ಬೆಂಗಳೂರು ದರೋಡೆ: 7 ಕೋಟಿಯಲ್ಲಿ ಸಿಕ್ಕಿದ್ದು 6.29 ಕೋಟಿ, ಆ ಪ್ರಮುಖ ಸಾಕ್ಷ್ಯ ಎಲ್ಲಿದೆ?
ಬೆಂಗಳೂರಿನ ಎಚ್‌ಡಿಎಫ್‌ಸಿ ಬ್ಯಾಂಕ್‌ನ 7 ಕೋಟಿ ರೂ. ದರೋಡೆ ಪ್ರಕರಣದಲ್ಲಿ ಪೊಲೀಸರು 7 ಆರೋಪಿಗಳನ್ನು ಬಂಧಿಸಿ 6.29 ಕೋಟಿ ರೂ. ವಶಪಡಿಸಿಕೊಂಡಿದ್ದಾರೆ. ಗೃಹ ಸಚಿವ ಜಿ. ಪರಮೇಶ್ವರ ಅವರು ಪೊಲೀಸರನ್ನು ಅಭಿನಂದಿಸಿದ್ದು, ಪ್ರಕರಣದ ಪ್ರಮುಖ ಸಾಕ್ಷ್ಯವಾದ ಸಿಎಂಎಸ್ ವಾಹನದ ಡಿವಿಆರ್ ಇನ್ನೂ ಪತ್ತೆಯಾಗಿಲ್ಲ.

ಬೆಂಗಳೂರು ದರೋಡೆ ಪ್ರಕರಣ
ಎಚ್‌ಡಿಎಫ್‌ಸಿ ಬ್ಯಾಂಕ್‌ನ ಏಳು ಕೋಟಿ ರು. ದರೋಡೆ ಪ್ರಕರಣದ ತನಿಖೆಯ ಕುರಿತು ಗೃಹ ಸಚಿವ ಡಾ.ಜಿ.ಪರಮೇಶ್ವರ ಅವರು, ಹಿರಿಯ ಪೊಲೀಸ್ ಅಧಿಕಾರಿಗಳೊಂದಿಗೆ ಚರ್ಚಿಸಿ ಕೆಲವು ಸೂಚನೆಗಳನ್ನು ನೀಡಿದರು. ಸದಾಶಿವನಗರದ ತಮ್ಮ ನಿವಾಸದಲ್ಲಿ ನಗರ ಪೊಲೀಸ್ ಆಯುಕ್ತ ಸೀಮಂತ್‌ಕುಮಾರ್‌ಸಿಂಗ್, ಜಂಟಿ ಪೊಲೀಸ್ ಆಯುಕ್ತರಾದ ಅಜಯ್ ಹಿಲೋರಿ, ವಂಶಿಕೃಷ್ಣ ಅವರೊಂದಿಗೆ ಚರ್ಚಿಸಿದರು.
ಸಿಬ್ಬಂದಿಗೆ ಅಭಿನಂದನೆ
₹7.11 ಕೋಟಿ ದರೋಡೆ ಪ್ರಕರಣದಲ್ಲಿ ಏಳು ಆರೋಪಿಗಳನ್ನು ಬೆಂಗಳೂರು ನಗರ ಪೊಲೀಸರು ಹಿಡಿದಿದ್ದಾರೆ. ಪೊಲೀಸ್ ಇಲಾಖೆಯಲ್ಲಿ ಎಚ್ಚರಿಕೆ ವಹಿಸುವಂತೆ ಹಿರಿಯ ಅಧಿಕಾರಿಗಳಿಗೆ ಕೆಲ ಸೂಚನೆಗಳನ್ನು ಕೊಟ್ಟಿದ್ದೇನೆ. ಪ್ರಕರಣದ ಜವಾಬ್ದಾರಿ ವಹಿಸಿಕೊಂಡ ಇಬ್ಬರು ಜಂಟಿ ಪೊಲೀಸ್ ಆಯುಕ್ತರಿಗೆ, ಇಬ್ಬರು ಡಿಸಿಪಿಗಳು ಮತ್ತು 200ಕ್ಕೂ ಹೆಚ್ಚು ಸಿಬ್ಬಂದಿಗೆ ಅಭಿನಂದನೆಗಳನ್ನು ಸಲ್ಲಿಸುತ್ತೇನೆ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಎಂದರು.
