ಛತ್ರಪತಿ ಶಿವಾಜಿ ಮಹಾರಾಜರಂತೆ ಟಿಪ್ಪು ಸುಲ್ತಾನ್ ಕೂಡ ಬ್ರಿಟಿಷರ ವಿರುದ್ಧ ಹೋರಾಡಿದ ಯೋಧ ಎಂದು ಮಹಾರಾಷ್ಟ್ರ ಕಾಂಗ್ರೆಸ್‌ ಮುಖ್ಯಸ್ಥ ಹರ್ಷವರ್ಧನ್‌ ಸಪ್ಕಾಲ್‌ ಹೇಳಿದ್ದಾರೆ. ಈ  ಸಿಎಂ ದೇವೇಂದ್ರ ಫಡ್ನವೀಸ್, ಟಿಪ್ಪು ಸಾವಿರಾರು ಹಿಂದೂಗಳನ್ನು ಕೊಂದವನು, ಈ ಹೋಲಿಕೆಯನ್ನು ಸಹಿಸಲ್ ಎಂದು ತಿರುಗೇಟು

ನಾಗ್ಪುರ (ಫೆ.15): ‘ಛತ್ರಪತಿ ಶಿವಾಜಿ ಮಹಾರಾಜರ ದಾರಿಯಲ್ಲೇ ಟಿಪ್ಪು ಸುಲ್ತಾನರೂ ನಡೆದಿದ್ದಾರೆ. ಟಿಪ್ಪುವನ್ನು ಶಿವಾಜಿ ಮಹಾರಾಜರಿಗೆ ಸಮಾನವಾಗಿ ಕಾಣಬೇಕು’ ಎಂದು ಮಹಾರಾಷ್ಟ್ರ ಕಾಂಗ್ರೆಸ್‌ ಮುಖ್ಯಸ್ಥ ಹರ್ಷವರ್ಧನ್‌ ಸಪ್ಕಾಲ್‌ ಹೇಳಿದ್ದಾರೆ. ಇದು ವಿವಾದಕ್ಕೆ ಕಾರಣವಾಗಿದ್ದು, ಸಿಎಂ ದೇವೇಂದ್ರ ಫಡ್ನವೀಸ್‌ ಕಿಡಿಕಾರಿದ್ದಾರೆ.

ಟಿಪ್ಪು ಸುಲ್ತಾನ್ ಒಬ್ಬ ಯೋಧ

‘ಟಿಪ್ಪು ಸುಲ್ತಾನ್ ಒಬ್ಬ ಯೋಧ. ಆತ ಬ್ರಿಟಿಷರ ವಿರುದ್ಧ ಹೋರಾಡಿದ ಧೈರ್ಯವನ್ನು ತೋರಿಸಿದವನು. ಮಣ್ಣಿನ ಮಗ. ಅವನೆಂದೂ ವಿಷಕಾರಿ, ವಿನಾಶಕಾರಿ ವಿಚಾರಗಳನ್ನು ಸ್ವೀಕರಿಸಲಿಲ್ಲ. ಶೌರ್ಯದ ಸಂಕೇತವಾಗಿ, ಟಿಪ್ಪು ಸುಲ್ತಾನನನ್ನು ಛತ್ರಪತಿ ಶಿವಾಜಿ ಮಹಾರಾಜರಿಗೆ ಸಮಾನವಾಗಿ ನೋಡಬೇಕು’ ಎಂದು ಸಪ್ಕಾಲ್‌ ಹೇಳಿದ್ದಾರೆ.

ಇದನ್ನೂ ಓದಿ: Telangana: ಹಂಚಿದ್ದ ಕುಕ್ಕರ್, ಹಣ ಮರಳಿ ಕೇಳಿದ ಸೋತ 'ಕೈ' ಅಭ್ಯರ್ಥಿ; ಕೇಳದೇ ಕೊಟ್ಟಿದ್ದು ಮರಳಿಸೋಲ್ಲ ಎಂದ ಮತದಾರರು!

ಹೋಲಿಕೆಯನ್ನ ಸಹಿಸೋಲ್ಲ: ಸಿಎಂ

ಇದಕ್ಕೆ ತಿರುಗೇಟು ನೀಡಿರುವ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್, ‘ಶಿವಾಜಿ ಮಹಾರಾಜರು ಸ್ವರಾಜ್ಯವನ್ನು ಸ್ಥಾಪಿಸಿ ಜನರನ್ನು ಮೊಘಲ್ ಆಳ್ವಿಕೆಯಿಂದ ಮುಕ್ತಗೊಳಿಸಿದರು. ಮತ್ತೊಂದೆಡೆ, ಟಿಪ್ಪು ಸಾವಿರಾರು ಹಿಂದೂಗಳನ್ನು ಕೊಂದ. ನಾವು ಈ ಹೋಲಿಕೆಯನ್ನು ಸಹಿಸುವುದಿಲ್ಲ’ ಎಂದು ಕಿಡಿ ಕಾರಿದ್ದಾರೆ.