ಮಹಾರಾಷ್ಟ್ರ ಸ್ಥಳೀಯ ಚುನಾವಣೆಯಲ್ಲಿ ಬಿಜೆಪಿ ಮೈತ್ರಿಕೂಟಕ್ಕೆ ಭರ್ಜರಿ ಮುನ್ನಡೆ, ಮಕಾಡೆ ಮಲಗಿದ MVA, 129 ಕ್ಷೇತ್ರದಲ್ಲಿ ಬಿಜೆಪಿ ಮುನ್ನಡೆ ಕಂಡಿದ್ದರೆ, ಮೈತ್ರಿಕೂಟ 200ಕ್ಕೂ ಹೆಚ್ಚು ಕ್ಷೇತ್ರದಲ್ಲಿ ಮುನ್ನಡೆ ಸಾಧಿಸಿದೆ.
ಮುಂಬೈ (ಡಿ.21) ಮಹಾರಾಷ್ಟ್ರ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಬಿಜೆಪಿ ನೇತತ್ವದ ಮಹಾಯುತಿ ಮೈತ್ರಿಕೂಟ ಅತೀ ದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ. 200ಕ್ಕೂ ಹೆಚ್ಚು ಸ್ಥಾನದಲ್ಲಿ ಮುನ್ನಡೆ ಸಾಧಿಸಿದೆ. ಈ ಪೈಕಿ 129 ಸ್ಥಾನಗಳಲ್ಲಿ ಬಿಜೆಪಿ ಮುನ್ನಡೆ ಪಡೆದಿದೆ. ಕಾಂಗ್ರೆಸ್ ಸೇರಿದಂತೆ ಮಹಾ ವಿಕಾಸ್ ಅಘಾಡಿ ಮೈತ್ರಿಕೂಡ ತೀವ್ರ ಹಿನ್ನಡೆ ಕಂಡಿದೆ. ಮಹಾರಾಷ್ಟ್ರ ಸ್ಥಳೀಯ ಸಂಸ್ಥೆ ಚುನಾವಣೆ ಫಲಿತಾಂಶದ ಅಂತಿಮ ಪ್ರಕಟಣೆ ಇನ್ನು ಹೊರಬಿದ್ದಿಲ್ಲ. ಹಲೆವೆಡೆ ಮತ ಎಣಿಕೆ ಇನ್ನೂ ನಡೆಯುತ್ತಿದೆ. ಶೀಘ್ರದಲ್ಲೇ ಚುನಾವಣಾ ಆಯೋಗ ಫಲಿತಾಂಶ ಪಟ್ಟಿ ಪ್ರಕಟಿಸಲಿದೆ.
288 ಮುನ್ಸಿಪಲ್ ಕಾರ್ಪೋರೇಶನ್, ನಗರ ಪಂಚಾಯತ್ ಸೇರಿದಂತೆ ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ ನಡೆದಿತ್ತು. ಈ ಪೈಕಿ 250 ಸ್ಥಾನಗಳಲ್ಲಿ ಬಿಜೆಪಿ ನೇತೃತ್ವದ ಮಹಾಯುತಿ ಮುನ್ನಡೆ ಸಾಧಿಸಿದೆ. ವಿಶೇಷ ಅಂದರೆ ಬಿಜೆಪಿ ಅತೀ ದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ. ಬೆಳಗ್ಗೆ 10 ಗಂಟೆಯಿಂದ ಮತ ಎಣಿಕೆ ಪ್ರಕ್ರಿಯೆ ಆರಂಭಗೊಂಡಿದೆ. ಬಿಜೆಪಿ ಭಾರಿ ಮುನ್ನಡೆಯೊಂದಿಗೆ ಸ್ಥಳೀಯ ಚುನಾವಣೆಯಲ್ಲಿ ಗೆಲುವಿನ ಸಂಭ್ರಮಾಚರಣೆಗೆ ತಯಾರಿ ನಡೆಸಿದೆ.
