ಆಟೋ ಚಾಲಕನಾದ 'ರಾಮಾ ರಾಮಾ ರೇ' ನಿರ್ದೇಶಕ ಸತ್ಯ ಪ್ರಕಾಶ್: ಕಾರಣವೇನು?
ಆಟೋ ಚಾಲಕ ಟಗರು ಶಿವ ಅವರ ಸಾರಥ್ಯದಲ್ಲಿ ಅನೇಕ ಆಟೋ ಚಾಲಕರು ರೀಲ್ಸ್ ಮೂಲಕ ಈ ಬಗ್ಗೆ ಜನರಿಗೆ ಜಾಗೃತಿ ಮೂಡಿಸುವ ಮೂಲಕ ಚಿತ್ರಕ್ಕೆ ವಿಶೇಷವಾಗಿ ಪ್ರಚಾರ ಕೊಡುತ್ತಿದ್ದಾರೆ.

ಬಿಡುಗಡೆಯ ಹಂತಕ್ಕೆ ಬಂದಿರುವ ‘ಎಕ್ಸ್ ಆಂಡ್ ವೈ’ ಚಿತ್ರದಲ್ಲಿ ‘ಆಂಬು ಆಟೋ‘ ಹೆಸರಿನ ಆಟೋ ಪಾತ್ರವನ್ನು ವಿಶೇಷವಾಗಿ ಪರಿಚಯಿಸಲಾಗಿದೆ. ಈ ಪಾತ್ರಕ್ಕೆ ಆಟೋ ಚಾಲಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಆಟೋ ಚಾಲಕ ಟಗರು ಶಿವ ಅವರ ಸಾರಥ್ಯದಲ್ಲಿ ಅನೇಕ ಆಟೋ ಚಾಲಕರು ರೀಲ್ಸ್ ಮೂಲಕ ಈ ಬಗ್ಗೆ ಜನರಿಗೆ ಜಾಗೃತಿ ಮೂಡಿಸುವ ಮೂಲಕ ಚಿತ್ರಕ್ಕೆ ವಿಶೇಷವಾಗಿ ಪ್ರಚಾರ ಕೊಡುತ್ತಿದ್ದಾರೆ. ಇದು ‘ರಾಮಾ ರಾಮಾ ರೇ’ ಚಿತ್ರದ ನಿರ್ದೇಶಕ ಸತ್ಯ ಪ್ರಕಾಶ್ ನಟಿಸುತ್ತಿರುವ ಚಿತ್ರ.
ಈ ಚಿತ್ರದಲ್ಲಿ ಸತ್ಯ ಪ್ರಕಾಶ್ ಅವರು ಆಟೋ ಚಾಲನಕನ ಪಾತ್ರ ಮಾಡುತ್ತಿದ್ದಾರೆ. ‘ಆಂಬು ಆಟೋ’ದಲ್ಲಿ ಆ್ಯಂಬುಲೆನ್ಸ್‌ನಲ್ಲಿ ಎಲ್ಲ ಸೌಲಭ್ಯಗಳಿವೆ. ಆಟೋದಲ್ಲೂ ಇಷ್ಟು ಸೌಲಭ್ಯಗಳನ್ನು ಅಳವಡಿಸಬಹುದು ಎಂಬುದನ್ನು ಈ ಚಿತ್ರದ ಮೂಲಕ ತೋರಿಸಲಾಗಿದೆ.
ಇದು ಇವತ್ತಿನ ಜನರೇಷನ್ ಕಥೆ. ಅಪ್ಪ-ಅಮ್ಮ ಆದವರ, ಅಪ್ಪ-ಅಮ್ಮ ಆಗುತ್ತಿರುವವರ, ಅಪ್ಪ –ಅಮ್ಮ ಆಗಬೇಕು ಎಂದುಕೊಂಡವರ ಕಥೆ. ಹಾಗೆಯೇ ಇವತ್ತಿನ ಹುಡುಗ-ಹುಡುಗಿಯರ ಕಥೆ, ಇವತ್ತಿನ ಮಕ್ಕಳ ಕಥೆ.
ಇದೊಂದು ಕಾಮಿಡಿ ಜಾನರ್ ಸಿನಿಮಾ ಆಗಿದ್ದು ಅತಿ ಸೂಕ್ಷ್ಮ ವಿಚಾರಗಳನ್ನು ಅಷ್ಟೇ ಸರಳವಾಗಿ ಅದರಲ್ಲೂ ನಗುನಗುತ್ತಾ ನೋಡುವಂತಹ ಕಥೆಯಾಗಿ ನಿಮ್ಮ ಮುಂದೆ ತರುತ್ತಿದ್ದೇವೆ ಎಂದರು ನಿರ್ದೇಶಕ ಸತ್ಯ ಪ್ರಕಾಶ್.
ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.

