ಕನ್ನಡದ ಬಿಗ್ ಬಾಸ್‌ಗೆ ಸಂಕಷ್ಟ ಎದುರಾಗಿದ್ದು, ಈ ಕೂಡಲೇ ಬಿಗ್ ಬಾಸ್ ಮನೆಯನ್ನು ಬಂದ್ ಮಾಡುವಂತೆ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ನೋಟಿಸ್ ನೀಡಿತ್ತು. ಈ ವಿಚಾರವಾಗಿ ಅರಣ್ಯ ಸಚಿವ ಈಶ್ವರ್ ಖಂಡ್ರೆ ಪ್ರತಿಕ್ರಿಯಿಸಿದ್ದಾರೆ.
ಬೆಂಗಳೂರು (ಅ.07): 12ನೇ ಆವೃತ್ತಿಯ ಕನ್ನಡದ ಬಿಗ್ ಬಾಸ್‌ಗೆ ಸಂಕಷ್ಟ ಎದುರಾಗಿದ್ದು, ಈ ಕೂಡಲೇ ಬಿಗ್ ಬಾಸ್ ಮನೆಯನ್ನು ಬಂದ್ ಮಾಡುವಂತೆ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ನೋಟಿಸ್ ನೀಡಿತ್ತು. ಈ ವಿಚಾರವಾಗಿ ಅರಣ್ಯ ಸಚಿವ ಈಶ್ವರ್ ಖಂಡ್ರೆ ಪ್ರತಿಕ್ರಿಯಿಸಿದ್ದು, ಈ ಹಿಂದೆ ರಾಮನಗರ ಪ್ರಾದೇಶಿಕ ಕಚೇರಿಯವರು ಹೋಗಿ ಪರಿಶೀಲನೆ ಮಾಡಿ ನೋಟಿಸ್ ಕೊಟ್ಟಿದ್ದರು. ಅವರು ವಾಟರ್ ಹಾಗೂ ಮಾಲಿನ್ಯ ನಿಯಂತ್ರಣ ಮಂಡಳಿ ಪರವಾನಿಗೆ ತೆಗೆದುಕೊಂಡಿಲ್ಲ. ಬಿಗ್ ಬಾಸ್ ಶೋನವರು ಅದರ ಬಗ್ಗೆ ತಲೆ ಕೆಡಿಸಿಕೊಂಡಿಲ್ಲ. ಇದು ಕೋರ್ಟ್ ಆದೇಶ ಉಲ್ಲಂಘನೆ ಮಾಡಿದ ಹಾಗೆ. ಹಾಗಾಗಿ ನೊಟೀಸ್ ಕೊಡಲಾಗಿದ್ದು, ಕ್ಲೋಸ್ ಮಾಡಿ ಅಂತ ಹೇಳಲಾಗಿದೆ. ಈಗಾಗಲೇ ಅಧಿಕಾರಿಗಳು ಅದರ ಬಗ್ಗೆ ಗಮನ ಹರಿಸಿದ್ದಾರೆ. ಕಾನೂನು ರೀತಿ ಯಾವ ಕ್ರಮ ತೆಗೆದುಕೊಳ್ಳಬೇಕೋ ತೆಗೆದುಕೊಳ್ತಾರೆ ಎಂದು ತಿಳಿಸಿದರು.
ಟನಲ್ ರಸ್ತೆಗೆ ಲಾಗ್ ಬಾಗ್ ವಾತಾವರಣಕ್ಕೆ ಡ್ಯಾಮೇಜ್ ವಿಚಾರವಾಗಿ, ಬೆಂಗಳೂರು ವೇಗದ ಗತಿಯಲ್ಲಿ ಬೆಳೆಯುತ್ತಿದೆ. ಇದರಲ್ಲಿ ಲಂಗ್ಸ್ ಸ್ಪೇಸ್ ರಕ್ಷಣೆ ಮಾಡಬೇಕು. ಟ್ರಾಫಿಕ್ ಜಾಮ್, ಜನ ಸಂದಣಿ ಕೂಡ ಜಾಸ್ತಿ ಆಗುತ್ತಿದೆ. ಟನಲ್ ರೋಡ್‌ಗೆ ಅನುಮತಿ ನೀಡಲಾಗಿದೆ. ತಜ್ಞರ ಜೊತೆ ಚರ್ಚೆ ಮಾಡಬೇಕಿದೆ. ಟನಲ್ ರಸ್ತೆ ಕೂಡ ಬೇಕು, ಲಂಗ್ಸ್ ಸ್ಪೇಸ್ ಕೂಡ ಬೇಕಾಗಿದೆ. ಸಂಬಂಧಪಟ್ಟ ಅಧಿಕಾರಿಗಳಿಗೆ ಈ ಬಗ್ಗೆ ಪರಿಶೀಲನೆ ಮಾಡಲು ಮನವಿ ಮಾಡ್ತೀನಿ ಎಂದು ಈಶ್ವರ್ ಖಂಡ್ರೆ ಹೇಳಿದರು.