ಜನತೆಗೆ ಧನ್ಯವಾದ ತಿಳಿಸಿದ ಮುಖ್ಯಮಂತ್ರಿ ಪಢ್ನವಿಸ್
ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಮಹಾರಾಷ್ಟ್ರ ಜನತೆಗೆ ಧನ್ಯವಾದ ಹೇಳಿದ್ದಾರೆ. ಬಿಜೆಪಿ ನೇತೃತ್ವದ ಮಹಾಯುತಿ ಮೇಲೆ ವಿಶ್ವಾಸವಿಟ್ಟ ಮತನಗಳನ್ನು ನೀಡಿದ ಜನರಿಗೆ ಧನ್ಯವಾದ. ಮಹಾರಾಷ್ಟ್ರ ಜನತೆ ಅಭಿವೃದ್ಧಿ ಹಾಗೂ ಪಾರದರ್ಶಕ ಆಡಳಿತಕ್ಕೆ ಹೆಚ್ಚಿನ ಒತ್ತು ನೀಡಿದ್ದಾರೆ ಎಂದು ಫಡ್ನವಿಸ್ ಹೇಳಿದ್ದಾರೆ. ಶೇಕಡಾ 75ರಷ್ಟು ಸದಸ್ಯರು ಬಿಜೆಿ-ಮಹಾಯುತಿಯಿಂದ ಆರಿಸಿ ಬರಲಿದ್ದಾರೆ ಎಂದು ನಾನು ಭವಿಷ್ಯ ನುಡಿದಿದ್ದೆ. ಇದರಂತೆ ಎಲ್ಲೆಡೆ ಮಯಾಯುತಿ ಸದಸ್ಯರೇ ಗೆಲುವಿನ ಹಾದಿಯಲ್ಲಿದ್ದಾರೆ. 200ಕ್ಕೂ ಹೆಚ್ಚು ಸ್ಥಾನದಲ್ಲಿ ಮುನ್ನಡೆ ಸಾಧಿಸಿದೆ. ಈ ಪೈಕಿ ಬಿಜೆಪಿ 129 ಸ್ಥಾನದಲ್ಲಿ ಮುನ್ನಡೆಯಲ್ಲಿದೆ. 3,300 ಕಾರ್ಪೋರೇಟ್‌ಗಳು ಬಿಜೆಪಿಯಿಂದ ಆರಿಸಿ ಬಂದಿದ್ದಾರೆ.ಇದು ದಾಖಲೆಯಾಗಿದೆ. ಇದೇ ವೇಳೆ ನಮ್ಮ ಮೈತ್ರಿ ಪಕ್ಷಳಾದ ಎಕನಾಥ್ ಶಿಂಧೆ ಶಿವಸೇನೆ ಹಾಗೂ ಅಜಿತ್ ಪವಾರ್‌ಗೆ ಅಭಿನಂದನೆ ಸಲ್ಲಿಸುತ್ತೇನೆ ಎಂದು ಫಡ್ನವಿಸ್ ಹೇಳಿದ್ದಾರೆ.
ಎನ್‌ಸಿಪಿ ಹೋರಾಟ
ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ರಾಷ್ಟ್ರೀಯ ಕಾಂಗ್ರೆಸ್ ಪಾರ್ಟಿ) ಹಲವು ಸ್ಥಾನಗಳನ್ನು ಉಳಿಸಿಕೊಳ್ಳುವಲ್ಲಿ ಯಶಸ್ವಿಯಾಗಿದೆ. ಮಹಾ ವಿಕಾಸ್ ಅಘಾಟಿ ಪರ್ಫಾಮೆನ್ಸ್‌ಗೆ ಹೋಲಿಸಿದರೆ, ಎನ್‌ಸಿಪಿ ಉತ್ತಮ ಹೋರಾಟ ನೀಡಿದೆ. ಚಂದ್ರಾಪುರ ಹಾಗೂ ಸಾಂಗ್ಲಿ ಜಿಲ್ಲೆಯಲ್ಲಿ ಎನ್‌ಸಿಪಿ ಅದ್ಭುತ ಗೆಲುವಿನ ಮೂಲಕ ತನ್ನ ಅಧಿಪತ್ಯ ಮುಂದುವರಿಸಿದೆ. ಬ್ರಹ್ಮಪುರಿ ಮುನ್ಸಿಪಲ್ ಕೌನ್ಸಿಲ್‌ನಲ್ಲಿ ಕಾಂಗ್ರೆಸ್ ಜಯಭೇರಿ ಬಾರಿಸಿದೆ. ಇಲ್ಲಿ 23 ಸ್ಥಾನಗಳ ಪೈಕಿ 21 ಸ್ಥಾನ ಕಾಂಗ್ರೆಸ್ ಗೆದ್ದುಕೊಂಡಿದೆ. ಇನ್ನುಳಿದ ಎರಡು ಸ್ಥಾನವನ್ನು ಬಿಜೆಪಿ ಹಾಗೂ ಎನ್‌ಸಿಪಿ ಹಂಚಿಕೊಂಡಿದೆ.


