- Home
- News
- State
- ರಾಜ್ಯದಾದ್ಯಂತ ಲೋಕಾಯುಕ್ತ ದಾಳಿ ಸರಣಿ: ವಿಜಯಪುರ, ರಾಯಚೂರು ಸೇರಿ ನಾಲ್ಕು ಜಿಲ್ಲೆಗಳಲ್ಲಿ ಭ್ರಷ್ಟರ ಭೇಟೆ!
ರಾಜ್ಯದಾದ್ಯಂತ ಲೋಕಾಯುಕ್ತ ದಾಳಿ ಸರಣಿ: ವಿಜಯಪುರ, ರಾಯಚೂರು ಸೇರಿ ನಾಲ್ಕು ಜಿಲ್ಲೆಗಳಲ್ಲಿ ಭ್ರಷ್ಟರ ಭೇಟೆ!
ಆದಾಯಕ್ಕಿಂತ ಹೆಚ್ಚು ಆಸ್ತಿ ಗಳಿಕೆ ಆರೋಪದ ಮೇಲೆ ಲೋಕಾಯುಕ್ತ ಪೊಲೀಸರು ರಾಜ್ಯದ ನಾಲ್ಕು ಜಿಲ್ಲೆಗಳಲ್ಲಿ ಏಕಕಾಲಕ್ಕೆ ದಾಳಿ ನಡೆಸಿದ್ದಾರೆ. ಈ ಕಾರ್ಯಾಚರಣೆಯಲ್ಲಿ ಕೃಷಿ ಅಧಿಕಾರಿ, ಸಹಕಾರ ಸಂಘದ ಸಿಇಒ, ಜಿಲ್ಲಾ ಪಂಚಾಯತ್ ಯೋಜನಾ ಅಧಿಕಾರಿಗಳ ಕೋಟ್ಯಂತರ ರೂ. ಮೌಲ್ಯದ ಅಕ್ರಮ ಆಸ್ತಿಪಾಸ್ತಿಗಳು ಪತ್ತೆಯಾಗಿವೆ.

ಭ್ರಷ್ಟರ ಬೇಟೆಗೆ ಹೋದ ಲೋಕಾಯುಕ್ತರು
ರಾಜ್ಯ ಸರ್ಕಾರಿ ಸೇವೆಯಲ್ಲಿರುವ ಭ್ರಷ್ಟ ಅಧಿಕಾರಿಗಳಿಗೆ ಲೋಕಾಯುಕ್ತ ಪೊಲೀಸರು ಬೆಳ್ಳಂಬೆಳಗ್ಗೆ ಬಿಸಿ ಮುಟ್ಟಿಸಿದ್ದಾರೆ. ಆದಾಯಕ್ಕಿಂತ ಹೆಚ್ಚು ಆಸ್ತಿ ಗಳಿಕೆ ಮಾಡಿರುವ ದೂರಿನ ಹಿನ್ನೆಲೆಯಲ್ಲಿ ವಿಜಯಪುರ, ಬಾಗಲಕೋಟೆ, ಉತ್ತರ ಕನ್ನಡ ಹಾಗೂ ರಾಯಚೂರು ಜಿಲ್ಲೆಗಳಲ್ಲಿ ಏಕಕಾಲಕ್ಕೆ ದಾಳಿ ನಡೆದಿದ್ದು, ಕೋಟ್ಯಂತರ ರೂಪಾಯಿ ಮೌಲ್ಯದ ಆಸ್ತಿ ಪಾಸ್ತಿ ಪತ್ತೆಯಾಗಿದೆ.
ವಿಜಯಪುರದಲ್ಲಿ ಕೃಷಿ ಅಧಿಕಾರಿಗೆ ಶಾಕ್
ರಾಜ್ಯ ಸರ್ಕಾರಿ ಸೇವೆಯಲ್ಲಿರುವ ಭ್ರಷ್ಟ ಅಧಿಕಾರಿಗಳಿಗೆ ಲೋಕಾಯುಕ್ತ ಪೊಲೀಸರು ಬೆಳ್ಳಂಬೆಳಗ್ಗೆ ಬಿಸಿ ಮುಟ್ಟಿಸಿದ್ದಾರೆ. ಆದಾಯಕ್ಕಿಂತ ಹೆಚ್ಚು ಆಸ್ತಿ ಗಳಿಕೆ ಮಾಡಿರುವ ದೂರಿನ ಹಿನ್ನೆಲೆಯಲ್ಲಿ ವಿಜಯಪುರ, ಬಾಗಲಕೋಟೆ, ಉತ್ತರ ಕನ್ನಡ ಹಾಗೂ ರಾಯಚೂರು ಜಿಲ್ಲೆಗಳಲ್ಲಿ ಏಕಕಾಲಕ್ಕೆ ದಾಳಿ ನಡೆದಿದ್ದು, ಕೋಟ್ಯಂತರ ರೂಪಾಯಿ ಮೌಲ್ಯದ ಆಸ್ತಿ ಪಾಸ್ತಿ ಪತ್ತೆಯಾಗಿದೆ.
