- Home
- Entertainment
- Sandalwood
- 'ಸೆಲೆಬ್ರಿಟಿ ಕ್ರಿಕೆಟ್ ಟೂರ್ನಿ' ವೇಳೆ ನೀಚರಿಂದ ಶೌಚಾಲಯದಲ್ಲಿದ್ದ ನಟಿಯ ವಿಡಿಯೋ ರೆಕಾರ್ಡ್
'ಸೆಲೆಬ್ರಿಟಿ ಕ್ರಿಕೆಟ್ ಟೂರ್ನಿ' ವೇಳೆ ನೀಚರಿಂದ ಶೌಚಾಲಯದಲ್ಲಿದ್ದ ನಟಿಯ ವಿಡಿಯೋ ರೆಕಾರ್ಡ್
ಬೆಂಗಳೂರಿನಲ್ಲಿ ನಡೆದ ಮಹಿಳಾ ಸೆಲೆಬ್ರಿಟಿ ಕ್ರಿಕೆಟ್ ಟೂರ್ನಿ ವೇಳೆ ನಟಿಯೊಬ್ಬರ ಶೌಚಾಲಯದ ವಿಡಿಯೋವನ್ನು ರಹಸ್ಯವಾಗಿ ಚಿತ್ರೀಕರಿಸಲಾಗಿದೆ. ಈ ವಿಡಿಯೋ ಇಟ್ಟುಕೊಂಡು ಹಣಕ್ಕಾಗಿ ಬ್ಲ್ಯಾಕ್ಮೇಲ್ ಮಾಡುತ್ತಿದ್ದು, ನಟಿ ಸೈಬರ್ ಕ್ರೈಂ ಪೊಲೀಸರಿಗೆ ದೂರು ನೀಡಿದ್ದಾರೆ.

ಸೆಲೆಬ್ರಿಟಿ ಕ್ರಿಕೆಟ್ ಟೂರ್ನಿ
ಸೆಲೆಬ್ರಿಟಿ ಕ್ರಿಕೆಟ್ ಟೂರ್ನಿ ವೇಳೆ ಆಘಾತಕಾರಿ ಘಟನೆಯೊಂದು ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ನಟಿಯ ಶೌಚಾಲಯದ ವಿಡಿಯೋ ಮಾಡಿದ ನೀಚರು ಬ್ಲ್ಯಾಕ್ಮೇಲ್ ಮಾಡಿದ್ದಾರೆ. ಈ ಸಂಬಂಧ ಬೆಂಗಳೂರು ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ಕೋರಮಂಗಲದ ಸ್ಟೇಡಿಯಂ
ಇತ್ತೀಚೆಗಷ್ಟೆ ಬೆಂಗಳೂರಿನ ಕೋರಮಂಗಲದ ಸ್ಟೇಡಿಯಂನಲ್ಲಿ ಮಹಿಳಾ ಸೆಲೆಬ್ರಿಟಿ ಕ್ರಿಕೆಟ್ ಟೂರ್ನಿ ನಡೆದಿತ್ತು. ಈ ಟೂರ್ನಿಯಲ್ಲಿ ಚಂದನವನ ಮತ್ತು ಕಿರುತೆರೆ ನಟಿಯರು ಭಾಗಿಯಾಗಿದ್ದರು. ಸಂತ್ರಸ್ತೆ ನಟಿ ರಿಯಾಲಿಟಿ ಶೋವೊಂದರ ಸ್ಪರ್ಧಿಯಾಗಿದ್ದಾರೆ.
ರಹಸ್ಯವಾಗಿ ವಿಡಿಯೋ
ಸಂತ್ರಸ್ತೆ ನಟಿ ವಾಶ್ ರೂಮ್ಗೆ ತೆರಳಿದ ಸಂದರ್ಭದಲ್ಲಿ ರಹಸ್ಯವಾಗಿ ವಿಡಿಯೋ ಮಾಡಲಾಗಿದೆ. ಸೆಲೆಬ್ರಿಟಿ ಕ್ರಿಕೆಟ್ ಟೂರ್ನಿ ಮುಗಿದ ಬಳಿಕ ನಟಿಯ ಆಪ್ತ ಗೆಳತಿಯ ಇನ್ಸ್ಟಾಗ್ರಾಂಗೆ ವಿಡಿಯೋ ಕಳುಹಿಸಲಾಗಿದೆ. ನಮ್ಮಲ್ಲಿ ಇದೇ ರೀತಿಯ ಮೂರ್ನಾಲ್ಕು ವಿಡಿಯೋಗಳಿದ್ದು, ಹಣಕ್ಕಾಗಿ ಬ್ಲ್ಯಾಕ್ಮೇಲ್ ಮಾಡಿದ್ದಾರೆ.
ತನಿಖೆ ಆರಂಭ
ಈ ವಿಷಯ ತಿಳಿಯುತ್ತಿದ್ದಂತೆ ನಟಿ, ಬೆಂಗಳೂರು ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ದೂರಿನನ್ವಯ ಪೊಲೀಸರು ಬಿಎನ್ಎಸ್ ಸೆಕ್ಷನ್ 77, 351 ಮತ್ತು 308ರ ಅಡಿ ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.
ಇದನ್ನೂ ಓದಿ: ಅನಿಲ್ ಕಪೂರ್ ಯೌವನದ ಹಿಂದೆ ಅಡಗಿದ ಆ ಸಂಖ್ಯೆಯ ರಹಸ್ಯ!
ಸಿಸಿಟಿವಿ ದೃಶ್ಯ ಪರಿಶೀಲನೆ
ಈ ವಿಷಯ ತಿಳಿಯುತ್ತಿದ್ದಂತೆ ಚಂದನವನದ ಕಲಾವಿದರು ಆಘಾತಗೊಂಡಿದ್ದಾರೆ. ಪೊಲೀಸರು ಕೋರಮಂಗಲದಲ್ಲಿ ನಡೆದ ಟೂರ್ನಿಯ ವಿಡಿಯೋ ಮತ್ತು ಕ್ರೀಡಾಂಗಣದಲ್ಲಿರುವ ಎಲ್ಲಾ ಸಿಸಿಟಿವಿ ದೃಶ್ಯಗಳನ್ನು ಪರಿಶೀಲನೆ ನಡೆಸುತ್ತಿದ್ದಾರೆ. ಕೇಳಿದಷ್ಟು ಹಣ ನೀಡದಿದ್ರೆ ವಿಡಿಯೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಮಾಡುವ ಬೆದರಿಕೆಯನ್ನು ಹಾಕಿದ್ದಾನೆ.
ಇದನ್ನೂ ಓದಿ: Rajpal Yadav Bail: ಕೊನೆಗೂ ಹೋರಾಟಕ್ಕೆ ಫಲ; ನಟ ರಾಜ್ಪಾಲ್ ಯಾದವ್ಗೆ ಸಿಕ್ತು ಮಧ್ಯಂತರ ಜಾಮೀನು!
ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್ಡೇಟ್ಸ್, ತೆರೆಮರೆಯ ಕಥೆಗಳು, OTT ರಿಲೀಸ್ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.

