04:47 PM (IST) Dec 15

India Latest News Live 15 December 2025ಮೋದಿಗೆ ಸಮಾಧಿ ತೊಡುತ್ತೇವೆ - ಕಾಂಗ್ರೆಸ್ ವೋಟ್ ಚೋರಿ ಸಮಾವೇಶದಲ್ಲಿ ಕಾರ್ಯಕರ್ತರ ಘೋಷಣೆ

ದೆಹಲಿಯ ರಾಮಲೀಲಾ ಮೈದಾನದಲ್ಲಿ ನಡೆದ ಕಾಂಗ್ರೆಸ್ ಸಮಾವೇಶದಲ್ಲಿ 'ಮೋದಿ ತೇರಿ ಕಬರ್ ಖುದೇಗಿ' ಎಂಬ ಘೋಷಣೆ ಕೂಗಲಾಗಿದ್ದು, ಇದು ತೀವ್ರ ವಿವಾದಕ್ಕೆ ಕಾರಣವಾಗಿದೆ. ಈ ಘೋಷಣೆಯನ್ನು ತೀವ್ರವಾಗಿ ಖಂಡಿಸಿರುವ ಬಿಜೆಪಿ, ರಾಹುಲ್ ಗಾಂಧಿ ನಾಯಕತ್ವದಲ್ಲಿ ಕಾಂಗ್ರೆಸ್ ಮೊಘಲರಂತೆ ಅಂತ್ಯ ಕಾಣಲಿದೆ ಎಂದು ಹೇಳಿದೆ.

Read Full Story
04:46 PM (IST) Dec 15

India Latest News Live 15 December 2025'ಇದಪ್ಪಾ ಕಾನ್ಪಿಡೆನ್ಸ್‌ ಅಂದ್ರೆ..' ಸ್ಥಳೀಯ ಸಂಸ್ಥೆ ಚುನಾವಣೆ ಫಲಿತಾಂಶ ಬರೋ ಮುನ್ನವೇ 12 ಸಾವಿರ ಲಡ್ಡು ಮಾಡಿಸಿಟ್ಟ ಸ್ಪರ್ಧಿ!

ತ್ರಿಕ್ಕಾಕರದ ಸ್ವತಂತ್ರ ಅಭ್ಯರ್ಥಿ ಸಾಬು ಫ್ರಾನ್ಸಿಸ್, ಚುನಾವಣಾ ಫಲಿತಾಂಶ ಪ್ರಕಟವಾಗುವ ಮೊದಲೇ 12,000 ಲಡ್ಡುಗಳನ್ನು ತಯಾರಿಸುವ ಮೂಲಕ ತಮ್ಮ ಗೆಲುವಿನ ವಿಶ್ವಾಸ ವ್ಯಕ್ತಪಡಿಸಿದ್ದರು. ಇದು ವ್ಯರ್ಥ ಕೂಡ ಆಗಲಿಲ್ಲ. ಆತ 142 ಮತಗಳ ಅಂತರದಿಂದ ಗೆಲುವು ಸಾಧಿಸಿದರು.

Read Full Story
04:25 PM (IST) Dec 15

India Latest News Live 15 December 2025ಮೆಸ್ಸಿ ಜತೆ ಮುಗಿಬಿದ್ದು ಸೆಲ್ಫಿ ಕ್ಲಿಕ್ಕಿಸಿಕೊಂಡ ಅಮೃತಾ ಫಡ್ನವೀಸ್! ಮಹಾರಾಷ್ಟ್ರ ಸಿಎಂ ಪತ್ನಿ ಫುಲ್ ಟ್ರೋಲ್

ದೇವೇಂದ್ರ ಫಡ್ನವೀಸ್ ಅವರ ಪತ್ನಿ ಅಮೃತಾ ಫಡ್ನವೀಸ್, ಮುಂಬೈನಲ್ಲಿ ಫುಟ್ಬಾಲ್ ದಂತಕಥೆ ಲಿಯೋನೆಲ್ ಮೆಸ್ಸಿ ಜೊತೆ ಸೆಲ್ಫಿ ತೆಗೆದುಕೊಂಡಿದ್ದಾರೆ. ಈ ವೇಳೆ ಸಹ ಆಟಗಾರರನ್ನು ಬದಿಗೆ ಸರಿಸಿ, ಅನುಮತಿ ಇಲ್ಲದೆ ಸೆಲ್ಫಿ ಕ್ಲಿಕ್ಕಿಸಿಕೊಂಡ ಅವರ ವರ್ತನೆಯು ನೆಟ್ಟಿಗರು ಅವರನ್ನು ಟ್ರೋಲ್ ಮಾಡುತ್ತಿದ್ದಾರೆ.

