World Cancer Day 2026: ವಿಶ್ವ ಕ್ಯಾನ್ಸರ್ ದಿನದ ಅಂಗವಾಗಿ ಎಫ್‌ಪಿಎಐ ಆಯೋಜಿಸಿದ್ದ ಜಾಗೃತಿ ಕಾರ್ಯಕ್ರಮದಲ್ಲಿ, ಭಾರತದಲ್ಲಿ ಹೆಚ್ಚುತ್ತಿರುವ ಕ್ಯಾನ್ಸರ್ ಪ್ರಕರಣಗಳ ಬಗ್ಗೆ ಚರ್ಚಿಸಲಾಯಿತು. ವಿಶೇಷವಾಗಿ ಮಹಿಳೆಯರಲ್ಲಿ ಸ್ತನ ಮತ್ತು ಗರ್ಭಕಂಠದ ಕ್ಯಾನ್ಸರ್ ಹೆಚ್ಚಾಗುತ್ತಿದೆ ಎಂದು ತಜ್ಞರು ಮಾಹಿತಿ
- Home
- News
- State
- Karnataka News Live: World Cancer Day 2026 ಭಾರತದಲ್ಲಿ ವರ್ಷದಲ್ಲಿ 14.1 ಲಕ್ಷ ಕ್ಯಾನ್ಸರ್ ಪ್ರಕರಣ ಪತ್ತೆ!
Karnataka News Live: World Cancer Day 2026 ಭಾರತದಲ್ಲಿ ವರ್ಷದಲ್ಲಿ 14.1 ಲಕ್ಷ ಕ್ಯಾನ್ಸರ್ ಪ್ರಕರಣ ಪತ್ತೆ!

ಬೆಳಗಾವಿ: ಸ್ಥಳೀಯ ಸಂಸ್ಥೆಗಳ ಚುನಾವಣೆಗಳಿಗೆ ಬ್ಯಾಲೇಟ್ ಪೇಪರ್ ಬಳಸಲು ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ತೆಗೆದುಕೊಂಡ ನಿರ್ಧಾರ ಹಾಸ್ಯಾಸ್ಪದವಾಗಿದೆ ಎಂದು ಸಂಸದ ಜಗದೀಶ್ ಶೆಟ್ಟರ್ ಲೇವಡಿ ಮಾಡಿದ್ದಾರೆ. ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿ, ರಾಜ್ಯದ ಮತದಾರರು ಇವಿಎಂಗಳ ಮೂಲಕವೇ 2023ರ ವಿಧಾನಸಭಾ ಚುನಾವಣೆ ಹಾಗೂ 2024ರ ಉಪಚುನಾವಣೆಗಳಲ್ಲಿ ಮತಚಲಾಯಿಸಿದರು. ಆಗ ಫಲಿತಾಂಶಗಳು ಕಾಂಗ್ರೆಸ್ಸಿಗರಿಗೆ ಅನುಕೂಲಕರವಾಗಿದ್ದಾಗ ಇವಿಎಂ ಯಂತ್ರಗಳನ್ನು ಪ್ರಶ್ನಾತೀತವಾಗಿ ಸ್ವೀಕರಿಸಿದ್ದರು. ಆದರೆ, ಏಕಾಏಕಿ ಸ್ಥಳೀಯ ಸಂಸ್ಥೆಗಳ ಚುನಾವಣೆಗಳಲ್ಲಿ ಇವಿಎಂಗಳು ಇದ್ದಕ್ಕಿದ್ದಂತೆ ಹೇಗೆ ವಿಶ್ವಾಸಾರ್ಹವಲ್ಲ ಎನಿಸಿದವು? ಎಂದು ಪ್ರಶ್ನಿಸಿದರು.
ಸುಪ್ರೀಂ ಕೋರ್ಟ್ ಪದೇ ಪದೇ ಇವಿಎಂಗಳ ಭದ್ರತೆ ಮತ್ತು ವಿಶ್ವಾಸಾರ್ಹತೆಯನ್ನು ಎತ್ತಿಹಿಡಿದಿದೆ. ಮತಗಟ್ಟೆ ವಶಪಡಿಸಿಕೊಳ್ಳುವಿಕೆ, ಅಮಾನ್ಯ ಮತಗಳು, ವಿಳಂಬಿತ ಎಣಿಕೆ ಮತ್ತು ಕುಶಲತೆಯಿಂದ ಕೂಡಿದ ಯುಗದಿಂದ ದೂರ ಸರಿಯುವುದು ಭಾರತದ ಉದ್ದೇಶವಾಗಿತ್ತು. ಸಂಪೂರ್ಣ ಜಗತ್ತು ಅಭಿವೃದ್ಧಿಯನ್ನು ಒಪ್ಪಿಕೊಂಡರೆ ಕಾಂಗ್ರೆಸ್ ಮಾತ್ರ ದಿನದಿಂದ ದಿನಕ್ಕೆ ಹಿಂದೆ ಹೋಗುತ್ತಿದೆ ಎಂದು ದೂರಿದರು.
