BBK 12 Episode Update: ಬಿಗ್ ಬಾಸ್ ಕನ್ನಡ ಸೀಸನ್ 12 ಶೋನಲ್ಲಿ ಧ್ರುವಂತ್ ಅವರು ಕಿಚ್ಚ ಸುದೀಪ್ ಮುಂದೆಯೂ, ಕ್ಯಾಮರಾ ಮುಂದೆ ಹೋಗಿ ಮನೆಗೆ ಹೋಗಬೇಕು, ಶೋ ಬಿಡ್ತೀನಿ ಎಂದು ಹೇಳುತ್ತಲೇ ಇದ್ದರು. ಈಗ ಅವರ ವಿರುದ್ಧ ರಜತ್ ಗಂಭೀರ ಆರೋಪವನ್ನು ಮಾಡಿದ್ದಾರೆ.
- Home
- News
- State
- Karnataka News Live: BBK 12 - ಸ್ಪಂದನಾ ಸೋಮಣ್ಣ ಮುಂದೆ ರಜತ್ ಅಸಭ್ಯ ವರ್ತನೆ ಮಾಡಿದ್ರು - ಧ್ರುವಂತ್ ವಿರುದ್ಧ ರಜತ್ ಆರೋಪ
Karnataka News Live: BBK 12 - ಸ್ಪಂದನಾ ಸೋಮಣ್ಣ ಮುಂದೆ ರಜತ್ ಅಸಭ್ಯ ವರ್ತನೆ ಮಾಡಿದ್ರು - ಧ್ರುವಂತ್ ವಿರುದ್ಧ ರಜತ್ ಆರೋಪ

ಬೆಂಗಳೂರು: ಆಪ್ತರ ಮದುವೆಯಲ್ಲಿ ಭಾಗಿಯಾಗಿದ್ದ ಡಿಸಿಎಂ ಡಿಕೆ ಶಿವಕುಮಾರ್ ಮತ್ತು ಸಚಿವ ಸತೀಶ್ ಜಾರಕಿಹೊಳಿ ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ. ಈ ವೇಳೆ ಡಿ.ಕೆ.ಶಿವಕುಮಾರ್ ಮಾತನಾಡಿ, ಸಚಿವ ಸತೀಶ್ ಜಾರಕಿಹೊಳಿ ಮತ್ತು ನಾವು ಸಹೋದ್ಯೋಗಿಗಳು. ನಾವು ಭೇಟಿ ಮಾಡಿದಾಗ ರಾಜ್ಯ ಮತ್ತು ಪಕ್ಷದ ವಿಚಾರ ಮಾತನಾಡಿದ್ದೇವೆ. ನಮ್ಮನ್ನು ವೈರಿಗಳಂತೆ ಏಕೆ ನೋಡುತ್ತೀರಿ? ನಾವು ಮಧ್ಯಾಹ್ನ ಸಚಿವ ಸಂಪುಟ ಸಭೆಯಲ್ಲಿ ಜತೆಗೆ ಇರುತ್ತೇವೆ. ಬೆಳಗ್ಗೆ ತಿಂಡಿಗೆ, ರಾತ್ರಿ ಊಟಕ್ಕೆ ಸೇರುತ್ತೇವೆ. ರಾಜಕೀಯದಲ್ಲಿ ಸ್ನೇಹ, ಬಾಂಧವ್ಯ, ನೆಂಟಸ್ತನ ಇದ್ದೇ ಇರುತ್ತದೆ ಎಂದು ಹೇಳಿದರು.
Karnataka News Live 7 December 2025BBK 12 - ಸ್ಪಂದನಾ ಸೋಮಣ್ಣ ಮುಂದೆ ರಜತ್ ಅಸಭ್ಯ ವರ್ತನೆ ಮಾಡಿದ್ರು - ಧ್ರುವಂತ್ ವಿರುದ್ಧ ರಜತ್ ಆರೋಪ
Karnataka News Live 7 December 2025ಗ್ಯಾಸ್ ಸಿಲಿಂಡರ್ ಸ್ಫೋಟ - ಗೋವಾ ಕ್ಲಬ್‌ನಲ್ಲಿ ಅಗ್ನಿ ಅವಘಡ, 23 ಸಾವು
ಕೆಲವರು ಬೆಂಕಿಯ ಕೆನ್ನಾಲಿಗೆಗೆ ಸಿಲುಕಿ ಮೃತರಾದ್ರೆ, ಒಂದಿಷ್ಟು ದಟ್ಟವಾದ ಹೊಗೆಯಲ್ಲಿ ಸಿಲುಕಿ ಉಸಿರಾಡಲು ಸಾಧ್ಯವಾಗದೇ ಉಸಿರುಗಟ್ಟಿ ಮೃತರಾಗಿದ್ದಾರೆ. ಕ್ಲಬ್‌ನ ಕೆಳಮಹಡಿಯಲ್ಲಿ ಈ ಸ್ಪೋಟ ಸಂಭವಿಸಿದೆ
Karnataka News Live 7 December 2025ಚಿಕ್ಕಮಗಳೂರು ಕಾಂಗ್ರೆಸ್ ಕಾರ್ಯಕರ್ತ ಗಣೇಶ್ ಗೌಡ ಹಂತಕರನ್ನು ಸುಮ್ಮನೆ ಬಿಡಲ್ಲ - ಸಿಎಂ ಡಿಸಿಎಂ
ಚಿಕ್ಕಮಗಳೂರಿನಲ್ಲಿ ನಿನ್ನೆ ನಡೆದ ಕಾಂಗ್ರೆಸ್ ಕಾರ್ಯಕರ್ತ ಗಣೇಶ್ ಗೌಡ ಹತ್ಯೆಯನ್ನು ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್, ಗೃಹ ಸಚಿವ ಡಾ.ಪರಮೇಶ್ವರ್ ಸೇರಿ ಕಾಂಗ್ರೆಸ್ ನಾಯಕರು ತೀವ್ರವಾಗಿ ಖಂಡಿಸಿದ್ದಾರೆ.