Read Full Story
04:03 PM (IST) Dec 15

India Latest News Live 15 December 2025ಮನ್ರೆಗಾ ಹೆಸರು ಬದಲಿಸಲು ಇಚ್ಛಿಸಿದ ಮೋದಿ ಸರ್ಕಾರ, ಇನ್ಮುಂದೆ ಇದು VBGRAMG!

ಮೋದಿ ಸರ್ಕಾರವು ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಕಾಯ್ದೆ (MGNREGA) ಯನ್ನು ರದ್ದುಗೊಳಿಸಿ, 'ವಿಕಸಿತ ಭಾರತ- ಉದ್ಯೋಗ ಮತ್ತು ಜೀವನೋಪಾಯಕ್ಕಾಗಿ ಖಾತರಿ ಮಿಷನ್ (ಗ್ರಾಮೀಣ) (ವಿಬಿ-ಜಿ RAM ಜಿ) ಮಸೂದೆ, 2025' ಎಂಬ ಹೊಸ ಕಾನೂನನ್ನು ಪರಿಚಯಿಸುತ್ತಿದೆ.

Read Full Story
03:46 PM (IST) Dec 15

India Latest News Live 15 December 2025ರಾಮಕಥಾ ವಾಚಿಸುತ್ತಲೇ ಕೊನೆಯುಸಿರು - ರಾಮಮಂದಿರ ಚಳುವಳಿಯ ಹಿರಿಯ ಸಂತ ಡಾ ರಾಮವಿಲಾಸ್ ದಾಸ್ ಇನ್ನಿಲ್ಲ...

ರಾಮ ಮಂದಿರ ಚಳವಳಿಯ ಹಿರಿಯ ಸಂತ ಮತ್ತು ಮಾಜಿ ಸಂಸದ ಡಾ. ರಾಮ್ ವಿಲಾಸ್ ದಾಸ್ ವೇದಾಂತಿ ಅವರು ಮಧ್ಯಪ್ರದೇಶದ ರೇವಾದಲ್ಲಿ ನಿಧನರಾಗಿದ್ದಾರೆ. ರಾಮ ಜನ್ಮಭೂಮಿ ನ್ಯಾಸ್‌ನ ಕಾರ್ಯನಿರ್ವಾಹಕ ಅಧ್ಯಕ್ಷರಾಗಿದ್ದ ಅವರು, ರಾಮಕಥಾ ಪ್ರವಚನದ ವೇಳೆ ಆರೋಗ್ಯ ಹದಗೆಟ್ಟು ಕೊನೆಯುಸಿರೆಳೆದಿದ್ದಾರೆ.

Read Full Story
03:28 PM (IST) Dec 15

India Latest News Live 15 December 2025ಶುಭ್‌ಮನ್ ಗಿಲ್‌ಗೆ ಇನ್ನೂ 2 ಮ್ಯಾಚ್‌ನಲ್ಲಿ ಅವಕಾಶ ಕೊಡಿ - ಅಶ್ವಿನ್ ಅಚ್ಚರಿಯ ಹೇಳಿಕೆ

ಓಪನರ್ ಆಗಿ ನಿರಾಸೆ ಮೂಡಿಸುತ್ತಿರುವ ಶುಭಮನ್ ಗಿಲ್‌ಗೆ ದಕ್ಷಿಣ ಆಫ್ರಿಕಾ ವಿರುದ್ಧದ ಮುಂದಿನ 2 ಪಂದ್ಯಗಳಲ್ಲಿ ಅವಕಾಶ ನೀಡಬೇಕು ಎಂದು ಮಾಜಿ ಆಟಗಾರ ಆರ್. ಅಶ್ವಿನ್ ಹೇಳಿದ್ದಾರೆ. ಒಂದು ವೇಳೆ ಆ ಪಂದ್ಯಗಳಲ್ಲೂ ಗಿಲ್ ವಿಫಲವಾದರೆ, ಅವರನ್ನು ತಂಡದಿಂದ ಕೈಬಿಡುವ ನಿರ್ಧಾರ ತೆಗೆದುಕೊಳ್ಳಬೇಕು ಎಂದಿದ್ದಾರೆ.