Karnataka News Live 10 February 2026World Cancer Day 2026 ಭಾರತದಲ್ಲಿ ವರ್ಷದಲ್ಲಿ 14.1 ಲಕ್ಷ ಕ್ಯಾನ್ಸರ್ ಪ್ರಕರಣ ಪತ್ತೆ!
Karnataka News Live 10 February 2026Vijayapura - ಮಗಳೇ ಮನೆಗೆ ಬಾರಮ್ಮಾ ಅಂದ್ರೆ ನಾನು ಮೊಹಮ್ಮದ್ ಸಲೀಂನ ಹೆಂಡ್ತಿ ಎಂದ ನಿಶಾ
Karnataka News Live 10 February 2026Peenya woman murder case ಪೀಣ್ಯ ಮಹಿಳೆ ಅನುಮಾನಾಸ್ಪದ ಸಾವು - ಕೊರಳಲ್ಲಿದ್ದ ಚಿನ್ನದ ಸರ ನಾಪತ್ತೆ!
Woman Suspicious Death in Peeny ಮಾದನಾಯಕನಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯ ಹುಸ್ಕೂರಿನಲ್ಲಿ, ಶೌಚಾಲಯದಿಂದ ಹೊರಬಂದ 45 ವರ್ಷದ ಮಹಿಳೆಯೊಬ್ಬರು ಅನುಮಾನಾಸ್ಪದವಾಗಿ ಮೃತಪಟ್ಟಿದ್ದಾರೆ. ಮೃತರ 70 ಗ್ರಾಂ ಚಿನ್ನದ ಸರ ನಾಪತ್ತೆಯಾಗಿದ್ದು, ಇದು ಕೊಲೆ ಶಂಕೆಯನ್ನು ಹುಟ್ಟುಹಾಕಿದೆ.
Karnataka News Live 10 February 2026ರಾಜಧಾನಿಯಲ್ಲಿ ಡ್ರಗ್ಸ್ ಬೇಟೆ - ಸಾವಿರ ವ್ಯಸನಿಗಳ ಸೆರೆ
ರಾಜಧಾನಿಯಲ್ಲಿ ಡ್ರಗ್ಸ್ ಮಾರಾಟ ಜಾಲದ ಶೋಧನೆಗಿಳಿದಿರುವ ಪೊಲೀಸರು, ಕಳೆದೊಂದು ತಿಂಗಳ ಅವಧಿಯಲ್ಲಿ ಒಂದು ಸಾವಿರ ಡ್ರಗ್ಸ್ ವ್ಯಸನಿಗಳನ್ನು ಬಂಧಿಸಿ ₹8.19 ಕೋಟಿ ಮೌಲ್ಯದ ಡ್ರಗ್ಸ್ ಜಪ್ತಿ ಮಾಡಿದ್ದಾರೆ.
Karnataka News Live 10 February 2026ಬಿಗ್‌ಬಾಸ್ ಮುಗಿದ್ರೂ ನಿಲ್ಲದ ಕೋಳಿ ಜಗಳ? ಅಶ್ವಿನಿ ಗೌಡ ವಿರುದ್ಧ ಚೈತ್ರಾ ಕುಂದಾಪುರ ಗರಂ
ಬಿಗ್‌ಬಾಸ್ ಕನ್ನಡ ಸೀಸನ್ 12ರ ಸ್ಪರ್ಧಿ ಚೈತ್ರಾ ಕುಂದಾಪುರ, ಅಶ್ವಿನಿ ಗೌಡ ಜೊತೆಗಿನ ಜಗಳದ ಬಗ್ಗೆ ಮತ್ತೆ ಮಾತನಾಡಿದ್ದಾರೆ. ಆಟದ ವೇಳೆ ತನಗೂ ಗಾಯವಾಗಿತ್ತು ಎಂದು ಗುರುತು ತೋರಿಸಿರುವ ಚೈತ್ರಾ, ತನಗೆ ಪಿಆರ್ ಟೀಂ ಇರಲಿಲ್ಲವೆಂದು ಅಸಮಾಧಾನ ಹೊರಹಾಕಿದ್ದಾರೆ.
