ಗಾಂಧಾರಿ ನಟಿ ಕಾವ್ಯಾ ಗೌಡ, ಪತಿ ಸೋಮಶೇಖರ್‌ಗೆ ರಿಲೀಫ್ ನೀಡಿದ ಹೈಕೋರ್ಟ್!
Relief for Kavya Gowda: High Court Stays FIR & Probe in Family Dispute ಕೌಟುಂಬಿಕ ವ್ಯಾಜ್ಯಕ್ಕೆ ಸಂಬಂಧಿಸಿದಂತೆ ನಟಿ ಕಾವ್ಯ ಗೌಡ ಮತ್ತು ಅವರ ಪತಿ ಸೋಮಶೇಖರ್ ವಿರುದ್ಧ ದಾಖಲಾಗಿದ್ದ ಎಫ್‌ಐಆರ್‌ಗೆ ಹೈಕೋರ್ಟ್ ಮಧ್ಯಂತರ ತಡೆ ನೀಡಿದೆ.

ಎಫ್‌ಐಆರ್‌ಗೆ ತಡೆ ನೀಡುವಂತೆ ಅರ್ಜಿ ಸಲ್ಲಿಸಿದ್ದ ಕಾವ್ಯಾ ಗೌಡ
ಕೌಟುಂಬಿಕ ವ್ಯಾಜ್ಯಕ್ಕೆ ಸಂಬಂಧಿಸಿದಂತೆ ನಟಿ ಕಾವ್ಯ ಗೌಡ ಮತ್ತು ಅವರ ಪತಿ ಸೋಮಶೇಖರ್ ವಿರುದ್ಧದ ಎಫ್‌ಐಆರ್ ಹಾಗೂ ಪ್ರಕರಣದ ತನಿಖೆಗೆ ಹೈಕೋರ್ಟ್ ಮಧ್ಯಂತರ ತಡೆ ನೀಡಿದೆ.
ಹೈಕೋರ್ಟ್ ಮಧ್ಯಂತರ ತಡೆ
ಕೌಟುಂಬಿಕ ವ್ಯಾಜ್ಯಕ್ಕೆ ಸಂಬಂಧಿಸಿದ ಎಫ್‌ಐಆರ್ ರದ್ದುಪಡಿಸುವಂತೆ ಕೋರಿ ನಟಿ ಕಾವ್ಯ ಗೌಡ ಸಲ್ಲಿಸಿದ್ದ ಅರ್ಜಿಯನ್ನು ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಪೀಠವು, ಪ್ರಕರಣದ ತನಿಖೆಗೆ ಮಧ್ಯಂತರ ತಡೆ ನೀಡಿ ಪೊಲೀಸರು ಹಾಗೂ ಪ್ರತಿವಾದಿಗಳಿಗೆ ನೋಟಿಸ್ ಜಾರಿಗೊಳಿಸಿದೆ.
ಪ್ರಕರಣದ ಹಿನ್ನೆಲೆ
ಸೋಮಶೇಖರ್ ಮತ್ತು ನಂದೀಶ್ ಎಂಬ ಸಹೋದರರು ತಮ್ಮ ಪತ್ನಿಯರೊಂದಿಗೆ ಒಂದೇ ಮನೆಯಲ್ಲಿ ವಾಸವಿದ್ದರು. ಈ ವೇಳೆ ಕುಟುಂಬದ ಸದಸ್ಯರ ನಡುವೆ ಗಲಾಟೆ ಸಂಭವಿಸಿದ್ದು, ಇದು ರಾಮಮೂರ್ತಿನಗರ ಪೊಲೀಸ್ ಠಾಣೆಯಲ್ಲಿ ದೂರು-ಪ್ರತಿದೂರು ದಾಖಲಾಗುವ ಮೂಲಕ ಕಾನೂನು ಸಮರಕ್ಕೆ ಕಾರಣವಾಗಿತ್ತು.
ದೂರು ಮತ್ತು ಗಂಭೀರ ಆರೋಪ
ಕಾವ್ಯ ಗೌಡ ಅವರ ಮೇಲೆ ಹಲ್ಲೆ ಮಾಡಲಾಗಿದೆ ಮತ್ತು ಅವರ ಪತಿ ಸೋಮಶೇಖರ್ ಅವರಿಗೆ ಚಾಕುವಿನಿಂದ ಇರಿಯಲಾಗಿದೆ ಎಂದು ಕಾವ್ಯ ಅವರ ಸಹೋದರಿ ಭವ್ಯ ಗೌಡ ದೂರು ನೀಡಿದ್ದಾರೆ. ಇದಕ್ಕೆ ಪ್ರತಿಯಾಗಿ, ಕಾವ್ಯ ಗೌಡ ಅವರ ತಂಡವು ತಮ್ಮ ಮೇಲೆ ಹಲ್ಲೆ ನಡೆಸಿ ಮಾಂಗಲ್ಯ ಸರ ಕಸಿದುಕೊಂಡಿದೆ ಎಂದು ಸೋಮಶೇಖರ್ ಅವರ ಅಣ್ಣ ನಂದೀಶ್ ಅವರ ಪತ್ನಿ ಪ್ರೇಮಾ ದೂರು ದಾಖಲಿಸಿದ್ದರು.
ದಾಖಲಾದ ಎಫ್‌ಐಆರ್‌ಗಳು
ಹಲ್ಲೆ ಹಾಗೂ ನಿಂದನೆ ಆರೋಪಗಳಡಿ ಪೊಲೀಸರು ಒಟ್ಟು ಎಂಟು ಮಂದಿಯ ವಿರುದ್ಧ ಎಫ್‌ಐಆರ್ ದಾಖಲಿಸಿಕೊಂಡಿದ್ದರು. ಎರಡೂ ಕಡೆಯಿಂದ ಗಂಭೀರ ಸ್ವರೂಪದ ಆರೋಪಗಳು ಕೇಳಿಬಂದಿರುವುದರಿಂದ ಪ್ರಕರಣವು ಸಂಕೀರ್ಣ ಸ್ವರೂಪ ಪಡೆದುಕೊಂಡಿತ್ತು.
ಸೀರಿಯಲ್ ನಟಿ ಕಾವ್ಯಾ ಗೌಡ
ಕಿರುತೆರೆಯ ಜನಪ್ರಿಯ ಧಾರಾವಾಹಿಗಳಾದ 'ಸೀತಾವಲ್ಲಭ', 'ಗಾಂಧಾರಿ' ಹಾಗೂ 'ರಾಧಾ ರಮಣ' ಮೂಲಕ ಮನೆಮಾತಾಗಿದ್ದ ಕಾವ್ಯ ಗೌಡ, ಸೋಮಶೇಖರ್ ಅವರನ್ನು ವಿವಾಹವಾದ ಬಳಿಕ ಸದ್ಯಕ್ಕೆ ನಟನೆಯಿಂದ ದೂರ ಉಳಿದಿದ್ದಾರೆ.
ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.

