಜೆಡಿಎಸ್ ನಾಯಕರ ಹೇಳಿಕೆಗೆ ಪ್ರತಿಕ್ರಿಯಿಸಿದ ಪ್ರೀತಂ ಗೌಡ, ಎನ್‌ಡಿಎ ನೇತೃತ್ವದಲ್ಲಿ ಸಿಎಂ ಆಗ್ತಾರೆ, ಆದರೆ ಯಾರು ಸಿಎಂ ಆಗ್ತಾರೆ ಅನ್ನೋದು ಆವತ್ತಿನ ದಿನದಲ್ಲಿ ತೀರ್ಮಾನ ಆಗುತ್ತದೆ. ಮಹಾರಾಷ್ಟ್ರದಲ್ಲಿ ದೇವೇಂದ್ರ ಫಡ್ನವೀಸ್ ಆದ ಹಾಗೇ, ಬಿಹಾರದಲ್ಲಿ ಸಾಮ್ರಾಟ ಚೌಧರಿ ಆದ ರೀತಿಯಲ್ಲಿಯೇ ಕರ್ನಾಟಕದಲ್ಲೂ ಒಬ್ಬರು ಮುಖ್ಯಮಂತ್ರಿಯಾಗ್ತಾರೆ.ಕಾದು ನೋಡೋಣ ಎಂದು ಹೇಳಿದರು.
ಗೌರವವನ್ನು ಕಾಪಾಡಿಕೊಂಡು ರಾಜಕಾರಣ
ನಿಖಿಲ್ ಯುವಕರಾಗಿದ್ದು. ಅವರು ಅವರ ಪಕ್ಷ ಸಿದ್ದಾಂತದ ಬಗ್ಗೆ ಮಾತಾಡಿದ್ದಾರೆ. ಅವರಿಗೆ ಆಲ್ ದಿ ಬೆಸ್ಟ್ ಒಳ್ಳೆಯದಾಗಲಿ ಎಂದು ಟಾಂಗ್ ನೀಡಿದರು. ಹೆಚ್‌ಡಿಕೆ ಮುಂದಿನ ಸಿಎಂ ಆಗ್ತಾರೆ ಎಂದು ಜೆಡಿಎಸ್ ನಾಯಕರು ತಮ್ಮ ಮನಸ್ಸಿನ ಮಾತನ್ನು ಹೇಳಿಕೊಂಡಿದ್ದಾರೆ. ನನ್ನ ಮನಸ್ಸಿನ ಇಚ್ಚೆ ನಾನು ಸಾರ್ವಜನಿಕವಾಗಿ ಹೇಳಿದ್ರೆ ಪ್ರಧಾನ ಕಾರ್ಯದರ್ಶಿ ಹುದ್ದೆಗೆ ಗೌರವ ತರಲ್ಲ. ನಾನು ಗೌರವವನ್ನು ಕಾಪಾಡಿಕೊಂಡು, ರಾಜಕಾರಣವನ್ನು ಮಾಡುವಂತ ಅನಿವಾರ್ಯತೆ ಇದೆ. ಹಾಗಾಗಿ ನಾನು ತಾಳ್ಮೆಯಿಂದ ಇದ್ದೀನಿ ಎಂದು ಹೇಳಿದರು.
ಇದನ್ನೂ ಓದಿ: ಉತ್ತಮ ಜನಪ್ರತಿನಿಧಿಗಳನ್ನು ರೂಪಿಸಲು ರಾಜಕೀಯ ಕಾಲೇಜು ಆರಂಭಿಸುವ ಚಿಂತನೆ ಇದ ಹೊರಟ್ಟಿ
ಮ್ಯಾರಥಾನ್ ರೇಸ್ ಪಾಲಿಟಿಕ್ಸ್
ಮ್ಯಾರಥಾನ್ ರೇಸ್ ಪಾಲಿಟಿಕ್ಸ್. 100 ಮೀಟರ್ ಓಡೋರು ಓಡಲಿ, ಸುಸ್ತಾಗಿ ನೀರು ಕುಡಿಯೋಕೆ ಕೂರುತ್ತಾರೆ. ನಾನು ಮ್ಯಾರಥಾನ್ ರೇಸ್ ನಿಧಾನವಾಗಿ ಓಡ್ತೀನಿ, ಎಲ್ಲರ ಸಹಕಾರ ಇರಲಿ. ಹಾಸನ ಕ್ಷೇತ್ರಕ್ಕೆ ಮುಂದಿನ ಕ್ಯಾಂಡಿಡೇಟ್ ನೀವೇನಾ ಎಂಬ ಪ್ರಶ್ನೆಗೆ ನಗುತ್ತಲೆ ಉತ್ತರಿಸಿದ ಪ್ರೀತಂ ಗೌಡ, ಯಾರಿಗೇನು ಅನುಮಾನ ಇದೆಯಾ ಎಂದು ನಾನೇ ಮುಂದಿನ ಕ್ಯಾಂಡಿಡೇಟ್ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಇದನ್ನೂ ಓದಿ: ದಾವಣಗೆರೆ: ನಸೀರ್ ವಿರುದ್ಧ ಕಾಂಗ್ರೆಸ್ ಕ್ರಮ ಸಮರ್ಥಿಸಿದ ಸಂಸದೆ ಪ್ರಭಾ ಮಲ್ಲಿಕಾರ್ಜುನ,
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