ಸಹಕಾರ ಸಂಘದ ಅಧಿಕಾರಿ ಮನೆ ಮೇಲೆ ದಾಳಿ
ಇತ್ತ ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರದಲ್ಲಿ ಕೋಲ್ ಸಿರ್ಸಿ ಗ್ರೂಪ್ ಗ್ರಾಮ ಸೇವಾ ಸಹಕಾರಿ ಸಂಘದ ಸಿಇಒ ಮಾರುತಿ ಯಶವಂತ್ ಮಾಲ್ವಿ ಅವರ ಮನೆ, ಕಚೇರಿ ಹಾಗೂ ಹಳಿಯಾಳದಲ್ಲಿರುವ ಬಟ್ಟೆ ಅಂಗಡಿಯ ಮೇಲೆ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಕಾರವಾರ ಡಿವೈಎಸ್‌ಪಿ ಧನ್ಯಾ ನಾಯಕ್ ನೇತೃತ್ವದಲ್ಲಿ ಉಡುಪಿ, ಮಂಗಳೂರು ಮತ್ತು ಕಾರವಾರದ ಅಧಿಕಾರಿಗಳ ಜಂಟಿ ತಂಡ ಈ ಕಾರ್ಯಾಚರಣೆ ನಡೆಸುತ್ತಿದೆ.
ಬಾಗಲಕೋಟೆ ಅಕ್ರಮದ ಬೇಟೆ
ಬಾಗಲಕೋಟೆ ಜಿಲ್ಲಾ ಪಂಚಾಯತ್ ಯೋಜನಾ ನಿರ್ದೇಶಕ ಎಸ್.ಎಂ. ಕಾಂಬಳೆ ಅವರ ಮನೆ ಹಾಗೂ ಕಚೇರಿಗಳ ಮೇಲೆ ದಾಳಿ ನಡೆದಿದೆ. ಗದಗ ಜಿಲ್ಲೆಯ ನರಗುಂದದಲ್ಲಿರುವ ಇವರ ಸ್ವಗೃಹದಲ್ಲಿ ಡಿವೈಎಸ್‌ಪಿ ಸುರೇಶ್ ರೆಡ್ಡಿ ನೇತೃತ್ವದಲ್ಲಿ ಶೋಧ ಕಾರ್ಯ ಮುಂದುವರಿದಿದೆ.
ರಾಯಚೂರಿನಲ್ಲಿ ಮಹಿಳಾ ಅಧಿಕಾರಿಯ 49 ಆಸ್ತಿ ಪತ್ತೆ
ರಾಯಚೂರಿನಲ್ಲಿ ಆರ್‌ಡಿಪಿಆರ್ (RDPR) ಇಲಾಖೆಯ ಎಇಇ ಡಿ. ವಿಜಯಲಕ್ಷ್ಮಿ ಅವರ ಮನೆಗಳ ಮೇಲೆ ನಡೆದ ದಾಳಿ ಎಲ್ಲರನ್ನೂ ಅಚ್ಚರಿಗೊಳಿಸಿದೆ. ಅಧಿಕಾರಿಗಳು ನಡೆಸಿದ ಪ್ರಾಥಮಿಕ ತನಿಖೆಯಲ್ಲಿ ಸುಮಾರು 49 ಆಸ್ತಿಗಳಿಗೆ ಸಂಬಂಧಿಸಿದ ದಾಖಲೆಗಳು ಪತ್ತೆಯಾಗಿವೆ ಎನ್ನಲಾಗಿದೆ. ಯಾದಗಿರಿಯಲ್ಲಿ ಬೃಹತ್ ಲೇಔಟ್ ನಿರ್ಮಾಣ, 25 ಎಕರೆ ಜಮೀನು ಹಾಗೂ ಫಾರ್ಮ್ ಹೌಸ್‌ಗಳ ಮಾಹಿತಿಯನ್ನು ಲೋಕಾ ಟೀಂ ಕಲೆಹಾಕಿದೆ. ದಾಳಿ ವೇಳೆ ವಿಜಯಲಕ್ಷ್ಮಿ ಅವರು ಸೊಸೆಯ ಹೆರಿಗೆ ನಿಮಿತ್ತ ಹುಬ್ಬಳ್ಳಿಯಲ್ಲಿದ್ದು, ಅಧಿಕಾರಿಗಳು ತಕ್ಷಣ ರಾಯಚೂರಿಗೆ ಬರುವಂತೆ ಸೂಚನೆ ನೀಡಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

