- Home
- Entertainment
- Sandalwood
- ಹೆಣ್ಣಿನ ಚಾರಿತ್ರ್ಯದ ಬಗ್ಗೆ ಕೀಳು ಮಟ್ಟದ ಸುಳ್ಳು ಆರೋಪ ಮಾಡಿರುವುದು ನೋವು ಮಾಡಿದೆ: ಶ್ರೀದೇವಿ ಬೈರಪ್ಪ
ಹೆಣ್ಣಿನ ಚಾರಿತ್ರ್ಯದ ಬಗ್ಗೆ ಕೀಳು ಮಟ್ಟದ ಸುಳ್ಳು ಆರೋಪ ಮಾಡಿರುವುದು ನೋವು ಮಾಡಿದೆ: ಶ್ರೀದೇವಿ ಬೈರಪ್ಪ
ಯುವ ರಾಜ್‌ಕುಮಾರ್ ಮಾಡಿರುವ ಆರೋಪಕ್ಕೆ ಮತ್ತು ಕಳುಹಿಸಿರುವ ನೋಟಿಸ್‌ಗೆ ಶ್ರೀದೇವಿ ಬೈರಪ್ಪ ಪ್ರತಿಕ್ರಿಯೆ ನೀಡಿದ್ದಾರೆ.

ನಟ ಯುವ ರಾಜ್‌ಕುಮಾರ್ ಮತ್ತು ಶ್ರೀದೇವಿ ಬೈರಪ್ಪ ನಾಲ್ಕು ವರ್ಷಗಳ ದಾಂಪತ್ಯ ಜೀವನಕ್ಕೆ ಅಂತ್ಯವಾಡಲು ಮುಂದಾಗಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಆರೋಪ ಪ್ರತಿಆರೋಪ ಹೆಚ್ಚಾಗುತ್ತಿದೆ.
ಯುವ ರಾಜ್‌ಕುಮಾರ್ ನೋಟಿಸ್ ಕಳುಹಿಸಿರುವ ಪ್ರಕಾರ ಹಾಗೂ ಶ್ರೀದೇವಿ ವಿರುದ್ಧ ಮಾನಸಿಕ ಆರೋಪ ಮಾಡಿರುವ ಕಾರಣ ಬೇಸರ ವ್ಯಕ್ತ ಪಡಿಸಿದ್ದಾರೆ.
ವೃತ್ತಿಪರ ಸೌಹಾರ್ದತೆಯನ್ನು ಕಾಯ್ತುಕೊಳ್ಳಬೇಕಾದ ವ್ಯಕ್ತಿಯೇ ಸಾರ್ವಜನಿಕವಾಗಿ ಒಬ್ಬ ಹೆಣ್ಣಿನ ಚಾರಿತ್ರ್ಯದ ಬಗ್ಗೆ ಕೀಳು ಮಟ್ಟದ ಸುಳ್ಳು ಅರೋಪಗಳನ್ನು ಮಾಡುತ್ತಿರುವುದು ಅತ್ಯಂತ ದುರದೃಷ್ಟಕರ ಹಾಗೂ ಬಹಳ ನೋವುಂಟು ಮಾಡಿದೆ ಎಂದು ಶ್ರೀದೇವಿ ಬರೆದುಕೊಂಡಿದ್ದಾರೆ.
ಕಳೆದ ಕೆಲವು ತಿಂಗಳಿಂದ ಆದ ಅನೇಕ ನೋವುಗಳ ಹೊರತಾಗಿಯೂ ನಾನು ಕುಟುಂಬದ ಗೌರವ ಕಾಪಾಡಿಕೊಳ್ಳಲು, ಮೌನವಾಗಿದ್ದೇ ಎಂದು ಶ್ರೀದೇವಿ ಹೇಳಿದ್ದಾರೆ.
ಆದರೆ ನನ್ನ ಸಭ್ಯತೆ ಹಾಗೂ ಮಾನವೀಯತೆಯನ್ನು ಗೌರವಿಸದೆ, ಕೀಳು ಮಟ್ಟದ ಆರೋಪಗಳನ್ನು ಮಾಡುತ್ತಿರುವುದು ದುರದೃಷ್ಟಕರ. ಸತ್ಯ ಮತ್ತು ನ್ಯಾಯವು ಖಂಡಿತ ಮೇಲುಗೈ ಸಾಧಿಸುತ್ತದೆ ಎಂದು ನಾನು ನಂಬಿದ್ದೇನೆ ಎಂದಿದ್ದಾರೆ ಶ್ರೀದೇವಿ.
ಯುವ ಕಳುಹಿಸಿರುವ ನೋಟಿಸ್‌ಗೆ ಶ್ರೀದೇವಿ ಪ್ರತಿಕ್ರಿಯೆ ನೀಡಿದ್ದಾರೆ. ಈ ನೋಟಿಸ್‌ನಲ್ಲಿ ಕನ್ನಡ ಚಿತ್ರರಂಗದ ಖ್ಯಾತ ನಟಿಯ ಹೆಸರನ್ನು ಸೇರಿಸಿದ್ದಾರೆ. ದೊಡ್ಡ ಮನೆಯಿಂದ ಶ್ರೀದೇವಿ ದೂರವಾಗಿದ್ದಾರೆ.
ಸಾಮಾಜಿಕ ಜಾಲತಾಣದಲ್ಲಿ ಶ್ರೀದೇವಿ ಪರ ಅನೇಕರು ಧ್ವನಿ ಎತ್ತಿದ್ದಾರೆ. ಪುನೀತ್ ರಾಜ್‌ಕುಮಾರ್ ಅವರನ್ನು ಯುವ ಅವರಲ್ಲಿ ಕಾಣುತ್ತಿದ್ದೀವಿ ಎನ್ನುತ್ತಿದ್ದವರು ಈಗ ಬೇಸರ ವ್ಯಕ್ತ ಪಡಿಸುತ್ತಿದ್ದಾರೆ.
ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.