Read Full Story
02:44 PM (IST) Dec 15

India Latest News Live 15 December 2025ಬಿಟೆಕ್ ಪದವಿಯನ್ನು ಪೂರ್ಣಗೊಳಿಸಲು ಅಸಮರ್ಥರಾಗಿರುವ ವಿದ್ಯಾರ್ಥಿಗಳಿಗೆ ಹೊಸ ಯೋಜನೆ ಘೋಷಿಸಿದ ಐಐಟಿ ಮದ್ರಾಸ್‌

ಐಐಟಿ ಮದ್ರಾಸ್, ಬಿಟೆಕ್ ಪದವಿ ಪೂರ್ಣಗೊಳಿಸಲು ಕಷ್ಟಪಡುವ ವಿದ್ಯಾರ್ಥಿಗಳಿಗೆ ಮೂರು ವರ್ಷಗಳ ನಂತರ ಬಿಎಸ್ಸಿ ಪದವಿಯೊಂದಿಗೆ ನಿರ್ಗಮಿಸುವ ಹೊಸ ಆಯ್ಕೆಯನ್ನು ಪರಿಚಯಿಸಿದೆ. ರಾಷ್ಟ್ರೀಯ ಶಿಕ್ಷಣ ನೀತಿಯ ಭಾಗವಾಗಿರುವ ಈ ಕ್ರಮವು, ವಿದ್ಯಾರ್ಥಿಗಳ ಶೈಕ್ಷಣಿಕ ಒತ್ತಡವನ್ನು ಕಡಿಮೆ ಮಾಡುವ ಗುರಿ ಹೊಂದಿದೆ.

Read Full Story
01:47 PM (IST) Dec 15

India Latest News Live 15 December 2025ಇವತ್ತು 10/10 ಎಂದ ಮಾಸ್ಟರ್ ಬ್ಲಾಸ್ಟರ್! ಸಚಿನ್‌ ತೆಂಡೂಲ್ಕರ್‌ಗೆ ಅಪರೂಪದ ಗಿಫ್ಟ್ ಕೊಟ್ಟ ಮೆಸ್ಸಿ!

ಅರ್ಜೆಂಟೀನಾದ ಫುಟ್‌ಬಾಲ್ ತಾರೆ ಲಿಯೋನೆಲ್ ಮೆಸ್ಸಿ ತಮ್ಮ ಭಾರತ ಪ್ರವಾಸದಲ್ಲಿ ಕ್ರಿಕೆಟ್ ದಂತಕಥೆ ಸಚಿನ್ ತೆಂಡೂಲ್ಕರ್ ಅವರನ್ನು ಭೇಟಿಯಾದರು. ಈ ಐತಿಹಾಸಿಕ ಭೇಟಿಯ ವೇಳೆ ಇಬ್ಬರೂ ದಿಗ್ಗಜರು ವಿಶೇಷ ಉಡುಗೊರೆಗಳನ್ನು ವಿನಿಮಯ ಮಾಡಿಕೊಂಡರು.

Read Full Story
01:11 PM (IST) Dec 15

India Latest News Live 15 December 2025ನಿದ್ರಿಸುತ್ತಿದ್ದ ಪೋಷಕರ ಮಧ್ಯೆ ಸಿಲುಕಿ ನವಜಾತ ಶಿಶು ಸಾವು

ಉತ್ತರ ಪ್ರದೇಶದ ಅಮ್ರೋಹಾದಲ್ಲಿ, ನಿದ್ರಿಸುತ್ತಿದ್ದ ಪೋಷಕರ ಮಧ್ಯೆ ಸಿಲುಕಿ ಒಂದು ತಿಂಗಳ ನವಜಾತ ಶಿಶು ಉಸಿರುಕಟ್ಟಿ ಸಾವನ್ನಪ್ಪಿದೆ. ಡಿಟೇಲ್ ಸ್ಟೋರಿ ಇಲ್ಲಿದೆ.

Read Full Story
01:00 PM (IST) Dec 15

India Latest News Live 15 December 2025ನಾನು ಫಾರ್ಮ್ ಕಳೆದುಕೊಂಡಿಲ್ಲ, ಆದ್ರೆ..! 3ನೇ ಟಿ20 ಪಂದ್ಯದ ಗೆಲುವಿನ ಬೆನ್ನಲ್ಲೇ ಸೂರ್ಯ ಅಚ್ಚರಿ ಹೇಳಿಕೆ!

