ರಾಜ್ಯ ವಿಧಾನಮಂಡಲ ಬಜೆಟ್ ಅಧಿವೇಶನವು ಮಾ.6 ರಿಂದ ಮಾ.27ರವರೆಗೆ ನಡೆಯಲಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಾ.6 ರಂದು ಬಜೆಟ್ ಮಂಡನೆ ಮಾಡಲಿದ್ದಾರೆ. ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಮಾ.6 ರಿಂದ ಮಾ.27ರವರೆಗೆ ಒಟ್ಟು 14 ದಿನಗಳ ಕಾಲ ಅಧಿವೇಶನ
ಬೆಂಗಳೂರು : ರಾಜ್ಯ ವಿಧಾನಮಂಡಲ ಬಜೆಟ್ ಅಧಿವೇಶನವು ಮಾ.6 ರಿಂದ ಮಾ.27ರವರೆಗೆ ನಡೆಯಲಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಾ.6 ರಂದು ಬಜೆಟ್ ಮಂಡನೆ ಮಾಡಲಿದ್ದಾರೆ.
ಮಾ.6 ರಿಂದ ಮಾ.27ರವರೆಗೆ ಒಟ್ಟು 14 ದಿನಗಳ ಕಾಲ ಅಧಿವೇಶನ
ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಮಾ.6 ರಿಂದ ಮಾ.27ರವರೆಗೆ ಒಟ್ಟು 14 ದಿನಗಳ ಕಾಲ ಅಧಿವೇಶನ ನಡೆಸಲು ನಿರ್ಧಾರ ಮಾಡಲಾಗಿದೆ.
ಅಧಿವೇಶನದ ಮೊದಲ ದಿನವಾದ ಮಾ. 6ರಂದು ಮುಖ್ಯಮಂತ್ರಿ ಹಾಗೂ ರಾಜ್ಯದ ಹಣಕಾಸು ಸಚಿವರಾದ ಸಿದ್ದರಾಮಯ್ಯ ಅವರು ತಮ್ಮ ದಾಖಲೆಯ 17ನೇ ಬಜೆಟ್ ಮಂಡಿಸಲಿದ್ದಾರೆ.
ಮಾರ್ಚ್ 6ರಂದು ಬಜೆಟ್
ಸಂಪುಟ ಸಭೆ ಬಳಿಕ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್.ಕೆ. ಪಾಟೀಲ್, ಮಾರ್ಚ್ 6 ರಿಂದ 27ರವರೆಗೆ ಬಜೆಟ್ ಅಧಿವೇಶನ ನಡೆಯಲಿದೆ. ಒಟ್ಟು14 ದಿನ ಬಜೆಟ್ ಅಧಿವೇಶನ ನಡೆಯಲಿದ್ದು, ಮಾರ್ಚ್ 6ರಂದು ಮುಖ್ಯಮಂತ್ರಿಗಳು ಬಜೆಟ್ ಮಂಡಿಸಲಿದ್ದಾರೆ ಎಂದು ಮಾಹಿತಿ ನೀಡಿದರು.