Karnataka News Live 7 December 20254,808 ಕೋಟಿ ವೆಚ್ಚದಲ್ಲಿ ರಸ್ತೆಗಳ ಅಭಿವೃದ್ಧಿ
ರಾಜಧಾನಿ ಬೆಂಗಳೂರಿನ ಮುಖ್ಯ ಮತ್ತು ಉಪ ಮುಖ್ಯ ರಸ್ತೆಗಳು ಹಾಗೂ ವಾರ್ಡ್ ರಸ್ತೆಗಳ ಅಭಿವೃದ್ಧಿಗೆ ಪ್ರಸ್ತುತ 4,808 ಕೋಟಿ ರು. ವೆಚ್ಚ ಮಾಡಲಾಗುತ್ತಿದ್ದು, ಮಳೆಗಾಲ ಆರಂಭಕ್ಕೂ ಮೊದಲು ವೈಟ್‌ಟಾಪಿಂಗ್ ಕಾಮಗಾರಿ ಹೊರತು ಪಡಿಸಿ ಉಳಿದೆಲ್ಲ ರಸ್ತೆಗಳ ಕಾಮಗಾರಿ ಪೂರ್ಣಗೊಳಿಸಲಾಗುವುದು
Karnataka News Live 7 December 2025ಮಧುಗಿರಿ - ಕದ್ದ ಎಟಿಎಂ ಭಾರ ಇದೆ ಎಂದು ರಸ್ತೆಯಲ್ಲೇ ಬಿಟ್ಟು ಹೋದರು
ಎಟಿಎಂನಲ್ಲಿನ ಹಣ ಕದಿಯಲು ಯತ್ನಿಸಿದ್ದ ದರೋಡೆಕೋರರ ತಂಡವೊಂದು ಮಷಿನ್ ಎತ್ತಿಕೊಂಡು ಹೋಗುವಾಗ ಅದು ಭಾರ ಇದೆ ಎನ್ನುವ ಕಾರಣ ಅದನ್ನು ರಸ್ತೆಯಲ್ಲೇ ಬಿಟ್ಟು ಪರಾರಿಯಾಗಿರುವ ಘಟನೆ ತುಮಕೂರು ಜಿಲ್ಲೆಯ ಮಧುಗಿರಿ ತಾಲೂಕಿನ ಪುರವರ ಗ್ರಾಮದಲ್ಲಿ ನಡೆದಿದೆ.
Karnataka News Live 7 December 2025ದಶದಿಕ್ಕುಗಳಿಂದ ಕರ್ನಾಟಕಕ್ಕೆ ಡ್ರಗ್ಸ್ ಗಂಡಾಂತರ
ವಿಶ್ವಮಟ್ಟದಲ್ಲಿ ‘ಮಾಹಿತಿ ತಂತ್ರಜ್ಞಾನ’ ವಿಸ್ತರಣೆಗೆ ಭೂಮಿಕೆ ಕಲ್ಪಿಸಿ ಖ್ಯಾತಿ ಪಡೆದಿರುವ ಕರುನಾಡು ಈಗ ಅಂತಾರಾಷ್ಟ್ರೀಯ ಡ್ರಗ್ಸ್ ಮಾಫಿಯಾಗೂ ‘ಬೃಹತ್ ಮಾರುಕಟ್ಟೆ’ಯಾಗಿ ರೂಪುಗೊಳ್ಳುತ್ತಿರುವ ಆತಂಕ ಶುರುವಾಗಿದೆ. ರಾಜ್ಯಕ್ಕೆ 10ಕ್ಕೂ ಹೆಚ್ಚು ದೇಶಗಳಿಂದ ಡ್ರಗ್ಸ್ ಪ್ರವಾಹವೇ ಬರುತ್ತಿದೆ.