ಸೈಲೆಂಟ್ ಆದ ಸೌತ್ ಆಫ್ರಿಕಾ , 74 ರನ್‌ಗೆ ಆಲೌಟ್ ಮಾಡಿ 101 ರನ್ ಗೆಲುವು ದಾಖಲಿಸಿದ ಭಾರತ , ಮೊದಲ ಟಿ20 ಪಂದ್ಯದಲ್ಲಿ ಟೀಂ ಇಂಡಿಯಾ ದಾಳಿಗೆ ಸೌತ್ ಆಫ್ರಿಕಾ ಬೆಚ್ಚಿ ಬಿದ್ದಿದೆ. ಕೇವಲ 12.3 ಓವರ್‌ಗಳಲ್ಲಿ ಪಂದ್ಯ ಮುಗಿಸಿದೆ.
- Home
- News
- India News
- India Latest News Live: ಸೈಲೆಂಟ್ ಆದ ಸೌತ್ ಆಫ್ರಿಕಾ , 74 ರನ್‌ಗೆ ಆಲೌಟ್ ಮಾಡಿ 101 ರನ್ ಗೆಲುವು ದಾಖಲಿಸಿದ ಭಾರತ
India Latest News Live: ಸೈಲೆಂಟ್ ಆದ ಸೌತ್ ಆಫ್ರಿಕಾ , 74 ರನ್‌ಗೆ ಆಲೌಟ್ ಮಾಡಿ 101 ರನ್ ಗೆಲುವು ದಾಖಲಿಸಿದ ಭಾರತ

ನವದೆಹಲಿ : ‘ಜನರ ಹೃದಯದಲ್ಲಿ ನೆಲೆಸಿರುವ ರಾಷ್ಟ್ರೀಯ ಗೀತೆ ವಂದೇ ಮಾತರಂ ಬಗ್ಗೆ ಚರ್ಚೆ ಅಗತ್ಯವೇನಿತ್ತು? ಎಂದು ಪ್ರಶ್ನಿಸಿರುವ ಸಂಸದೆ ಪ್ರಿಯಾಂಕಾ ಗಾಂಧಿ, ‘ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆ ಸಮೀಪಿಸುತ್ತಿರುವುದರಿಂದ ಸರ್ಕಾರ ಈ ವಿಷಯದ ಚರ್ಚೆಗೆ ಮುಂದಾಗಿದೆ’ ಎಂದು ಆರೋಪಿಸಿದ್ದಾರೆ. ಮೋದಿಯವರ ಆತ್ಮಸ್ಥೈರ್ಯ ಈಗ ಮೊದಲಿನಂತಿಲ್ಲ. ಅವರು ರೂಪಿಸಿರುವ ನಿಯಮಗಳು ದೇಶವನ್ನು ದುರ್ಬಲಗೊಳಿಸುತ್ತಿವೆ. ಇದರ ಕಡೆ ಜನರ ಗಮನ ಹರಿಯದಂತೆ ಮಾಡಲು, ಅವರು ರಾಷ್ಟ್ರೀಯ ಗೀತೆ ಬಗ್ಗೆ ಚರ್ಚೆ ನಡೆಸುತ್ತಿದ್ದಾರೆ. ಆ ನೆಪದಲ್ಲಿ ಬಿಜೆಪಿ, ದೇಶದ ಮೊದಲ ಪ್ರಧಾನಿ ಜವಾಹರಲಾಲ್ ನೆಹರು ಹಾಗೂ ದೇಶಕ್ಕಾಗಿ ಹೋರಾಡಿದವರ ವಿರುದ್ಧ ಹೊಸ ಆರೋಪಗಳನ್ನು ಮಾಡುತ್ತಿದೆ ಎಂದರು.