ದಕ್ಷಿಣ ಆಫ್ರಿಕಾ ವಿರುದ್ಧದ ಮೂರನೇ ಟಿ20 ಪಂದ್ಯದಲ್ಲಿ ಭಾರತ 7 ವಿಕೆಟ್‌ಗಳ ಜಯ ಸಾಧಿಸಿದರೂ, ನಾಯಕ ಸೂರ್ಯಕುಮಾರ್ ಯಾದವ್ ಅವರ ಫಾರ್ಮ್ ಚಿಂತೆಗೆ ಕಾರಣವಾಗಿದೆ. ಪಂದ್ಯದ ನಂತರ ತಮ್ಮ ಪ್ರದರ್ಶನದ ಬಗ್ಗೆ ಮಾತನಾಡಿದ ಸೂರ್ಯ, ತಾನು ಔಟ್ ಆಫ್ ಫಾರ್ಮ್ ಆಗಿಲ್ಲ ಎಂದು ಹೇಳಿದ್ದಾರೆ.

Read Full Story
11:51 AM (IST) Dec 15

India Latest News Live 15 December 2025ಸಿಡ್ನಿಯ ಬೋಂಡಿ ಬೀಚ್‌ನಲ್ಲಿ 15 ಜನರ ಬಲಿ ಪಡೆದ ಯಹೂದಿ ಹಬ್ಬದ ಮೇಲಿನ ದಾಳಿಯ ಹಿಂದೆ ಪಾಕಿಸ್ತಾನಿ ಅಪ್ಪ ಮಗ

ಆಸ್ಟ್ರೇಲಿಯಾದ ಬೋಂಡಿ ಬೀಚ್‌ನಲ್ಲಿ ಯಹೂದಿ ಹಬ್ಬದ ವೇಳೆ ನಡೆದ ಗುಂಡಿನ ದಾಳಿಯಲ್ಲಿ 15 ಜನರು ಸಾವನ್ನಪ್ಪಿದ್ದಾರೆ. ಈ ಕೃತ್ಯವನ್ನು ಪಾಕಿಸ್ತಾನಿ ಮೂಲದ ತಂದೆ ಮತ್ತು ಮಗ ಎಸಗಿದ್ದು, ಇದೊಂದು ಭಯೋತ್ಪಾದಕ ಕೃತ್ಯ ಎಂದು ಪ್ರಧಾನಿ ಆಂಥೋನಿ ಅಲ್ಬನೀಸ್ ಬಣ್ಣಿಸಿದ್ದಾರೆ.
Read Full Story
10:53 AM (IST) Dec 15

India Latest News Live 15 December 2025ಭಾರತ ಎದುರು ಹೀನಾಯ ಸೋಲಿಗೆ ಅಚ್ಚರಿ ಕಾರಣ ಬಿಚ್ಚಿಟ್ಟ ದಕ್ಷಿಣ ಆಫ್ರಿಕಾ ಕ್ಯಾಪ್ಟನ್ ಮಾರ್ಕ್‌ರಮ್!

ದಕ್ಷಿಣ ಆಫ್ರಿಕಾ ವಿರುದ್ಧದ ಮೂರನೇ ಟಿ20 ಪಂದ್ಯದಲ್ಲಿ ಭಾರತ 7 ವಿಕೆಟ್‌ಗಳ ಜಯ ಸಾಧಿಸಿ, ಸರಣಿಯಲ್ಲಿ 2-1ರ ಮುನ್ನಡೆ ಕಾಯ್ದುಕೊಂಡಿದೆ. ಭಾರತದ ಬೌಲರ್‌ಗಳ ದಾಳಿಗೆ ತತ್ತರಿಸಿದ ಹರಿಣಗಳ ಪಡೆ 117 ರನ್‌ಗಳಿಗೆ ಆಲೌಟ್ ಆಯಿತು. ಸೋಲಿನ ಬಗ್ಗೆ ದಕ್ಷಿಣ ಆಫ್ರಿಕಾ ನಾಯಕ ಮಾರ್ಕ್‌ರಮ್ ಕಾರಣ ಬಿಚ್ಚಿಟ್ಟಿದ್ದಾರೆ.