Karnataka News Live 10 February 2026ಬಾಯಿರುಚಿಯ ಆಸೆಗೆ ಬಿದ್ದು ಆರೋಗ್ಯ ಕೆಡಿಸಿಕೊಳ್ಳಬಾರದು - ಶಾಸಕ ಸಿ.ಎನ್.ಬಾಲಕೃಷ್ಣ
ಚನ್ನರಾಯಪಟ್ಟಣದ ನವೋದಯ ವಿದ್ಯಾ ಸಂಘದಲ್ಲಿ ಆಯೋಜಿಸಿದ್ದ ಆಹಾರ ಮೇಳವನ್ನು ಶಾಸಕ ಸಿ.ಎನ್.ಬಾಲಕೃಷ್ಣ ಉದ್ಘಾಟಿಸಿದರು. ಈ ವೇಳೆ ಆಹಾರ ಕಲಬೆರಕೆಯ ಬಗ್ಗೆ ಎಚ್ಚರಿಸಿದ ಅವರು, ಇಂತಹ ಕಾರ್ಯಕ್ರಮಗಳು ಮಕ್ಕಳಲ್ಲಿ ವ್ಯವಹಾರ ಜ್ಞಾನ ಮೂಡಿಸುತ್ತವೆ ಎಂದರು.
Karnataka News Live 10 February 2026ತಂದೆಯ ನಿರ್ಲಕ್ಷಿಸಿದ್ದಕ್ಕೆ 2.4 ಎಕರೆ ಹೋಯ್ತು
ಚೆನ್ನಾಗಿ ನೋಡಿಕೊಳ್ಳದ ಕಾರಣಕ್ಕೆ ಪುತ್ರಿಯರಿಬ್ಬರ ಹೆಸರಿಗೆ ಮಾಡಿಕೊಟ್ಟಿದ್ದ 2.4 ಎಕರೆ ಭೂಮಿಯ ಗಿಫ್ಟ್ ಡೀಡ್ ರದ್ದು ಕೋರಿ ತುಮಕೂರಿನ ವೃದ್ಧರೊಬ್ಬರು ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ಮಾನ್ಯ ಮಾಡಿದೆ.
Karnataka News Live 10 February 2026ಮೆಟ್ರೋ ಟಿಕೆಟ್ ದರ ದರ ಏರಿಕೆಯಲ್ಲಿ ಕೇಂದ್ರದ ಪಾತ್ರವಿಲ್ಲ - ಆರ್.ಅಶೋಕ್
‘ಮೆಟ್ರೊ ಟಿಕೆಟ್ ದರ ಏರಿಕೆಯಲ್ಲಿ ಕೇಂದ್ರ ಸರ್ಕಾರದ ಪಾತ್ರವಿಲ್ಲ. ಒಂದು ವೇಳೆ ಕೇಂದ್ರ ಸರ್ಕಾರ ದರ ಏರಿಕೆ ಮಾಡುವುದಾದರೆ, ಮುಂದಿನ ಎರಡು ವರ್ಷ ದರ ಏರಿಕೆ ಒಪ್ಪಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕೇಂದ್ರ ಸರ್ಕಾರಕ್ಕೆ ಪತ್ರ ಬರೆಯಲಿ’ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್.ಅಶೋಕ ಸವಾಲು
Karnataka News Live 10 February 2026ಮೆಟ್ರೋ ದರ ಏರಿಕೆ ಖಂಡಿಸಿ ಪ್ರತಿಭಟಿಸಿದ ತೇಜಸ್ವಿ ಸೂರ್ಯ ಖಾಕಿ ವಶಕ್ಕೆ
ನಮ್ಮ ಮೆಟ್ರೋ ದರ ಏರಿಕೆ ವಿರುದ್ಧ ನಗರದ ಆರ್.ವಿ. ರಸ್ತೆ ಮೆಟ್ರೋ ನಿಲ್ದಾಣದಲ್ಲಿ ರಾಜ್ಯ ಸರ್ಕಾರದ ವಿರುದ್ಧ ಖಾಲಿ ಟ್ರಂಕ್ ಪ್ರದರ್ಶಿಸಿ ಪ್ರತಿಭಟನೆ ನಡೆಸಿದ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಅವರನ್ನು ಪೊಲೀಸರು ವಶಕ್ಕೆ ಪಡೆದರು.