ಚರ್ಚೆಯೇ ಅನಗತ್ಯ:
‘ವಂದೇ ಮಾತರಂ ನಮ್ಮ ದೇಶದ ಆತ್ಮವಿದ್ದಂತೆ. ಅದರ ಬಗ್ಗೆ ಮಾತನಾಡಿದಾಗ ಸ್ವಾತಂತ್ರ್ಯ ಚಳವಳಿಯ ಇತಿಹಾಸ ನೆನಪಾಗುತ್ತದೆ. ದೇಶವಾಸಿಗಳ ಮನಸ್ಸಲ್ಲಿ ನೆಲೆಸಿರುವ ಗೀತೆಯ ಬಗ್ಗೆ ಚರ್ಚೆ ನಡೆಯುತ್ತಿರುವುದೇ ವಿಚಿತ್ರ. ರಾಷ್ಟ್ರೀಯ ಗೀತೆಯ ಬಗ್ಗೆ ಚರ್ಚೆ ಅಗತ್ಯವೇ?’ ಎಂದಿರುವ ಪ್ರಿಯಾಂಕಾ ಪ್ರಶ್ನಿಸಿದ್ದಾರೆ.
India Latest News Live 9 December 2025ಸೈಲೆಂಟ್ ಆದ ಸೌತ್ ಆಫ್ರಿಕಾ , 74 ರನ್‌ಗೆ ಆಲೌಟ್ ಮಾಡಿ 101 ರನ್ ಗೆಲುವು ದಾಖಲಿಸಿದ ಭಾರತ
India Latest News Live 9 December 2025ಜಿಮ್‌ನಿಂದ ಮರಳುತ್ತಿದ್ದಾಗ ಬಿಗ್ ಬಾಸ್ ಮಾಜಿ ಸ್ಪರ್ಧಿ ಕಾರು ಭೀಕರ ಅಪಘಾತ
ಜಿಮ್‌ನಿಂದ ಮರಳುತ್ತಿದ್ದಾಗ ಬಿಗ್ ಬಾಸ್ ಮಾಜಿ ಸ್ಪರ್ಧಿ ಕಾರು ಭೀಕರ ಅಪಘಾತ, ವೇಗವಾಗಿ ಬರುತ್ತಿದ್ದ ಮತ್ತೊಂದು ಕಾರಿಗೆ ಡಿಕ್ಕಿಯಾಗಿ ಅಪಘಾತ ಸಂಭವಿಸಿದೆ. ಅಪಘಾತದ ತೀವ್ರತೆಗೆ ಕಾರು ನಜ್ಜು ಗುಜ್ಜಾಗಿದೆ.
India Latest News Live 9 December 2025ಕುಸಿದ ಭಾರತಕ್ಕೆ ಪಾಂಡ್ಯ ಅಬ್ಬರದ ಬ್ಯಾಟಿಂಗ್, ಸೌತ್ ಆಫ್ರಿಕಾಗೆ 176 ರನ್ ಟಾರ್ಗೆಟ್
ಕುಸಿದ ಭಾರತಕ್ಕೆ ಪಾಂಡ್ಯ ಅಬ್ಬರದ ಬ್ಯಾಟಿಂಗ್, ಸೌತ್ ಆಫ್ರಿಕಾಗೆ 176 ರನ್ ಟಾರ್ಗೆಟ್, ಆರಂಭದಲ್ಲೇ ವಿಕೆಟ್ ಪತನಗೊಂಡು ಸಂಕಷ್ಟದಲ್ಲಿದ್ದ ಟೀಂ ಇಂಡಿಯಾಗೆ ಹಾರ್ದಿಕ್ ಪಾಂಡ್ಯ ಬ್ಯಾಟಿಂಗ್ ನೆರವಾಗಿದೆ.ಪರಿಣಾಮ ಸ್ಪರ್ಧಾತ್ಮಕ ಮೊತ್ತ ಸಿಡಿಸಿದೆ.
India Latest News Live 9 December 2025ಕಾರ್‌ನಲ್ಲಿ ಜೋಡಿ 'ಸರಸ' ಸೆರೆಹಿಡಿದ ಟೋಲ್ ಮ್ಯಾನೇಜರ್, ಸಿಸಿಟಿವಿ ವಿಡಿಯೋ ತೋರಿಸಿ ಬ್ಲ್ಯಾಕ್‌ಮೇಲ್!