Read Full Story
09:32 AM (IST) Dec 15

India Latest News Live 15 December 2025PM Modi - ಮತ್ತೆ ದಕ್ಷಿಣದತ್ತ ಮುಖ ಮಾಡಿದ ಪ್ರಧಾನಿ - ರಾಜಕೀಯ ಮಹತ್ವ ಪಡೆದ ಮೋದಿ ನಡೆ

ಪ್ರಧಾನಿ ಮೋದಿ ತಮಿಳುನಾಡು ಪ್ರವಾಸ ಕೈಗೊಂಡು ರೈತರೊಂದಿಗೆ ಪೊಂಗಲ್ ಆಚರಿಸುವ ಸಾಧ್ಯತೆಯಿದ್ದು, ಇದು ರಾಜಕೀಯ ಮಹತ್ವ ಪಡೆದಿದೆ. ತಮಿಳುನಾಡಿನ ಗ್ರಾಮೀಣ ಮತ್ತು ರೈತಾಪಿ ವರ್ಗದ ಮತ ಸೆಳೆಯಲೂ ಮುಂದಾಗಲಿದ್ದಾರೆ ಎಂದು ಮೂಲಗಳು ಹೇಳಿವೆ.

Read Full Story
09:17 AM (IST) Dec 15

India Latest News Live 15 December 2025IPL 2026 - ಮಿನಿ ಹರಾಜಿಗೆ ಒಂದು ದಿನ ಬಾಕಿ ಇರುವಾಗ ಕೊನೆ ಕ್ಷಣದಲ್ಲಿ ಭಾರತದ ಸ್ಟಾರ್ ಕ್ರಿಕೆಟಿಗ 'ವೈಲ್ಡ್ ಕಾರ್ಡ್' ಎಂಟ್ರಿ!

2026ರ ಐಪಿಎಲ್ ಮಿನಿ ಹರಾಜಿಗೆ ಕೊನೆಯ ಕ್ಷಣದಲ್ಲಿ ಭಾರತದ ಬ್ಯಾಟರ್ ಅಭಿಮನ್ಯು ಈಶ್ವರನ್ ಅವರ ಹೆಸರು ವೈಲ್ಡ್ ಕಾರ್ಡ್ ಮೂಲಕ ಸೇರ್ಪಡೆಯಾಗಿದೆ. ಫ್ರಾಂಚೈಸಿಯೊಂದರ ಮನವಿಯ ಮೇರೆಗೆ ಈ ಸೇರ್ಪಡೆ ನಡೆದಿದ್ದು, ಸಯ್ಯದ್ ಮುಷ್ತಾಕ್ ಅಲಿ ಟ್ರೋಫಿಯಲ್ಲಿನ ಅವರ ಸ್ಫೋಟಕ ಪ್ರದರ್ಶನ ಇದಕ್ಕೆ ಕಾರಣವಾಗಿದೆ.
Read Full Story
08:56 AM (IST) Dec 15

India Latest News Live 15 December 2025ರುಪಾಯಿ ಮೌಲ್ಯ ಕುಸಿತದ ಎಫೆಕ್ಟ್‌ - ಹೊಸ ವರ್ಷಕ್ಕೆ ದೇಶವಾಸಿಗಳಿಗೆ ಸಿಗಲಿದೆ ಶಾಕ್!

ಡಾಲರ್‌ ಎದುರು ರುಪಾಯಿ ಮೌಲ್ಯ ಕುಸಿಯುತ್ತಿರೋದರಿಂದ ಸಾರ್ವಜನಿಕರಿಗೆ ಬೆಲೆ ಏರಿಕೆ ಬಿಸಿ ತಾಗಲಿದೆ. ಆಮದು ವೆಚ್ಚಗಳು ಹೆಚ್ಚಾದ ಹಿನ್ನೆಲೆ ಬೆಲೆ ಏರಿಕೆ ಅನಿವಾರ್ಯ ಎಂದು ಉತ್ಪಾದಕರು ಮಾಹಿತಿ ನೀಡಿದ್ದಾರೆ.

Read Full Story
08:08 AM (IST) Dec 15

India Latest News Live 15 December 2025ಮುಂಬೈನಲ್ಲಿ ಮೆಸ್ಸಿ ಮೇನಿಯಾ! ಫುಟ್ಬಾಲ್‌ ಲೆಜೆಂಡ್‌ಗೆ 2011ರ ವಿಶ್ವಕಪ್ ಜೆರ್ಸಿ ಕೊಟ್ಟ ಸಚಿನ್

ಅರ್ಜೆಂಟೀನಾದ ಫುಟ್ಬಾಲ್‌ ದಂತಕಥೆ ಲಿಯೋನೆಲ್‌ ಮೆಸ್ಸಿ ತಮ್ಮ ಭಾರತ ಪ್ರವಾಸದ ಭಾಗವಾಗಿ ಮುಂಬೈಗೆ ಭೇಟಿ ನೀಡಿದರು. ಈ ವೇಳೆ ಕ್ರಿಕೆಟ್‌ ದಿಗ್ಗಜ ಸಚಿನ್‌ ತೆಂಡುಲ್ಕರ್‌ ಮತ್ತು ಫುಟ್ಬಾಲ್‌ ನಾಯಕ ಸುನಿಲ್‌ ಚೆಟ್ರಿ ಅವರನ್ನು ಭೇಟಿಯಾಗಿ, ಉಡುಗೊರೆಗಳನ್ನು ವಿನಿಮಯ ಮಾಡಿಕೊಂಡರು.

