ವಿಶಾಖಪಟ್ಟಣಂನಲ್ಲಿ ನಡೆಯಲಿರುವ 3ನೇ ಏಕದಿನ ಪಂದ್ಯದಲ್ಲಿ ಭಾರತ ಮತ್ತು ದಕ್ಷಿಣ ಆಫ್ರಿಕಾ ಸರಣಿ ಗೆಲುವಿಗಾಗಿ ಸೆಣಸಲಿವೆ. 1-1ರಿಂದ ಸಮಬಲಗೊಂಡಿರುವ ಸರಣಿಯಲ್ಲಿ, ಭಾರತದ ಬ್ಯಾಟಿಂಗ್ ಕೊಹ್ಲಿ-ರೋಹಿತ್ ಮೇಲೆ ಅವಲಂಬಿತವಾಗಿದ್ದರೆ, ಬೌಲಿಂಗ್ ವಿಭಾಗವು ದುಬಾರಿಯಾಗಿದೆ.
- Home
- News
- India News
- India Latest News Live: ಭಾರತ-ಆಫ್ರಿಕಾ ಫೈನಲ್ ಫೈಟ್ - ಟೆಸ್ಟ್ ಸೋಲಿಗೆ ಸೇಡು ತೀರಿಸಿಕೊಳ್ಳುತ್ತಾ ಟೀಂ ಇಂಡಿಯಾ?
LIVE NOW
India Latest News Live: ಭಾರತ-ಆಫ್ರಿಕಾ ಫೈನಲ್ ಫೈಟ್ - ಟೆಸ್ಟ್ ಸೋಲಿಗೆ ಸೇಡು ತೀರಿಸಿಕೊಳ್ಳುತ್ತಾ ಟೀಂ ಇಂಡಿಯಾ?

ಸಾರಾಂಶ
ಪೈಲಟ್ಗಳ ಕೊರತೆಯಿಂದ ಇಂಡಿಗೋ ವಿಮಾನಗಳ ರದ್ದು ಮತ್ತು ವಿಳಂಬ ಮುಂದುವರಿದಿದ್ದು, ಶುಕ್ರವಾರ 1000ಕ್ಕೂ ಹೆಚ್ಚು ವಿಮಾನಗಳು ರದ್ದುಗೊಂಡವು. ಇಂಡಿಗೋ ನಿತ್ಯ ನಡೆಸುವ 2300 ಸಂಚಾರದ ಪೈಕಿ ಅರ್ಧಕ್ಕರ್ಧ ಸಂಚಾರ ರದ್ದಾಗಿದೆ. ಯಾವುದೇ ಮುನ್ಸೂಚನೆ ಇಲ್ಲದೆಯೇ ಹೀಗೆ ಸಾವಿರಾರು ಸಂಚಾರ ರದ್ದಾಗುತ್ತಿರುವ ಕಾರಣ ದೇಶವ್ಯಾಪಿ ವಿಮಾನ ನಿಲ್ದಾಣಗಳಲ್ಲಿ ಸಾವಿರಾರು ಪ್ರಯಾಣಿಕರು ಸಿಕ್ಕಿಬಿದ್ದಿದ್ದು, ಭಾರೀ ಆಕ್ರೋಶ ವ್ಯಕ್ತವಾಗಿದೆ. ಆದರೆ, ಇದರ ಬೆನ್ನಲ್ಲೇ ವಿಮಾನಗಳ ರದ್ದು ಮತ್ತು ವಿಳಂಬಕ್ಕೆ ಕೊನೆ ಹಾಡುವ ಉದ್ದೇಶದಿಂದ ನಾಗರಿಕ ವಿಮಾನಯಾನ ಮಹಾನಿರ್ದೇಶನಾಲಯ (ಡಿಜಿಸಿಎ), ತಾನೇ ಕಳೆದ ತಿಂಗಳು ಪೈಲಟ್ಗಳ ಕರ್ತವ್ಯದ ಅವಧಿಗೆ ಕಡಿವಾಣ ಹಾಕಿ ಹೊರಡಿಸಿದ್ದ ಕಠಿಣ ನಿಯಮಗಳನ್ನು ತಕ್ಷಣದಿಂದ ಜಾರಿಗೆ ಬರುವಂತೆ ಸ್ಥಗಿತಗೊಳಿಸಲಾಗಿದೆ. ಹೀಗಾಗಿ ಪೈಲಟ್ಗಳ ಲಭ್ಯತೆ ಶನಿವಾರದಿಂದ ಹೆಚ್ಚಾಗುವ ನಿರೀಕ್ಷೆ ಇದೆ. ಇನ್ನೊಂದೆಡೆ ಬೆಳವಣಿಗೆ ಕುರಿತು ತನಿಖೆಗೆ ಕೇಂದ್ರ ಸರ್ಕಾರ ನಾಲ್ವರು ಸದಸ್ಯರ ಸಮಿತಿ ರಚಿಸಿದೆ.
09:04 AM (IST) Dec 06
India Latest News Liveಭಾರತ-ಆಫ್ರಿಕಾ ಫೈನಲ್ ಫೈಟ್ - ಟೆಸ್ಟ್ ಸೋಲಿಗೆ ಸೇಡು ತೀರಿಸಿಕೊಳ್ಳುತ್ತಾ ಟೀಂ ಇಂಡಿಯಾ?
Read Full Story