ಉತ್ತರ ಪ್ರದೇಶದ ಎಕ್ಸ್‌ಪ್ರೆಸ್‌ವೇಯಲ್ಲಿ, ಕಾರಿನಲ್ಲಿದ್ದ ದಂಪತಿಗಳ ಖಾಸಗಿ ಕ್ಷಣವನ್ನು ಸಿಸಿಟಿವಿಯಲ್ಲಿ ರೆಕಾರ್ಡ್ ಮಾಡಿ ಬ್ಲ್ಯಾಕ್‌ಮೇಲ್ ಮಾಡಲಾಗಿದೆ. ಎಟಿಎಂಎಸ್ ವ್ಯವಸ್ಥಾಪಕನೇ ಈ ಕೃತ್ಯ ಎಸಗಿದ್ದು, ಹಣ ಸುಲಿಗೆ ಮಾಡಿ ವಿಡಿಯೋವನ್ನು ವೈರಲ್ ಮಾಡಿದ್ದಾನೆ.
India Latest News Live 9 December 2025ವೃತ್ತಿಪರತೆ ಅಂತ್ಯಸಂಸ್ಕಾರ, ಪ್ರಶ್ನೆ ಕೇಳಿದ ಪತ್ರಕರ್ತೆಗೆ ಕಣ್ಣು ಹೊಡೆದ ಪಾಕಿಸ್ತಾನ ಸೇನಾ ಲೆ.ಜನರಲ್
ವೃತ್ತಿಪರತೆ ಅಂತ್ಯಸಂಸ್ಕಾರ, ಪ್ರಶ್ನೆ ಕೇಳಿದ ಪತ್ರಕರ್ತೆಗೆ ಕಣ್ಣು ಹೊಡೆದ ಪಾಕಿಸ್ತಾನ ಸೇನಾ ಲೆ.ಜನರಲ್ ನಡೆ ಭಾರಿ ವಿವಾದಕ್ಕೆ ಕಾರಣವಾಗದೆ. ಇದು ವೃತ್ತಿಪರತೆಯ ಅಂತ್ಯಸಂಸ್ಕಾರ ಎಂದು ಹಲವರು ಕರೆದಿದ್ದಾರೆ. ಈ ವಿಡಿಯೋ ಭಾರಿ ವೈರಲ್ ಆಗುತ್ತಿದ್ದಂತೆ ಆಕ್ರೋಶ ಹೆಚ್ಚಾಗಿದೆ.
India Latest News Live 9 December 2025ರೀಲ್ಸ್ ನೋಡಿ ನೋಡಿ, ಗಂಡ ಮಕ್ಕಳ ಬಿಟ್ಟು ಸೋಶಿಯಲ್ ಮೀಡಿಯಾ ಗೆಳೆಯನಿಗಾಗಿ ಬಸ್ ಹತ್ತಿದ ಮಹಿಳೆ
Woman elopes with online lover: ರೀಲ್ಸ್ ಮಾಡುವ ಯುವಕನಿಗೆ ಮನಸೋತ 26 ವರ್ಷದ ಮಹಿಳೆಯೊಬ್ಬಳು ತನ್ನ ಗಂಡ ಇಬ್ಬರು ಮಕ್ಕಳನ್ನು ತೊರೆದು ಪರಾರಿಯಾಗಿದ್ದಾಳೆ. ನಂತರ, ಪೊಲೀಸರು ಇಬ್ಬರನ್ನೂ ಬಂಧಿಸಿದ್ದು, ಬಳಿಕ ಮಹಿಳೆ ತನಗೆ ಮಾಟ ಮಂತ್ರ ಮಾಡಲಾಗಿದೆ ಎಂದು ಆರೋಪಿಸಿದ್ದಾಳೆ.