Read Full Story
07:58 AM (IST) Dec 15

India Latest News Live 15 December 202562 ವರ್ಷಗಳ ಸುದೀರ್ಘ ಕಾನೂನು ಹೋರಾಟದ ನಡೆಸಿ ಗೆದ್ದ 82ರ ವೃದ್ಧ

ಪಂಜಾಬ್‌ನ 80 ವರ್ಷದ ವೃದ್ಧರೊಬ್ಬರು 62 ವರ್ಷಗಳ ಸುದೀರ್ಘ ಕಾನೂನು ಹೋರಾಟದ ನಂತರ ಭೂ ವ್ಯಾಜ್ಯವನ್ನು ಗೆದ್ದಿದ್ದಾರೆ. 1963ರಲ್ಲಿ ತಮ್ಮ ತಾಯಿ ಖರೀದಿಸಿದ್ದ ಸೈಟುಗಳಿಗೆ ಸಂಬಂಧಿಸಿದ ಈ ಪ್ರಕರಣದಲ್ಲಿ, ಪಂಜಾಬ್ ಮತ್ತು ಹರ್ಯಾಣ ಹೈಕೋರ್ಟ್‌ ವೃದ್ಧರ ಪರ ತೀರ್ಪು ನೀಡಿದೆ.

Read Full Story
07:49 AM (IST) Dec 15

India Latest News Live 15 December 2025ಆರ್‌ಎಸ್‌ಎಸ್‌ ಸಿದ್ಧಾಂತಗಳು ದೇಶಕ್ಕೆ ಮಾರಕ - ಮಲ್ಲಿಕಾರ್ಜುನ ಖರ್ಗೆ

‘ವೋಟ್‌ ಚೋರ್‌ ಗದ್ದೀ ಛೋಡ್‌’ ರ್‍ಯಾಲಿಯಲ್ಲಿ ಮಾತನಾಡಿದ ಖರ್ಗೆ, ‘ಬಿಜೆಪಿಗರು ದ್ರೋಹಿಗಳು ಮತ್ತು ಡ್ರಾಮೆಬಾಜ್‌ (ನಾಟಕ) ಮಾಡುತ್ತಾರೆ. ಅವರನ್ನು ಅಧಿಕಾರದಿಂದ ಕೆಳಗಿಳಿಸಬೇಕು ಎಂದು ಮಲ್ಲಿಕಾರ್ಜುನ್ ಖರ್ಗೆ ಆಗ್ರಹಿಸಿದರು.

Read Full Story
07:36 AM (IST) Dec 15

India Latest News Live 15 December 2025ಕೇಂದ್ರ ಸಚಿವರನ್ನು ಟಾರ್ಗೆಟ್ ಮಾಡಿದ ಪಾಕಿಸ್ತಾನದ ಐಎಸ್‌ಐ - ಕೇಂದ್ರ ಗೃಹ ಇಲಾಖೆಯಿಂದ ಭದ್ರತೆ ಹೆಚ್ಚಳ

ಚೌಹಾಣ್‌ ಅವರನ್ನು ಪಾಕ್‌ನ ಐಎಸ್‌ಐ ಗುರಿ ಮಾಡಿದೆ ಎಂಬ ಮಾಹಿತಿ ಲಭಿಸಿದ ತಕ್ಷಣವೇ ಕೇಂದ್ರ ಗೃಹ ಇಲಾಖೆಯು ಕೂಡಲೇ ಮಧ್ಯ ಪ್ರದೇಶ ಡಿಜಿಪಿ ಮತ್ತು ದೆಹಲಿಯ ವಿಶೇಷ ಕಮಿಷನರ್‌ರಿಗೆ ಪತ್ರ ಬರೆದು ಭದ್ರತೆ ಹೆಚ್ಚಿಸುವಂತೆ ಆದೇಶಿಸಿದೆ.

Read Full Story