ಸಿಕ್ಕಿದೆ 6.29 ಕೋಟಿ
ಬೆಂಗಳೂರಿಗೆ ಕೆಟ್ಟ ಹೆಸರು ಬರುವ ರೀತಿ ಈ ಕೃತ್ಯ ಆಗಿತ್ತು. ಈ ಘಟನೆ ಪೊಲೀಸ್ ಇಲಾ ಖೆಗೂ ಸವಾಲಾಗಿತ್ತು. 6.29 ಕೋಟಿ ರು. ಹಣ ಸಿಕ್ಕಿದೆ. ಬಾಕಿ ಹಣ ಪತ್ತೆ ಹಚ್ಚುತ್ತಾರೆ. ಈ ಪ್ರಕರಣ ಪೊಲೀಸ್ ಇಲಾಖೆಗೆ ಸವಾಲಾಗಿತ್ತು. ತಾಂತ್ರಿಕವಾಗಿ, ಬಹಳ ಎಚ್ಚರಿಕೆಯಿಂದ ಬುದ್ಧಿ ಉಪಯೋಗಿಸಿ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿ ಕೆಲಸ ಮಾಡಿ ಪ್ರಕರಣವನ್ನು ಭೇದಿಸಿದ್ದಾರೆ ಎಂದು ಹೇಳಿದರು.
ನಿರ್ದಾಕ್ಷಿಣ್ಯ ಕ್ರಮ
ಘಟನೆ ಹಿನ್ನೆಲೆಯಲ್ಲಿ ಇನ್ನು ಮುಂದೆ ಇಲಾಖೆಯಲ್ಲಿ ಎಚ್ಚರಿಕೆಯಿಂದ ಇರಲು ಅಧಿಕಾರಿಗಳಿಗೆ ಸೂಚಿಸಿದ್ದೇನೆ. ಈ ರೀತಿಯ ಕೃತ್ಯದಲ್ಲಿ ಇಲಾಖೆಯ ಯಾರಾದರೂ ಭಾಗಿಯಾಗುವುದು ಕಂಡು ಬಂದರೆ ನಿರ್ದಾಕ್ಷಿಣ್ಯ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಸಚಿವ ಜಿ.ಪರಮೇಶ್ವರ್ ತಿಳಿಸಿದರು .
ಇದನ್ನೂ ಓದಿ: ಕೋರ್ಟ್‌ಗೆ ಹಾಜರುಪಡಿಸದ ಆರೋಪಿಗೆ ಜಾಮೀನು ಮಂಜೂರು! ಏನಿದು ಪ್ರಕರಣ?
ಪತ್ತೆಯಾಗದ ಸಿಎಂಎಸ್ ವಾಹನದ ಡಿವಿಆರ್
ಈವರೆಗೆ ಸಿಎಂಎಸ್ ವಾಹನದ ಡಿವಿಆರ್ ಪತ್ತೆಯಾಗಿಲ್ಲ ಎಂದು ತಿಳಿದು ಬಂದಿದೆ. ಸಿಸಿಟಿವಿ ದೃಶ್ಯಾವಳಿ ಸಂಗ್ರಹದ ಡಿವಿಆರ್ ನಾಪತ್ತೆಯಾಗಿದ್ದು, ಆರೋಪಿಗಳು ಚಿತ್ತೂರು ಭಾಗದ ಅರಣ್ಯ ಪ್ರದೇಶದಲ್ಲಿ ಎಸೆದಿದ್ದರು. ದರೋಡೆ ವೇಳೆ ಡಿವಿಆರ್ ತಮ್ಮ ಜೊತೆಯಲ್ಲಿಯೇ ತೆಗೆದುಕೊಂಡು ಹೋಗಿದ್ದರು. ಪ್ರಮುಖ ಸಾಕ್ಷ್ಯವಾಗಿರುವ ಡಿವಿಆರ್ ಹುಡುಕಾಟಕ್ಕೆ ಪೊಲೀಸರು ಮುಂದಾಗಿದ್ದಾರೆ.
ಇದನ್ನೂ ಓದಿ: ಬೆಂಗಳೂರು ದರೋಡೆ ಕೇಸ್: ಹೊಸಕೋಟೆ ಕೆರೆ ಬಳಿ ಹಣ ಇರಿಸಿ ಎಸ್ಕೇಪ್ ಆಗಿತ್ತು ಗ್ಯಾಂಗ್!
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