India Latest News Live 9 December 2025'ನನ್ನ ಸಂತೋಷ ಅಮೂಲ್ಯ, ಕರ್ಮದಲ್ಲಿ ನನಗೆ ನಂಬಿಕೆ ಇದೆ..' ದಿಲೀಪ್ ಖುಲಾಸೆ ಬೆನ್ನಲ್ಲೇ ವೈರಲ್ ಆದ ಜಾಕಿ ಭಾವನಾ ಮಾತು!
India Latest News Live 9 December 2025ಕೆಲವೇ ದಿನದಲ್ಲಿ ಸ್ಮೃತಿ ಮಂಧನಾ ಮದುವೆ ಆಘಾತದಿಂದ ಹೊರಬಂದಿದ್ದೇಗೆ? 3 ವರ್ಷ ಹಿಂದೆ ಹೇಳಿದ್ದ ಟಿಪ್ಸ್
ಕೆಲವೇ ದಿನದಲ್ಲಿ ಸ್ಮೃತಿ ಮಂಧನಾ ಮದುವೆ ಆಘಾತದಿಂದ ಹೊರಬಂದಿದ್ದೇಗೆ? ಕಠಿಣ ಹಾಗೂ ಸಂಕಷ್ಟದ ಪರಿಸ್ಥಿತಿ ಎದುರಿಸುವ ಕುರಿತು ಮೂರು ವರ್ಷ ಹಿಂದೆ ಸ್ಮೃತಿ ಮಂಧನಾ ಸ್ಪೂರ್ತಿಯ ಮಾತುಗನ್ನಾಡಿದ್ದರು. ಇದು ಪ್ರತಿಯೊಬ್ಬರ ಜೀವನಕ್ಕೂ ಅನ್ವಯಿಸಲಿದೆ.
India Latest News Live 9 December 2025ದಕ್ಷಿಣ ಆಫ್ರಿಕಾ ಎದುರಿನ ಮೊದಲ ಟಿ20 ಪಂದ್ಯಕ್ಕೂ ಮೊದಲು ಗೊಂದಲಕ್ಕೆ ಸಿಲುಕಿದ ಗೌತಮ್ ಗಂಭೀರ್!
ದಕ್ಷಿಣ ಆಫ್ರಿಕಾ ವಿರುದ್ಧದ ಮೊದಲ ಟಿ20 ಪಂದ್ಯಕ್ಕೆ ಭಾರತ ತಂಡ ಸಜ್ಜಾಗಿದ್ದು, ಆಡುವ ಬಳಗವನ್ನು ಆಯ್ಕೆ ಮಾಡುವಲ್ಲಿ ಗೊಂದಲದಲ್ಲಿದೆ. ವಿಕೆಟ್ ಕೀಪರ್ ಸ್ಥಾನಕ್ಕಾಗಿ ಸಂಜು ಸ್ಯಾಮ್ಸನ್ ಮತ್ತು ಜಿತೇಶ್ ಶರ್ಮಾ ನಡುವೆ ತೀವ್ರ ಪೈಪೋಟಿ ಏರ್ಪಟ್ಟಿದೆ.
India Latest News Live 9 December 2025ಎರಡು ಮಕ್ಕಳ ತಾಯಿ ಸಹವಾಸ ಮಾಡಿ ಮಸಣ ಸೇರಿದ ಯುವಕ - ತಾಯಿಯ ಲೀವಿಂಗ್ ಪಾರ್ಟನರ್ ಕತೆ ಮುಗಿಸಿದ ಅಮ್ಮ ಮಕ್ಕಳು
woman kills live-in partner: ಲಕ್ನೋದಲ್ಲಿ ಮಹಿಳೆಯೊಬ್ಬಳು ತನ್ನ ಲೀವ್ ಇನ್ ಪಾರ್ಟನರ್‌ನನ್ನು ಕೊಲೆ ಮಾಡಿದ್ದಾಳೆ. ತನ್ನ ಮಗಳನ್ನು ಅಸಭ್ಯವಾಗಿ ಸ್ಪರ್ಶಿಸಿದ್ದೇ ಕೊಲೆಗೆ ಕಾರಣ ಎಂದು ಆಕೆ ಹೇಳಿದರೆ, ಆಸ್ತಿಗಾಗಿ ಈ ಕೃತ್ಯ ಎಸಗಲಾಗಿದೆ ಎಂದು ಮೃತನ ತಂದೆ ಆರೋಪಿಸಿದ್ದಾರೆ.
