- Home
- Entertainment
- Sandalwood
- ಕಿಚ್ಚ ಸುದೀಪ್ 47ನೇ ಚಿತ್ರದಲ್ಲಿ ನಿಶ್ವಿಕಾ ನಾಯ್ಡು: ಸಿಕ್ಸ್ ಪ್ಯಾಕ್ ಸುಂದರಿ ಪಾತ್ರವೇನು ಗೊತ್ತಾ?
ಕಿಚ್ಚ ಸುದೀಪ್ 47ನೇ ಚಿತ್ರದಲ್ಲಿ ನಿಶ್ವಿಕಾ ನಾಯ್ಡು: ಸಿಕ್ಸ್ ಪ್ಯಾಕ್ ಸುಂದರಿ ಪಾತ್ರವೇನು ಗೊತ್ತಾ?
ಕಿಚ್ಚ ಸುದೀಪ್ ಅವರ 47ನೇ ಚಿತ್ರ K47 ಬಗ್ಗೆ ದಿನೇ ದಿನೇ ನಿರೀಕ್ಷೆಗಳು ಹೆಚ್ಚಾಗುತ್ತಿವೆ. ಸದ್ಯ ಚಿತ್ರಕ್ಕೆ ನಿಶ್ಚಿಕಾ ನಾಯ್ಡು ಎಂಟ್ರಿಕೊಟ್ಟಿದ್ದಾರೆ ಎನ್ನಲಾಗಿದೆ.

ಕಿಚ್ಚ ಸುದೀಪ್ ಅವರ 47ನೇ ಚಿತ್ರ K47 ಬಗ್ಗೆ ದಿನೇ ದಿನೇ ನಿರೀಕ್ಷೆಗಳು ಹೆಚ್ಚಾಗುತ್ತಿವೆ. 2025ರಲ್ಲಿಯೇ ಈ ಚಿತ್ರವನ್ನು ಬಿಡುಗಡೆ ಮಾಡಲು ನಿರ್ಧರಿಸಿರುವುದರಿಂದ, ಈ ಚಿತ್ರದ ಚಿತ್ರೀಕರಣ ವೇಗವಾಗಿ ನಡೆಯುತ್ತಿದೆ.
ಸುದೀಪ್ ನಟನೆಯ 47ನೇ ಚಿತ್ರಕ್ಕೆ ನಿಶ್ಚಿಕಾ ನಾಯ್ಡು ಎಂಟ್ರಿಕೊಟ್ಟಿದ್ದಾರೆ ಎನ್ನಲಾಗಿದೆ. ಈ ಚಿತ್ರದಲ್ಲಿ ನಾಯಕಿ ಪಾತ್ರವನ್ನು ದೀಪ್ಷಿಕಾ ನಿರ್ವಹಿಸುತ್ತಿದ್ದು, ನಿಶ್ವಿಕಾ ಮುಖ್ಯ ಪಾತ್ರವೊಂದರಲ್ಲಿ ನಟಿಸುತ್ತಿದ್ದಾರಂತೆ. ಈ ವಿಚಾರವನ್ನು ಚಿತ್ರತಂಡ ಇನ್ನಷ್ಟೇ ಅಧಿಕೃತಗೊಳಿಸಬೇಕಿದೆ.
‘ಮ್ಯಾಕ್ಸ್’ ನಿರ್ದೇಶಕ ವಿಜಯ್ ಕಾರ್ತಿಕೇಯನ್ ನಿರ್ದೇಶನದ ಈ ಸಿನಿಮಾದ ಶೂಟಿಂಗ್ ಸದ್ಯ ಚೆನ್ನೈಯಲ್ಲಿ ಭರದಿಂದ ನಡೆಯುತ್ತಿದೆ. ಈ ವರ್ಷವೇ ಸಿನಿಮಾ ರಿಲೀಸ್ ಮಾಡುವ ಇರಾದೆಯಲ್ಲಿ ಚಿತ್ರತಂಡವಿದೆ. ಸತ್ಯಜ್ಯೋತಿ ಫಿಲಂ ಚಿತ್ರಕ್ಕೆ ಬಂಡವಾಳ ಹೂಡಿದೆ.
ನಾಯಕ ಹಾಗೂ ಖಳನಾಯಕನ ಪಾತ್ರಗಳಲ್ಲಿ ತಮ್ಮದೇ ಆದ ಛಾಫು ಮೂಡಿಸಿರುವ ನವೀನ್ ಚಂದ್ರ ಮುಖ್ಯ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ವಿಜಯ ಕಾರ್ತಿಕೇಯ ನಿರ್ದೇಶನದ ಈ ಚಿತ್ರ ತಮಿಳಿನಲ್ಲೂ ಮೂಡಿಬರಲಿದೆ.
ಈ ಚಿತ್ರಕ್ಕೆ ಮ್ಯಾಕ್ಸ್ ಚಿತ್ರಕ್ಕಾಗಿ ಕೆಲಸ ಮಾಡಿದ್ದ ತಾಂತ್ರಿಕ ತಂಡವೇ ಕೆಲಸ ಮಾಡಿದ್ದು, ಅಜನೀಶ್ ಲೋಕನಾಥ್ ಸಂಗೀತ ಸಂಯೋಜಿಸಿದ್ದಾರೆ ಮತ್ತು ಶೇಖರ್ ಚಂದ್ರು ಛಾಯಾಗ್ರಹಣವನ್ನು ನಿರ್ವಹಿಸಿದ್ದಾರೆ.
ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.