ಬೆಳೆ ಪರಿಹಾರಕ್ಕೆ ಕ್ರಮ: ಬೀದರ್ ಜಿಲ್ಲೆಯಾದ್ಯಂತ ಸತತವಾಗಿ ಸುರಿಯುತ್ತಿರುವ ಮಳೆಯಿಂದ ಹಾನಿಯಾದ ಬೆಳೆಗಳ ಜಂಟಿ ಸಮೀಕ್ಷೆಯನ್ನು ಶೀಘ್ರವೇ ಪೂರ್ಣಗೊಳಿಸಿ, ಪರಿಹಾರವನ್ನು 15 ದಿನದೊಳಗಾಗಿ ಒದಗಿಸಲು ಅಗತ್ಯ ಕ್ರಮ ಕೈಗೊಳ್ಳುವುದಾಗಿ ತಿಳಿಸಿದ್ದಾರೆ.ಜಿಲ್ಲೆಯ ವಿವಿಧ ಪ್ರದೇಶಗಳಲ್ಲಿ ಭಾರಿ ಮಳೆಯಿಂದ, ಮಾನವ ಜೀವ ಹಾನಿ, ಪ್ರಾಣಿ ಜೀವ ಹಾನಿ, ಮನೆ ಹಾನಿ, ಬೆಳೆ ಹಾನಿ, ಮೂಲಭೂತ ಸೌಕರ್ಯಗಳಾದ ರಸ್ತೆ, ಸೇತುವೆ, ಶಾಲಾ ಹಾಗೂ ಅಂಗನವಾಡಿ ಕೊಠಡಿಗಳು, ವಿದ್ಯುತ್ ಸಂಪರ್ಕ, ಕೆರೆ, ಆರೋಗ್ಯ ಕೇಂದ್ರಗಳು ಹಾನಿಗೊಳಗಾಗಿರುತ್ತವೆ. ಈ ಬಗ್ಗೆ ಪರಿಹಾರ ಕ್ರಮಗಳ ಕುರಿತು ಜಿಲ್ಲಾಡಳಿತದೊಂದಿಗೆ ನಿರಂತರ ಸಂಪರ್ಕದಲ್ಲಿದ್ದು, ತುರ್ತು ಕ್ರಮಗಳನ್ನು ಕೈಗೊಳ್ಳುವ ಮೂಲಕ ಅತಿವೃಷ್ಠಿಯಿಂದ ಆಗಬಹುದಾದ ಅನಾಹುತಗಳನ್ನು ಕಡಿಮೆಗೊಳಿಸಲು ಸೂಚಿಸಿದ್ದೇನೆ ಎಂದು ಸಚಿವರು ಸೂಚಿಸಿದ್ದಾರೆ.
ರಜೆ ಮಂಜೂರು ಮಾಡದಂತೆ ಸೂಚನೆ
ಅತಿವೃಷ್ಠಿ ನಿರ್ವಹಣೆ ಮಾಡುವ ದೃಷ್ಠಿಯಿಂದ ಎಲ್ಲಾ ಅಧಿಕಾರಿಗಳು ಕೇಂದ್ರಸ್ಥಾನದಲ್ಲಿದ್ದು, ಕಾರ್ಯನಿರ್ವಹಿಸಲು ಹಾಗೂ ಅನಿವಾರ್ಯ ಸಂದರ್ಭಗಳನ್ನು ಹೊರತುಪಡಿಸಿ ರಜೆಯನ್ನು ಮಂಜೂರು ಮಾಡದಿ ರಲು ಸೂಚಿಸಲಾಗಿದೆ. ಪ್ರವಾಹ ಪರಿಸ್ಥಿತಿಯನ್ನು ಪರಿಣಾಮಕಾರಿಯಾಗಿ ನಿರ್ವಹಿಸಲು ಎಸ್‌ಡಿಆರ್‌ಎಫ್ ಮತ್ತು ಎನ್‌ಡಿಆರ್‌ಎಫ್‌ಗಳನ್ನು ಕಾರ್ಯಸನ್ನದ್ಧಗೊಳಿಸಿ ವಿಳಂಬಕ್ಕೆ ಅವಕಾಶವಿಲ್ಲದಂತೆ ಪರಿಹಾರ ಕ್ರಮಕೈಗೊಳ್ಳಲಾಗವುದು ಎಂದಿದ್ದಾರೆ. ಅತಿವೃಷ್ಠಿಯಾದ ಪ್ರದೇಶಗಳಗೆ ಸಂಬಂಧಿಸಿದ ಉಪ ವಿಭಾಗಾಧಿಕಾರಿಗಳು ಕಡ್ಡಾಯವಾಗಿ ಭೇಟಿ ನೀಡತಕ್ಕದ್ದು, ಹೆಚ್ಚು ಪ್ರವಾಹ ಪೀಡಿತ ಪ್ರದೇಶಗಳಲ್ಲಿ ಸಂಬಂಧಿಸಿದ ಇಲಾಖೆಗಳನ್ನೊಳಗೊಂಡ ತಂಡವು ಪರಿಸ್ಥಿತಿ ನಿಯಂತ್ರಿಸಲು ಖುದ್ದು ಮೊಕ್ಕಾಂ ಹೂಡಲು ಕ್ರಮವಹಿಸಲು ಸೂಚನೆ ನೀಡಲಾಗಿದೆ. ಹಾನಿಗೊಳಗಾದ ಎಲ್ಲಾ ಬೆಳೆಗಳ ಪ್ರದೇಶಗಳಿಗೆ ಭೇಟಿ ನೀಡಿ ಜಂಟಿ ಸಮೀಕ್ಷೆ ಶೀಘ್ರವಾಗಿ ಮುಗಿಸಲು ಅಧಿಕಾರಿ ಗಳಿಗೆ ಸೂಚನೆ ನೀಡಲಾಗಿದೆ ಎಂದು ಅವರು ತಿಳಿಸಿದ್ದಾರೆ.