India Latest News Live 9 December 2025ಭಾರತ-ದಕ್ಷಿಣ ಆಫ್ರಿಕಾ ಮೊದಲ ಟಿ20 ಪಂದ್ಯ ಎಷ್ಟು ಗಂಟೆಯಿಂದ ಆರಂಭ? ಎಲ್ಲಿ ವೀಕ್ಷಿಸಬಹುದು? ಸಂಭಾವ್ಯ ತಂಡ ಇಲ್ಲಿದೆ ನೋಡಿ
ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಐದು ಪಂದ್ಯಗಳ ಟಿ20 ಸರಣಿ ಇಂದಿನಿಂದ ಆರಂಭವಾಗಲಿದೆ. ಮುಂಬರುವ ಟಿ20 ವಿಶ್ವಕಪ್‌ಗೆ ತಯಾರಿಯ ದೃಷ್ಟಿಯಿಂದ ಈ ಸರಣಿ ಮಹತ್ವದ್ದಾಗಿದೆ. ಈ ಸರಣಿಯ ಸಂಪೂರ್ಣ ವೇಳಾಪಟ್ಟಿ, ಲೈವ್ ಸ್ಟ್ರೀಮಿಂಗ್ ವಿವರಗಳು ಮತ್ತು ಸಂಭಾವ್ಯ ಆಡುವ ಬಳಗದ ಮಾಹಿತಿ ಇಲ್ಲಿದೆ.
India Latest News Live 9 December 2025Viral Video - ಮಾಜಿ ಸಿಜೆಐ ಬಿಆರ್ ಗವಾಯಿಗೆ ಶೂ ಎಸೆದಿದ್ದ ವಕೀಲ ರಾಕೇಶ್ ಕಿಶೋರ್‌ಗೆ ಕೋರ್ಟ್‌ನಲ್ಲೇ ಚಪ್ಪಲಿಯಿಂದ ಹಲ್ಲೆ!
ದೆಹಲಿಯ ಕಾರ್ಡೂಮಾ ನ್ಯಾಯಾಲಯದ ಆವರಣದಲ್ಲಿ ಮಾಜಿ ಸಿಜೆಐ ಬಿಆರ್ ಗವಾಯಿ ಮೇಲೆ ಶೂ ಎಸೆದ ವಕೀಲ ರಾಕೇಶ್ ಕಿಶೋರ್ ಅವರಿಗೆ ಚಪ್ಪಲಿಯಿಂದ ಥಳಿಸಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
India Latest News Live 9 December 2025ವಿಮಾನ ನಿಲ್ದಾಣದಲ್ಲಿ ಕುಸಿದು ಬಿದ್ದು ಕೋಕಾ ಕೋಲಾ ಕಂಪನಿ ಚಾರ್ಟೆಡ್ ಅಕೌಂಟೆಂಟ್ ಹಠಾತ್ ಸಾವು
ಕೋಕಾ ಕೋಲಾ ಕಂಪನಿಯಲ್ಲಿ ಚಾರ್ಟೆಡ್ ಅಕೌಂಟೆಂಟ್ ಆಗಿ ಕೆಲಸ ಮಾಡುತ್ತಿದ್ದ 42 ವರ್ಷದ ವ್ಯಕ್ತಿಯೊಬ್ಬರು ವಿಮಾನ ನಿಲ್ದಾನದಲ್ಲೇ ಕುಸಿದು ಬಿದ್ದು ಸಾವನ್ನಪ್ಪಿದ ಘಟನೆ ನಡೆದಿದೆ.
India Latest News Live 9 December 2025ದೇವಸ್ಥಾನದ ಕಾರ್ತಿಕ ದೀಪದ ಪರವಾಗಿ ತೀರ್ಪು ನೀಡಿದ ಜಡ್ಜ್, ಸೇಡು ತೀರಿಸಿಕೊಳ್ಳಲು ಮುಂದಾದ ತಮಿಳುನಾಡು ಸರ್ಕಾರ!
ತಿರುಪರಾನುಕುಂದ್ರಂ ಬೆಟ್ಟದ ದರ್ಗಾದ ಹತ್ತಿರದಲ್ಲಿರುವ ಸ್ಥಳದಲ್ಲಿ ಕಾರ್ತಿಕ ದೀಪವನ್ನು ಬೆಳಗಿಸಲು ನ್ಯಾಯಮೂರ್ತಿ ಸ್ವಾಮಿನಾಥನ್ ತೀರ್ಪು ನೀಡಿದ್ದು, ತಮಿಳುನಾಡು ಸರ್ಕಾರದ ಕೆಂಗಣ್ಣಿಗೆ ಗುರಿಯಾಗಿದೆ.
India Latest News Live 9 December 2025ಗಂಡ ಹೆಂಡತಿಗೆ ಮುಳ್ಳಾದ ಈರುಳ್ಳಿ ಬೆಳ್ಳುಳ್ಳಿ, 11 ವರ್ಷದ ದಾಂಪತ್ಯ ಜೀವನ ಡಿವೋರ್ಸ್‌ನಲ್ಲಿ ಅಂತ್ಯ
ಗಂಡ ಹೆಂಡತಿಗೆ ಮುಳ್ಳಾದ ಈರುಳ್ಳಿ ಬೆಳ್ಳುಳ್ಳಿ, ಅನ್ಯೋನ್ಯಾವಾಗಿದ್ದ ಕುಟುಂಬದಲ್ಲಿ ಕಲಹ ಶುರುವಾಗಿದೆ. ಈರುಳ್ಳಿ ಹಾಗೂ ಬೆಳ್ಳುಳ್ಳಿ ಬೆಲೆ ಏರಿಕೆಯೂ ಈ ಮಟ್ಟಿಗೆ ಟೆನ್ಶನ್ ಕೊಟ್ಟಿರಲಿಲ್ಲ. ಆದರೆ ಇದರ ಘಾಟು ಒಂದು ಕುಟುಂಬವನ್ನೇ ಇಬ್ಬಾಗ ಮಾಡಿದೆ
India Latest News Live 9 December 2025ಆ್ಯಶಸ್ ಸರಣಿ - ಸತತ ಎರಡು ಪಂದ್ಯ ಗೆದ್ದು ಬೀಗಿದ್ದ ಆಸೀಸ್‌ಗೆ ಆಘಾತ, ಸ್ಟಾರ್ ಬೌಲರ್ ಹೊರಕ್ಕೆ!
India Latest News Live 9 December 2025ಜಪಾನ್‌ನಲ್ಲಿ 7.5 ತೀವ್ರತೆಯ ಭೂಕಂಪ - ಧರಣಿ ಗರ ಗರನೇ ತಿರುಗಿದ ವೀಡಿಯೋಗಳು ವೈರಲ್
ಜಪಾನ್‌ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದ್ದು, ಕನಿಷ್ಠ 30 ಜನರು ಗಾಯಗೊಂಡಿದ್ದಾರೆ. ಭೂಕಂಪನದ ತೀವ್ರತೆಗೆ ಕಟ್ಟಡಗಳು ಅಲುಗಾಡುವ, ಅಕ್ವೇರಿಯಂ ನೀರು ಚೆಲ್ಲುವ ದೃಶ್ಯಗಳು ವೈರಲ್ ಆಗಿದ್ದು, ಕೆಲ ದೃಶ್ಯಗಳ ವಿಡಿಯೋ ಇಲ್ಲಿದೆ.
India Latest News Live 9 December 2025ಅನಿಲ್ ಅಂಬಾನಿ ಕುಟುಂಬಕ್ಕೆ ಮತ್ತೊಂದು ಶಾಕ್, ಪುತ್ರನ ವಿರುದ್ದ 228 ಕೋಟಿ ರೂ ವಂಚನೆ ಕೇಸ್
ಅನಿಲ್ ಅಂಬಾನಿ ಕುಟುಂಬಕ್ಕೆ ಮತ್ತೊಂದು ಶಾಕ್ ಎದುರಾಗಿದೆ. ಪುತ್ರ ಜೈ ಅನ್ಮೋಲ್ ವಿರುದ್ದ 228 ಕೋಟಿ ರೂಪಾಯಿ ವಂಚನೆ ಕೇಸ್ ದಾಖಲಾಗಿದೆ. ಬ್ಯಾಂಕ್ ನೀಡಿ ದೂರಿನ ಆಧಾರದ ಮೇಲೆ ಸಿಬಿಐ ಅನಿಲ್ ಅಂಬಾನಿ ಪುತ್ರನ ವಿರುದ್ಧ ದೂರು ದಾಖಲಿಸಿದೆ.
India Latest News Live 9 December 2025ಮದ್ಯ ಮಾರಾಟಕ್ಕೆ ಇಳಿದ ಯುವರಾಜ್ ಸಿಂಗ್, ಒಂದು ತಿಂಗಳ ಸಂಬಳಕ್ಕೆ ಬರುತ್ತೆ ಒಂದು ಬಾಟಲ್!
Yuvraj Singh FINO Tequila: ಕ್ರಿಕೆಟಿಗ ಯುವರಾಜ್ ಸಿಂಗ್ 'ಫಿನೋ' ಎಂಬ ತಮ್ಮ ಅಲ್ಟ್ರಾ-ಪ್ರೀಮಿಯಂ ಟಕಿಲಾ ಬ್ರ್ಯಾಂಡ್ ಅನ್ನು ಭಾರತದಲ್ಲಿ ಬಿಡುಗಡೆ ಮಾಡಿದ್ದಾರೆ. 100% ಬ್ಲೂ ವೆಬರ್ ಅಗೇವ್‌ನಿಂದ ಇದನ್ನು ತಯಾರಿಸಲಾಗಿದೆ.
India Latest News Live 9 December 20252025ರಲ್ಲಿ ಪಾಕಿಸ್ತಾನಿಯರು ಗೂಗಲ್ ಸರ್ಚ್‌ನಲ್ಲಿ ಹುಡುಕಿದ್ದು ಟೀಂ ಇಂಡಿಯಾದ ಈ ಆಟಗಾರನನ್ನು! ಆದ್ರೆ ಅದು ಕೊಹ್ಲಿ, ರೋಹಿತ್ ಅಲ್ಲ!
2025 ರಲ್ಲಿ ಪಾಕಿಸ್ತಾನಿಗಳು ಗೂಗಲ್‌ನಲ್ಲಿ ಅತಿ ಹೆಚ್ಚು ಹುಡುಕಿದ ಕ್ರೀಡಾಪಟು ಕೊಹ್ಲಿ ಅಥವಾ ರೋಹಿತ್ ಅಲ್ಲ, ಬದಲಿಗೆ ಭಾರತದ ಯುವ ಬ್ಯಾಟರ್ ಅಭಿಷೇಕ್ ಶರ್ಮಾ. ಏಷ್ಯಾಕಪ್‌ನಲ್ಲಿ ಪಾಕಿಸ್ತಾನದ ವಿರುದ್ಧ ತೋರಿದ ಸ್ಪೋಟಕ ಬ್ಯಾಟಿಂಗ್ ಪ್ರದರ್ಶನದಿಂದಾಗಿ ಅವರು ಪಾಕಿಸ್ತಾನಿ ಕ್ರಿಕೆಟ್ ಪ್ರೇಮಿಗಳ ಗಮನ ಸೆಳೆದರು.